ಮೇ16: ದಕ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಪ್ರವಾಸ
ಮಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರು ಮೇ 16 ರಂದು ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸಲಿದ್ದಾರೆ.
ಮೇ 16 ರಂದು ಬೆಳಿಗ್ಗೆ 6:55 – ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಆಗಮನ, 7:25- ಸಕ್ರ್ಯೂಟ್ ಹೌಸ್ ಆಗಮನ, 10 – ಕದ್ರಿ ಉದ್ಯಾನವನದಲ್ಲಿ ಮಾವು ಮೇಳ 2025 ಉದ್ಘಾಟನೆ, 10:30 – ಸನ್ಮಾನ್ಯ ಮುಖ್ಯಮಂತ್ರಿಗಳು ಶಿಲನ್ಯಾಸ / ಲೋಕಾರ್ಪಣೆ ಮಾಡುವ ಕಬಡ್ಡಿ ಮತ್ತು ಬ್ಯಾಡ್ಮಿಂಟನ್ ಒಳಾಂಗಣ ಕ್ರೀಡಾಂಗಣ, ಪ್ರಜಾಸೌಧ ಕಟ್ಟಡ, ನಾಡಕಛೇರಿ, ಜಿಲ್ಲಾಧಿಕಾರಿ ಕಚೇರಿಯ ಕಟ್ಟಡ, ಸರ್ಕಾರದ ವಿವಿಧ ಸೌಲಭ್ಯಗಳ ವಿತರಣಾ ಸ್ಥಳಗಳ ಪರಿಶೀಲನೆ, ಮಧ್ಯಾಹ್ನ 2- ವಿಮಾನ ನಿಲ್ದಾಣದಲ್ಲಿ ಮುಖ್ಯಮಂತ್ರಿಗಳನ್ನು ಸ್ವಾಗತ. 2:45- ನಗರದ ಉರ್ವಾದಲ್ಲಿರುವ ಕಬ್ಬಡಿ ಮತ್ತು ಬ್ಯಾಡ್ಮಿಂಟನ್ ಒಳಾಂಗಣ ಕ್ರೀಡಾಂಗಣ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗಿ, 3:30 – ಪಡೀಲ್ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿರುವ ಪ್ರಜಾಸೌಧ ಕಟ್ಟಡ, ಹಳೇ ಜಿಲ್ಲಾಧಿಕಾರಿಗಳ ಕಚೇರಿಯ ಕಟ್ಟಡ, ನಾಡಕಛೇರಿ ಗುರುಪುರ, ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆಗಳ ಶಿಲಾನ್ಯಾಸ ಹಾಗೂ ಲೋಕಾರ್ಪಣೆ ಕಾರ್ಯಕ್ರಮ, ಸಂಜೆ 4- ಮುಖ್ಯಮಂತ್ರಿಗಳೊಂದಿಗೆ ಜಿಲ್ಲಾಧಿಕಾರಿಗಳು ದಕ್ಷಿಣ ಕನ್ನಡ ಜಿಲ್ಲೆ ಇವರ ಕೊಠಡಿ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗಿ ಮತ್ತು ಕಟ್ಟಡ ವೀಕ್ಷಣೆ, 4:10- ಪಡೀಲ್ ಜಿಲ್ಲಾಧಿಕಾರಿಗಳ ಕಚೇರಿ ಸಂಕೀರ್ಣದಲ್ಲಿ ಸನ್ಮಾನ್ಯ ಮುಖ್ಯಮಂತ್ರಿಗಳೊಂದಿಗೆ ಸರ್ಕಾರದ ವಿವಿಧ ಸೌಲಭ್ಯಗಳ ವಿತರಣಾ ಸಭಾ ಕಾರ್ಯಕ್ರಮ, 5:50 – ಸನ್ಮಾನ್ಯ ಮುಖ್ಯಮಂತ್ರಿಗಳೊಂದಿಗೆ ಪ್ರಜಾಸೌಧ ಕಚೇರಿ ಕಟ್ಟಡದ ವಿದ್ಯುತ್ ದೀಪಲಂಕಾರವಾದ ಚಾಲನಾ ಕಾರ್ಯದಲ್ಲಿ ಭಾಗಿ, 6:45- ಉಳ್ಳಾಲ ಉರೂಸ್ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.