ಮೇ 13 ರಂದು ಉಡುಪಿಯಲ್ಲಿ ಆಯೋಜಿಸಿದ್ದ ವಕ್ಫ್ ಉಳಿಸಿ ಸಂವಿಧಾನ ರಕ್ಷಿಸಿ ಹೋರಾಟ ಮುಂದೂಡಿಕೆ

Spread the love

ಮೇ 13 ರಂದು ಉಡುಪಿಯಲ್ಲಿ ಆಯೋಜಿಸಿದ್ದ ವಕ್ಫ್ ಉಳಿಸಿ ಸಂವಿಧಾನ ರಕ್ಷಿಸಿ ಹೋರಾಟ ಮುಂದೂಡಿಕೆ

ಉಡುಪಿ: ಕೇಂದ್ರ ಸರ್ಕಾರ ಜಾರಿಗೊಳಿಸಲು ಉದ್ದೇಶಿಸಿರುವ ಸಂವಿಧಾನ ವಿರೋಧಿ “ವಕ್ಸ್ ತಿದ್ದುಪಡಿ ಕಾಯ್ದೆ-2025” ಯ ವಿರುದ್ದ ಇದೇ ತಿಂಗಳ 13ನೇ ತಾರೀಖಿನಂದು ಮಂಗಳವಾರ ಸಂಜೆ 4:00 ಗಂಟೆಗೆ ಉಡುಪಿಯ ಮಿಷನ್ ಕಂಪೌಂಡಿನ ಕ್ರಿಶ್ಚಿಯನ್ ಪದವಿ ಪೂರ್ವ ಕಾಲೇಜ್ ಮೈದಾನದಲ್ಲಿ ಬೃಹತ್ ಪ್ರತಿಭಟನಾ ಸಭೆಯನ್ನು ಮುಂದೂಡಲಾಗಿದೆ ಎಂದು ಸದಸ್ಯರಾದ ಮುಸ್ತಾಕ್ ಹೆನ್ನಾಬೈಲು ಹೇಳಿದರು.

ಅವರು ಪ್ರೆಸ್ ಕ್ಲಬ್ ನಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಕೇಂದ್ರ ಸರ್ಕಾರ ಜಾರಿಗೊಳಿಸಲು ಉದ್ದೇಶಿಸಿರುವ ಸಂವಿಧಾನ ವಿರೋಧಿ “ವಕ್ಸ್ ತಿದ್ದುಪಡಿ ಕಾಯ್ದೆ-2025” ರ ವಿನ ಇದೇ ತಿಂಗಳ 13ನೇ ತಾರೀಖಿನಂದು ಮಂಗಳವಾರ ಸಂಜೆ 4:00 ಗಂಟೆಗೆ ಉಡುಪಿಯ ಮಿಷನ್ ಕಂಪೌಂಡಿನ ಕ್ರಿಶ್ಚಿಯನ್ ಪದವಿ ಪೂರ್ವ ಕಾಲೇಜ್ ಮೈದಾನದಲ್ಲಿ ಬೃಹತ್ ಪ್ರತಿಭಟನಾ ಸಭೆಯನ್ನು “ವಕ್ಸ್ ಉಳಿಸಿ, ಸಂವಿಧಾನ ರಕ್ಷಿಸಿ” ಹೋರಾಟ ಸಮಿತಿ ಹಮ್ಮಿಕೊಂಡಿತ್ತು. ಇದಕ್ಕೆ ಸಂಬಂಧಿಸಿದಂತೆ ಜಾತ್ಯತೀತ ಮನೋಭಾವದ ಸಂವಿಧಾನ ಪ್ರೇಮಿ ಸಮಾನ ಮನಸ್ಕ ಸಂಘಟನೆಗೆ ರಾಜಕೀಯ ಪಕ್ಷಗಳು, ಚಿಂತಕರು ಮತ್ತು ಹೋರಾಟಗಾರರು ಒಂದುಗೂಡಿ ಹಲವಾರು ಪೂರ್ವಭಾವಿ ಸಭೆಗಳನ್ನು ನಡೆಸಿ ತಯಾರಿ ಮತ್ತು ಪ್ರಚಾರಗಳನ್ನು ನಡೆಸಲಾಗಿತ್ತು. ಪ್ರತಿಭಟನೆಗೆ ಜಾತಿ, ಧರ್ಮ, ಲಿಂಗ, ಭಾಷೆ, ಪಂಗಡಗಳ ಭೇದವಿಲ್ಲದೆ ಜಿಲ್ಲ ಎಲ್ಲ ಭಾಗಗಳಿಂದಲೂ ದೊಡ್ಡ ಸಂಖ್ಯೆಯಲ್ಲಿ ಕೇಂದ್ರ ಸರ್ಕಾರದ ಈ ಕರಾಳ ಕಾಯ್ದೆಯನ್ನು ವಿರೋಧಿಸುವ ಪ್ರಜ್ಞಾವಂತರು -ಸಂವಿಧಾನ ಪ್ರೇಮಿಗಳು ಆಗಮಿಸುವ ನಿರೀಕ್ಷೆಯಿತ್ತು. ಪ್ರಚಾರದ ಸಂದರ್ಭದಲ್ಲಿ ಸಮಾಜದ ಸರ್ವ ವರ್ಗದವರೂ ಈ ಮಟ್ಟದಲ್ಲಿ ಕಾರ್ಯಕ್ರಮಕ್ಕೆ ಬೆಂಬಲ ವ್ಯಕ್ತಪಡಿಸಿದ್ದು ಮಾತ್ರವಲ್ಲ ನಿರೀಕ್ಷೆಗೂ ಮೀರಿ ಸ್ಪಂದನೆ ವ್ಯಕ್ತವಾಗಿತ್ತು.

ಆದರೆ ಈ ಮಧ್ಯೆ, ಕಾಶ್ಮೀರದ ಪೆಹಲ್ಲಾಮಿನಲ್ಲಿ ನಡೆದ ಉಗ್ರವಾದಿಗಳ ಭೀಕರ ಹತ್ಯಾಕಾಂಡಕ್ಕೆ ಪ್ರತಿಯಾಗಿ ಮೊನ್ನೆ ದೇಶದ ಸೇನೆಯು ಪಾಕಿಸ್ತಾನದಲ್ಲಿರುವ ಉಗ್ರವಾದಿ ನೆಲೆಗಳ ಮೇಲೆ ಯೋಜಿತ ಮತ್ತು ನಿಖರ ದಾಳಿಯನ್ನು ನಡೆಸಿ ಭಯೋತ್ಪಾದನೆಯ ವಿರುದ್ಧವಾಗಿ ನಡೆಸಿರುವ ಈ ವೈಮಾನಿಕ ದಾಳಿಯ ಸಂದರ್ಭದಲ್ಲಿ ದೇಶದ ಸೇನೆಗೆ ನೈತಿಕ ಬಲ ನೀಡುವ ನಮ್ಮೆಲ್ಲರ ಜವಾಬ್ದಾರಿ. ಈ ವಿಚಾರದಲ್ಲಿ ಸರ್ಕಾರದ ಪರ ನಮ್ಮ ಬೆಂಬಲವನ್ನು ಸೂಚಿಸುತ್ತಾ ನಾವು ಪೂರ್ವ ನಿಗದಿತವಾ ಪ್ರತಿಭಟನೆಯನ್ನು ಮುಂದೂಡಲು ನಿರ್ಧರಿಸಿರುತ್ತೇವೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ, ವಕ್ಸ್ ಉಳಿಸಿ ಸಂವಿಧಾನ ರಕ್ಷಿಸಿ ಹೋರಾಟ ಸಮಿತಿಯ ಸದಸ್ಯರಾದ ನಾಗೇಶ್ ಉದ್ಯಾವರ, ಮೊಹಮ್ಮದ್ ಇದ್ರೀಸ್ ಹೂಡೆ, ರಮೇಶ್ ಕಾಂಚನ್, ಇಸ್ಮಾಯಿಲ್ ಹುಸೇನ್, ಸುಂದರ್ ಮಾಸ್ತರ್ ಬಿ.ಎಸ್.ಎಫ್. ರಫೀಕ್ ಇತರರು ಉಪಸ್ಥಿತರಿದ್ದರು


Spread the love
Subscribe
Notify of

0 Comments
Inline Feedbacks
View all comments