
ಮೈಸೂರಿನಲ್ಲಿ ಇಬ್ಬರು ಸರಗಳ್ಳರ ಬಂಧನ
ಮೈಸೂರು: ಮೈಸೂರು ನಗರ ಸೇರಿದಂತೆ ವಿವಿಧೆಡೆ ಸರಗಳ್ಳತನ ನಡೆಸಿ ಎಸ್ಕೇಪ್ ಆಗುತ್ತಿದ್ದ ಇಬ್ಬರು ಖದೀಮರನ್ನು ಪೊಲೀಸರು ಬಂಧಿಸಿದ್ದು ಆರೋಪಿಗಳಿಂದ 14 ಲಕ್ಷ ರೂ ಮೌಲ್ಯದ ಚಿನ್ನಾಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ.
ಈ ಕಳ್ಳರು ನಗರ ಸೇರಿದಂತೆ ವಿವಿಧ ಭಾಗಗಳಲ್ಲಿ ಸರಗಳ್ಳತನ ನಡೆಸುತ್ತಿದ್ದರು, ಬಂಧಿತ ಸರಗಳ್ಳರನ್ನು ಬಂಧಿಸಿರುವ ಜಯಲಕ್ಷ್ಮೀಪುರಂ ಠಾಣೆ ಪೊಲೀಸರು ಬಂಧಿತರಿಂದ 14 ಲಕ್ಷ ರೂ. ಮೌಲ್ಯದ 8 ಚಿನ್ನದ ಸರ ಹಾಗೂ ಒಂದು ದ್ವಿಚಕ್ರ ವಾಹನ ವಶಪಡಿಸಿಕೊಂಡಿದ್ದಾರೆ.
ಇತ್ತೀಚೆಗೆ ಜಯಲಕ್ಷ್ಮೀಪುರಂ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಸರಗಳ್ಳತನ ಪ್ರಕರಣ ಸಂಬಂಧ ತನಿಖೆ ಆರಂಭಿಸಿದ್ದ ಪೊಲೀಸರು ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದು, ಈ ವೇಳೆ ಇಬ್ಬರು ಆರೋಪಿಗಳು ಮತ್ತೊರ್ವನ ಜತೆ ಸೇರಿ ವಿವಿಧೆಡೆ ಸರಗಳ್ಳತನ ನಡೆಸಿರುವುದು ಬೆಳಕಿಗೆ ಬಂದಿದೆ.
ಆರೋಪಿಗಳು ಮೈಸೂರು ನಗರ, ಗ್ರಾಮಾಂತರ ಪ್ರದೇಶ ಸೇರಿದಂತೆ ಚಾಮರಾಜನಗರ, ಮಂಡ್ಯ ಜಿಲ್ಲೆಗಳಲ್ಲಿ ಸರಗಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದು, ಬಂಧಿತ ಇಬ್ಬರಿಂದ 14 ಲಕ್ಷ ರೂ. ಮೌಲ್ಯದ 8 ಚಿನ್ನದ ಸರಗಳು ಹಾಗೂ ಕೃತ್ಯಕ್ಕೆ ಬಳಸಿದ ಒಂದು ದ್ವಿಚಕ್ರ ವಾಹನವನ್ನು ವಶಪಡಿಸಿಕೊಂಡಿದ್ದಾರೆ. ಪ್ರಕರಣ ಸಂಬಂಧ ಮತ್ತೊಬ್ಬ ಆರೋಪಿ ತಲೆ ಮರೆಸಿಕೊಂಡಿದ್ದು, ಆತನ ಪತ್ತೆ ಕಾರ್ಯ ಮುಂದುವರೆದಿದೆ.
ಈ ಪತ್ತೆ ಕಾರ್ಯದಿಂದ ಮೈಸೂರು ನಗರದ ಜಯಲಕ್ಷ್ಮೀಪುರಂ, ಕುವೆಂಪುನಗರ, ಆಲನಹಳ್ಳಿ, ಉದಯಗಿರಿ ಪೊಲೀಸ್ ಠಾಣೆ ಹಾಗೂ ನಂಜನಗೂಡು ಟೌನ್ ಠಾಣೆ, ಕೆ.ಆರ್.ನಗರ ಠಾಣೆ, ಟಿ.ನರಸೀಪುರ ಠಾಣೆ, ಕೊಳ್ಳೇಗಾಲ ಪಟ್ಟಣ ಠಾಣೆಗಳಲ್ಲಿ ತಲಾ ಒಂದೊಂದು ಸರಗಳ್ಳತನ ಪ್ರಕರಣಗಳು ಪತ್ತೆಯಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.