ಮೇಕೆದಾಟು ಯೋಜನೆ : ತಮಿಳುನಾಡು ನಡೆ ಖಂಡಿಸಿ ಪ್ರತಿಭಟನೆ

Spread the love

ಮೇಕೆದಾಟು ಯೋಜನೆ : ತಮಿಳುನಾಡು ನಡೆ ಖಂಡಿಸಿ ಪ್ರತಿಭಟನೆ

ಚಾಮರಾಜನಗರ: ಮೇಕೆದಾಟು ಯೋಜನೆಗೆ ತಮಿಳುನಾಡು ಸರ್ಕಾರ ವಿರೋಧ ಮಾಡುತ್ತಿರುವುದನ್ನು ಖಂಡಿಸಿ ಕರ್ನಾಟಕ ಸೇನಾ ಪಡೆ ಕಾರ್ಯಕರ್ತರು ಜಿಟಿಜಿಟಿ ಮಳೆಯಲ್ಲೇ ಚಾಮರಾಜನಗರದಲ್ಲಿ ಪ್ರತಿಭಟನೆ ನಡೆಸಿದರು.

ಚಾಮರಾಜನಗರದ ಶ್ರೀ ಚಾಮರಾಜೇಶ್ವರ ಉದ್ಯಾನದ ಆವರಣದಲ್ಲಿ ಸೇನೆಯ ಅಧ್ಯಕ್ಷ ಚಾ.ರಂ.ಶ್ರೀನಿವಾಸಗೌಡ ಅವರ ನೇತೃತ್ವದಲ್ಲಿ ಜಮಾಯಿಸಿದ್ದ ಪ್ರತಿಭಟನಾಕಾರರು ಕಟ್ಟಬೇಕು ಕಟ್ಟಬೇಕು ಮೇಕೆದಾಟು ಕಟ್ಟಬೇಕು. ತಮಿಳುನಾಡು ಸರ್ಕಾರ, ಕರ್ನಾಟಕ ಸರ್ಕಾರ ಹಾಗೂ ರಾಜ್ಯದ ಎಲ್ಲಾ ಸಂಸದರು ವಿರುದ್ದ ಘೋಷಣೆ ಕೂಗಿ ಅಕ್ರೋಶ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಪ್ರತಿಭಟನೆ ನೇತೃತ್ವ ವಹಿಸಿದ್ದ ಕರ್ನಾಟಕ ಸೇನಾ ಪಡೆಯ ರಾಜ್ಯಾಧ್ಯಕ್ಷ ಚಾ.ರಂ.ಶ್ರೀನಿವಾಸಗೌಡ ಮಾತನಾಡಿ, ಕರ್ನಾಟಕದ ನೆಲೆದಲ್ಲಿ ನಿರ್ಮಿಸುವ ಮೇಕೆದಾಟು ಆಣೆಕಟ್ಟೆ ಯೋಜನೆಗೆ ತಮಿಳುನಾಡು ಸರ್ಕಾರ ವಿರೋಧ ಮಾಡುತ್ತಿದ್ದು, ತಮಿಳುನಾಡಿನ 13 ಪಕ್ಷಗಳು ಸರ್ವಪಕ್ಷ ನಿಯೋಗ ಹೋಗಿ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿ ಯಾವುದೇ ಕಾರಣಕ್ಕೂ ಮೇಕೆದಾಟು ಯೋಜನೆಗೆ ಅವಕಾಶ ನೀಡಬಾರದು. ನಾವು ಯಾವುದೇ ಕಾರಣಕ್ಕೂ ಮೇಕೆದಾಟು ಕಟ್ಟಲು ಬಿಡುವುದಿಲ್ಲ ಸರ್ವ ಪಕ್ಷಗಳ ನಿಯೋಗ ಹೋಗಿ ಪ್ರತಿಭಟನೆ ಎಂದು ಹೇಳಿದೆ ಇದು ತಮಿಳುನಾಡಿಗೆ ನಾಚಿಕೆ ಆಗಬೇಕು. ಕರ್ನಾಟಕದ ನೆಲದಲ್ಲಿ ಮೇಕೆದಾಟು ಯೋಜನೆ ಕಟ್ಟುತ್ತಿದ್ದೇನೆ. ಇದನ್ನು ತಡೆಯಲು ನೀವು ಯಾರು ಎಂದು ತಮಿಳುನಾಡು ಸರ್ಕಾರವನ್ನು ಪ್ರಶ್ನಿಸಿದರು.

ಇಷ್ಟೆಲ್ಲ ಬೆಳವಣಿಗೆ ಆಗಿದ್ದರೂ ಕೂಡ ರಾಜ್ಯದ 25 ಬಿಜೆಪಿ ಸಂಸದರು ಇದರ ಬಗ್ಗೆ ಧ್ವನಿ ಎತ್ತಿಲ್ಲ. ಇವರಿಗೆ ರಾಜ್ಯದ ಬಗ್ಗೆ ಕಾಳಜಿ ಇಲ್ಲ. ಈ ವಿಷಯದಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ. ರಾಜ್ಯ ಸರ್ಕಾರ ತಕ್ಣಣವೇ ಮೇಕೆದಾಟು ಯೋಜನೆ ಕಾಮಗಾರಿ ಆರಂಭಿಸಬೇಕು. ಇಲ್ಲದಿದ್ದರೆ ರಾಜ್ಯಾದ್ಯಂತ ಕನ್ನಡಪರ ಸಂಘಟನೆಗಳು ಉಗ್ರ ಪ್ರತಿಭಟನೆ ಮಾಡುವುದಾಗಿ ಚಾ.ರ.‌ಶ್ರೀನಿವಾಸಗೌಡ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

ಪ್ರತಿಭಟನೆಯಲ್ಲಿ ನಿಜಧ್ವನಿ ಸಿ.ಎನ್. ಗೋವಿಂದರಾಜು, ಕರ್ನಾಟಕ ಕನ್ನಡ ರಕ್ಷಣಾ ವೇದಿಕೆಯ ಅಧ್ಯಕ್ಷ ಚಾ.ಗು.ನಾಗರಾಜ್, ಮೈಸೂರು ಮತ್ತು ಚಾಮರಾಜನಗರ ಜಿಲ್ಲಾ ಒಕ್ಕಲಿಗರ ಸಂಘದ ಸಹ ಕಾರ್ಯದರ್ಶಿ ಪಿ.ಎಚ್.ರಾಜು, ಗು.ಪುರುಪೋತ್ತಮ್, ತಾಂಡವಮೂರ್ತಿ, ನಂಜುಂಡ, ವೀರಭದ್ರ ಇತರರು ಭಾಗವಹಿಸಿದ್ದರು.


Spread the love

1 Comment

  1. Tamlu nadna yella kaveri yojenegallannu nillisalu suprime courtnalli dave hoodabeku. Ivattu nillisilla andare nale avara yella yojanegaligu neerannu namaga illada bidabekuthade

Comments are closed.