ಮೇ 10 ರಂದು ಸಾರ್ವತ್ರಿಕ ರಜೆ ಘೋಷಣೆ

Holiday
Spread the love

ಮೇ 10 ರಂದು ಸಾರ್ವತ್ರಿಕ ರಜೆ ಘೋಷಣೆ

ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಯು ಮೇ 10 ರಂದು ನಡೆಯಲಿದ್ದು, ಮತದಾರರು ಮತ ಚಲಾಯಿಸಲು ಅನುಕೂಲವಾಗುವಂತೆ ಆಯಾ ಮತ ಕ್ಷೇತ್ರಗಳ ಎಲ್ಲಾ ಕೇಂದ್ರ ಹಾಗೂ ರಾಜ್ಯ ಸರ್ಕಾರಿ ಕಚೇರಿಗಳಿಗೆ, ಶಾಲಾ ಕಾಲೇಜುಗಳಿಗೆ, ವಿವಿಧ ಸಂಘ ಸಂಸ್ಥೆಗಳಿಗೆ ಮತ್ತು ಖಾಸಗಿ ಸಂಸ್ಥೆಗಳಿಗೆ (ಅನುದಾನಿತ ಶಿಕ್ಷಣ ಸಂಸ್ಥೆಗಳು ಒಳಗೊಂಡಂತೆ) ಸರ್ಕಾರವು ಆಯಾ ಚುನಾವಣಾ ಕ್ಷೇತ್ರಗಳಲ್ಲಿ ಚುನಾವಣೆ ನಡೆಯುವ ಮೇ 10ರಂದು ಸಾರ್ವತ್ರಿಕ ರಜೆ ಘೋಷಿಸಲಾಗಿದೆ.

ಈ ರಜೆಯು ತುರ್ತು ಸೇವೆಗಳಿಗೆ ಅನ್ವಯಿಸುವುದಿಲ್ಲ. ಈ ಚುನಾವಣಾ ಕಾರ್ಯಗಳಿಗೆ ನಿಯೋಜಿಸಲ್ಪಟ್ಟ ಎಲ್ಲಾ ಸರ್ಕಾರಿ ನೌಕರರು ಚುನಾವಣಾ ಕಾರ್ಯಕ್ಕೆ ಹಾಜರಾಗತಕ್ಕದ್ದು, ಚುನಾವಣಾ ಕ್ಷೇತ್ರಗಳಲ್ಲಿ ಮತದಾನವು ಸುಸೂತ್ರವಾಗಿ ನಡೆಯುವ ಮತಗಟ್ಟೆಯನ್ನು ಸರ್ಕಾರಿ ಕಚೇರಿಗಳಲ್ಲಿ ಹಾಗೂ ಸರ್ಕಾರಿ ಶಾಲೆಗಳಲ್ಲಿ ಸ್ಥಾಪಿಸಿದ್ದಲ್ಲಿ ಅಂತಹ ಕಚೇರಿ ಹಾಗೂ ಶಾಲೆಗಳಿಗೆ ಮೇ 9 ರ ಮಂಗಳವಾರದಂದು ಪೂರ್ವ ತಯಾರಿಗಾಗಿ ಹಾಗೂ ಮೇ 13 ರಂದು ಮತ ಎಣಿಕೆ ನಡೆಯುವ ಕೇಂದ್ರಗಳಲ್ಲಿ ಮಾತ್ರ ರಜೆ ಘೋಷಿಸುವ ಅವಶ್ಯಕತೆ ಇದ್ದಲ್ಲಿ ಸಂಬಂಧಪಟ್ಟ ಚುನಾವಣಾಧಿಕಾರಿಗಳು ಕ್ರಮ ತೆಗೆದುಕೊಳ್ಳುವಂತೆ ಸೂಚಿಸಲಾಗಿದೆ.


Spread the love