ಮೂಲ್ಕಿ: ಅತಿಥಿ ಉಪನ್ಯಾಸಕಿ ನೇಣು ಬಿಗಿದುಕೊಂಡು ಆತ್ಮಹತ್ಯೆ

Spread the love

ಮೂಲ್ಕಿ: ಅತಿಥಿ ಉಪನ್ಯಾಸಕಿ ನೇಣು ಬಿಗಿದುಕೊಂಡು ಆತ್ಮಹತ್ಯೆ

ಮಂಗಳೂರು: ಅತಿಥಿ ಉಪನ್ಯಾಸಕಿಯೋರ್ವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಮೂಲ್ಕಿ ಸಮೀಪದ ಎಸ್ ಕೋಡಿಯಲ್ಲಿ ಸೋಮವಾರ ನಡೆದಿದೆ.

ಮೃತರನ್ನು ಮೂಲ್ಕಿ ಎಸ್ ಕೋಡಿ ನಿವಾಸಿ ಅಮಿತಾ ಕುಮಾರಿ (34) ಎಂದು ಗುರುತಿಸಲಾಗಿದೆ.

ಅಮಿತಾ ಕುಮಾರಿಯವರು ಅಮಿತ್ ರಾಜ್ ಶೆಟ್ಟಿಯನ್ನು 12 ವರ್ಷಗಳ ಹಿಂದೆ ಮದುವೆಯಾಗಿದ್ದು, ವಾಮನಪದವು ಸರಕಾರಿ ಪದವಿ ಕಾಲೇಜಿನಲ್ಲಿ ಕಾಮರ್ಸ್ ವಿಭಾಗದಲ್ಲಿ ಅತಿಥಿ ಉಪನ್ಯಾಸಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದು, ಸೋಮವಾರ ಇವರು ಮಲಗುವ ಕೋಣೆಯಲ್ಲಿ ಫ್ಯಾನ್ ಗೆ ಸೀರೆಯಿಂದ ನೇಣು ಬಿಗಿದುಕೊಂಡ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

ಮೂಲ್ಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love