ಮೃತ ಪ್ರವೀಣ್ ಪೂಜಾರಿ ಕುಟುಂಬಕ್ಕೆ ಜಿಲ್ಲಾ ಬಿಜೆಪಿಯಿಂದ 5 ಲಕ್ಷ ಪರಿಹಾರ

Spread the love

ಮೃತ ಪ್ರವೀಣ್ ಪೂಜಾರಿ ಕುಟುಂಬಕ್ಕೆ ಜಿಲ್ಲಾ ಬಿಜೆಪಿಯಿಂದ 5 ಲಕ್ಷ ಪರಿಹಾರ

ಉಡುಪಿ: ಇತ್ತೀಚೆಗೆ ದುಷ್ರ್ಕಮಿಗಳಿಂದ ಹತ್ಯೆಯಾದ ಬಿಜೆಪಿ ಕೆಂಜೂರು ಸ್ಥಾನೀಯ ಸಮಿತಿಯ ಮಾಜಿ ಅಧ್ಯಕ್ಷ ಹಾಗೂ ಸಕ್ರೀಯ ಕಾರ್ಯಕರ್ತರಾದ ಪ್ರವೀಣ್ ಪೂಜಾರಿ ಕೆಂಜೂರು ಅವರ ಕುಟುಂಬಕ್ಕೆ ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ 5 ಲಕ್ಷ ರೂ. ಪರಿಹಾರ ನೀಡಲಾಯಿತು.

bjp-componsation-praveen-poojary

ಬಿಜೆಪಿ ಜಿಲ್ಲಾಧ್ಯಕ್ಷರಾದ ಮಟ್ಟಾರ್ ರತ್ನಾಕರ ಹೆಗ್ಡೆ, ವಿಧಾನಸಭೆಯ ವಿಪಕ್ಷ ಮುಖ್ಯ ಸಚೇತಕ, ಶಾಸಕ ವಿ. ಸುನಿಲ್ ಕುಮಾರ್, ಮಾಜಿ ಶಾಸಕ ಕೆ. ರಘುಪತಿ ಭಟ್, ರಾಜ್ಯ ಕಾರ್ಯಕಾರಿಣಿ ಸದಸ್ಯ ಕೆ. ಉದಯ ಕುಮಾರ್ ಶೆಟ್ಟಿ, ಜಿಲ್ಲಾ ಕೋಶಾಧಿಕಾರಿ ಬಿ. ರವಿ ಅಮೀನ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಯಶ್‍ಪಾಲ್ ಸುವರ್ಣ, ಜಿಲ್ಲಾ ಕಾರ್ಯದರ್ಶಿ ಪ್ರವೀಣ್ ಕುಮಾರ್ ಶೆಟ್ಟಿ ಕಪ್ಟೆಟ್ಟು, ಬಿಜೆಪಿ ಮುಖಂಡ ಬಿ. ಎನ್. ಶಂಕರ ಪೂಜಾರಿ, ಉಡುಪಿ ಗ್ರಾಮಾಂತರ ಅಧ್ಯಕ್ಷ ಪ್ರತಾಪ್ ಹೆಗ್ಡೆ, ಯುವ ಮೋರ್ಚಾ ಜಿಲ್ಲಾಧ್ಯಕ್ಷರಾದ ಶ್ರೀಶ ನಾಯಕ್, ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಗಿರೀಶ್ ಎಂ. ಅಂಚನ್, ಆದರ್ಶ ಶೆಟ್ಟಿ ಕೆಂಜೂರು, ಕೆ. ದಿನೇಶ್ ಶೆಟ್ಟಿ, ಭಾಸ್ಕರ ಪೂಜಾರಿ ಮೊದಲಾದವರು ಮೃತರ ಮನೆಗೆ ತೆರಳಿ ಪರಿಹಾರ ನೀಡಿ, ಕುಟುಂಬ ವರ್ಗಕ್ಕೆ ಧೈರ್ಯ ತುಂಬಿ ಸಾಂತ್ವಾನ ಹೇಳಿದರು.


Spread the love