ಮೈಸೂರು ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಮುಂದುವರಿಕೆ

Spread the love

ಮೈಸೂರು ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಮುಂದುವರಿಕೆ

ಮೈಸೂರು: ಕೋವಿಡ್ ಸೋಂಕು ಹರಡುವುದನ್ನು ತಡೆಗಟ್ಟುವ ಸಲುವಾಗಿ ಹಾಗೂ ಸಾರ್ವಜನಿಕರ ಸುರಕ್ಷತೆ ಮತ್ತು ಆರೋಗ್ಯದ ಹಿತ ದೃಷ್ಟಿಯಿಂದ ಜಿಲ್ಲೆಯಲ್ಲಿ ಜುಲೈ 7ರ ವರೆಗೆ ಬೆಳ್ಳಿಗ್ಗೆ 6 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ನಿಷೇಧಾಜ್ಞೆಯನ್ನು ಜಾರಿಗೊಳಿಸಿ ನಗರ ಪೊಲೀಸ್ ಆಯುಕ್ತರಾದ ಡಾ.ಚಂದ್ರಗುಪ್ತ ಆದೇಶ ನೀಡಿದ್ದಾರೆ

ಮೈಸೂರು ಜಿಲ್ಲೆಗೆ ಸಂಬಂಧಿಸಿದಂತೆ ಯಾವುದೇ ವಿನಾಯಿತಿ ನೀಡದೆ ಈಗಾಗಲೇ ಇರುವ ನಿರ್ಬಂಧಗಳನ್ನು ಅದೇ ರೀತಿ ಮುಂದುವರಿಸಲು ಆದೇಶಿಸಿರುವುದರಿಂದ ಕೋವಿಡ್ ಸೋಂಕನ್ನು ತಡೆಯಲು ಹೆಚ್ಚಿನ ಕಠಿಣ ಕ್ರಮಗಳನ್ನು ಕೈಗೊಳ್ಳಲಾಗಿದೆ.

ಸಾರ್ವಜನಿಕರು ಯಾವುದೇ ಕಾರಣಕ್ಕೂ 5 ಜನರಿಗಿಂತ ಹೆಚ್ಚಾಗಿ ಒಟ್ಟಾಗಿ ಸೇರುವಂತಿಲ್ಲ. ಸಾರ್ವಜನಿಕ ಪ್ರದೇಶಗಳಲ್ಲಿ ಕನಿಷ್ಠ 6 ಅಡಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಮತ್ತು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಎಂದು ಸೂಚನೆ ನೀಡಿದ್ದಾರೆ.


Spread the love