ಮೈಸೂರಿನ ಯುವ ದಸರಾದಲ್ಲಿ ಅಪ್ಪು ನಮನ

Spread the love

ಮೈಸೂರಿನ ಯುವ ದಸರಾದಲ್ಲಿ ಅಪ್ಪು ನಮನ

ಮೈಸೂರು: ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಗಳಲ್ಲಿ ಒಂದಾದ, ಯುವಕರ ನೆಚ್ಚಿನ ಕಾರ್ಯಕ್ರಮ ಯುವ ದಸರಾ ಸೆ.27ರಿಂದ ಅ.3ರವರೆಗೆ ನಡೆಯಲಿದ್ದು, ಯುವ ದಸರಾದ 2ನೇ ದಿನದ ಕಾರ್ಯಕ್ರಮದಲ್ಲಿ ನಟ ಪುನೀತ್ ರಾಜ್‌ಕುಮಾರ್‌ಗೆ ಗೌರವ ಸಲ್ಲಿಸಲಾಗುತ್ತಿದೆ.

ಸೆ.27ರಂದು ಸಂಜೆ 6ಗಂಟೆಗೆ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಉದ್ಘಾಟಿಸುವರು. ನಟ ಸುದೀಪ್ ತಾರಾ ಮೆರುಗು ನೀಡುವರು. ಉದ್ಘಾಟನೆ ಬಳಿಕ ಶ್ರೀಧರ್ ಜೈನ್ ನೃತ್ಯ ತಂಡ, ರಘುಧೀಕ್ಷಿತ್ ಹಾಗೂ ಗಾಯಕಿ ಮಂಗ್ಲಿ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ.

ಯುವ ದಸರಾದ 2ನೇ ದಿನದ ಕಾರ್ಯಕ್ರಮದಲ್ಲಿ ನಟ ಪುನೀತ್ ರಾಜ್‌ಕುಮಾರ್‌ಗೆ ಗೌರವ ಸಲ್ಲಿಸಲಾಗುತ್ತಿದ್ದು, ಗಾಯಕರಾದ ಗುರುಕಿರಣ್, ವಿಜಯಪ್ರಕಾಶ್, ಕುನಾಲ್ ಗಾಂಜಾವಾಲ ಗಾಯನದ ಮೂಲಕ ಅಪ್ಪು ಅವರಿಗೆ ನಮನ ಸಲ್ಲಿಸಲಿದ್ದಾರೆ. ಮೂರನೇ ದಿನವಾದ 29ರಂದು ಲೇಸರ್ ಶೋ, ಸಿಗ್ನೇಚರ್ ಗ್ರೂಪ್ ನೃತ್ಯ ತಂಡ, ಕನ್ನಿಕಾ ಕಪೂರ್ ಮತ್ತು ಅಸೆಂಟ್ ತಂಡ ಕಾರ್ಯಕ್ರಮ ನಡೆಸಿಕೊಡಲಿದೆ. ೩೦ರಂದು ಸ್ಯಾಂಡಲ್‌ವುಡ್ ನೈಟ್ ಇರಲಿದ್ದು, ಕನ್ನಡದ ನಟಿ ನಟಿಯರು ಭಾಗವಹಿಸಲಿದ್ದಾರೆ. ಚಿತ್ರೀಕರಣವಿರುವ ಕಾರಣ ಕೆಲ ಕಲಾವಿದರು ಅಂತಿಮವಾಗಿಲ್ಲ. ಎರಡು ಮೂರು ದಿನಗಳಲ್ಲಿ ಯವ್ಯಾವ ಕಲಾವಿದರು ಭಾಗವಹಿಸಲಿದ್ದಾರೆ.

ಅ.1ರಂದು ಗಾಯಕಿ ಡಾ.ಶಮಿತಾ ಮಲ್ನಾಡ್ ತಮ್ಮ ಗಾಯನದ ಮೂಲಕ ರಂಜಿಸಲಿದ್ದಾರೆ. ಅ.2ರಂದು ಪವನ್ ಡ್ಯಾನ್ಸರ್, ನಟಿ ಹರ್ಷಿಕಾ ಪೂಣಚ್ಚ, ನಟ ವಿಜಯ ರಾಘವೇಂದ್ರ, ಅಮಿತ್ ತ್ರಿವೇದಿ ಪಾಲ್ಗೊಳ್ಳುವರು. ಅಂತಿಮ ದಿನವಾದ ಅ.೩ರಂದು ಸುಪ್ರಿಯಾ ರಾಮ್ ಮತ್ತು ಮಹಿಳಾ ಬ್ಯಾಂಡ್ ತಂಡ ಕಾರ್ಯಕ್ರಮ ನಡೆಸಿಕೊಡಲಿದೆ.


Spread the love

Leave a Reply

Please enter your comment!
Please enter your name here