
ಮೈಸೂರಿನಲ್ಲಿ ಚಾಮುಂಡೇಶ್ವರಿ ದರ್ಶನ ಪಡೆದ ಸಿಎಂ
ಮೈಸೂರು: ರಾಜ್ಯದ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಮೊದಲ ಬಾರಿಗೆ ಅರಮನೆನಗರಿಗೆ ಭೇಟಿ ನೀಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಚಾಮುಂಡಿಬೆಟ್ಟಕ್ಕೆ ತೆರಳಿ ತಾಯಿ ಚಾಮುಂಡೇಶ್ವರಿಯ ದರ್ಶನ ಪಡೆದಿದ್ದಾರೆ.
ಮುಖ್ಯಮಂತ್ರಿಯವರು ಭೇಟಿ ನೀಡುತ್ತಿರುವ ಹಿನ್ನಲೆಯಲ್ಲಿ ಇಡೀ ಚಾಮುಂಡಿಬೆಟ್ಟ ಮುಂಜಾನೆಯಿಂದಲೇ ಮೈಕೊಡವಿಕೊಂಡು ಎದ್ದಂತೆ ಭಾಸವಾಗುತ್ತಿತ್ತು. ಸ್ವಚ್ಛ ಮತ್ತು ತಳಿರು ತೋರಣದಿಂದ ಕಂಗೊಳಿಸುತ್ತಿತ್ತು. ಮುಖ್ಯಮಂತ್ರಿಗಳು ಬೆಟ್ಟಕ್ಕೆ ಆಗಮಿಸುತ್ತಿದ್ದಂತೆಯೇ ಅವರಿಗೆ ಪೂರ್ಣಕುಂಭ ಸ್ವಾಗತ ನೀಡಿ ಬರಮಾಡಿಕೊಳ್ಳಲಾಯಿತು. ನಂತರ ದೇಗುಲದ ಒಳಗೆ ತೆರಳಿದ ಅವರು ತಾಯಿ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿ ದರ್ಶನ ಪಡೆದು ರಾಜ್ಯದಲ್ಲಿ ಮಳೆ ಬೆಳೆ ಚೆನ್ನಾಗಿ ಆಗಿ ಸುಭೀಕ್ಷೆಯಿಂದ ಕೂಡಿರಲಿ, ಜನರಲ್ಲಿ ಸುಖ ಸಂತೋಷ ವೃದ್ಧಿಯಾಗಲಿ, ರಾಜ್ಯವನ್ನು ಆವರಿಸಿರುವ ಕೊರೊನಾ ದೂರವಾಗಲಿ ಎಂದು ಪ್ರಾರ್ಥಿಸಿದರು. ಈ ಬಾರಿ ಜಿಲ್ಲೆಗೆ ಮುಖ್ಯಮಂತ್ರಿಗಳು ರಸ್ತೆ ಮೂಲಕವೇ ಆಗಮಿಸಿದ್ದು ವಿಶೇಷವಾಗಿತ್ತು.
ಈ ವೇಳೆ ಸಚಿವರಾದ ಎಸ್.ಟಿ.ಸೋಮಶೇಖರ್, ಭೈರತಿ ಬಸವರಾಜ್, ವಿ.ಸೋಮಣ್ಣ, ಮುರುಗೇಶ್ ನಿರಾಣಿ, ಡಾ.ಕೆ.ಸುಧಾಕರ್, ಡಾ.ನಾರಾಯಣಗೌಡ, ಮುನಿರತ್ನ, ಗೋಪಾಲಯ್ಯ. ಅವರು ಇದ್ದರು