ಮೂಲ್ಕಿ: ಮಹಿಳೆಯನ್ನು ಕೊಲೆಗೈದು ಬಾವಿಗೆ ಎಸೆಯಲು ಯತ್ನ

Spread the love

ಮೂಲ್ಕಿ: ಮಹಿಳೆಯನ್ನು ಕೊಲೆಗೈದು ಬಾವಿಗೆ ಎಸೆಯಲು ಯತ್ನ

ಮಂಗಳೂರು: ಮಹಿಳೆಯೊಬ್ಬರನ್ನು ಕೊಲೆಗೈದು ಬಳಿಕ ಬಾವಿಗೆ ಎಸೆಯಲು ಯತ್ನಿಸಿದ ಘಟನೆ ಮೂಲ್ಕಿ ಸಮೀಪದ ಶಿಮಂತೂರಿನ ಪರಂಕಿಲಾದಲ್ಲಿ ಶನಿವಾರ ತಡ ರಾತ್ರಿ ನಡೆದಿದೆ.

ಮೃತ ಮಹಿಳೆಯನ್ನು ಮೂಲ್ಕಿ ಸಮೀಪದ ಶಿಮಂತೂರಿನ ಪರಂಕಿಲಾ ನಿವಾಸಿ ಶಾರದಾ ಶೆಟ್ಟಿ ಎಂದು ಗುರುತಿಸಲಾಗಿದ್ದು, ಮಹಿಳೆ ಮನೆಯಲ್ಲಿ ಒಬ್ಬಂಟಿಯಾಗಿ ವಾಸಿಸುತ್ತಿದ್ದರು ಎನ್ನಲಾಗಿದೆ.

ಪ್ರಾಥಮಿಕ ಮೂಲಗಳ ಪ್ರಕಾರ ದುಷ್ಕರ್ಮಿಗಳು ಆಕೆಯ ಚಿನ್ನ ಮತ್ತು ಇತರ ಬೆಲೆಬಾಳುವ ವಸ್ತುಗಳನ್ನು ಕದಿಯಲು ಯೋಜಿಸಿದ್ದ ಕಳ್ಳರು ಮನೆಯೊಳಗೆ ನುಗ್ಗಿ ಕೊಲೆ ಮಾಡಿದ್ದಾರೆ ಎಂದು ಶಂಕಿಸಲಾಗಿದೆ. ಕೊಲೆ ಮಾಡಿದ ನಂತರ, ಹಲ್ಲೆಕೋರರು ಆಕೆಯ ದೇಹವನ್ನು ಮನೆಯಿಂದ ಹೊರಗೆ ಎಳೆದೊಯ್ದು ಆಕೆಯನ್ನು ಹತ್ತಿರದ ಬಾವಿಗೆ ಎಸೆಯಲು ಪ್ರಯತ್ನಿಸಿದರು, ಆದರೆ ಅದು ಯಶಸ್ವಿಯಾಗಲಿಲ್ಲ ಎನ್ನಲಾಗಿದೆ.

ಸ್ಥಳೀಯ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು ತನಿಖೆ ನಡೆಸುತ್ತಿದ್ದಾರೆ.


Spread the love