ಮೈಸೂರು ದಸರಾಕ್ಕೆ ಪ್ರಧಾನಿ ಮೋದಿ ಬರುತ್ತಾರಾ?

Spread the love

ಮೈಸೂರು ದಸರಾಕ್ಕೆ ಪ್ರಧಾನಿ ಮೋದಿ ಬರುತ್ತಾರಾ?

ಮೈಸೂರು: ಮೈಸೂರು ದಸರಾದ ಜಂಬೂ ಸವಾರಿಗೆ ಚಾಲನೆ ನೀಡಲು ಪ್ರಧಾನಿ ನರೇಂದ್ರ ಮೋದಿ ಆಗಮಿಸುತ್ತಿದ್ದಾರೆ ಎಂಬ ಸುದ್ದಿ ಹರಡಿದೆಯಾದರೂ ಈ ಬಗ್ಗೆ ಪ್ರಧಾನಿ ಕಚೇರಿಯಿಂದ ಯಾವುದೇ ರೀತಿಯ ಸ್ಪಷ್ಟ ಸಂದೇಶ ಬಂದಿಲ್ಲ ಎನ್ನಲಾಗಿದೆ.

ಈಗಾಗಲೇ ದಸರಾ ಉದ‍್ಘಾಟನೆಗೆ  ಉದ್ಘಾಟನೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಆಗಮಿಸುವುದು ಖಚಿತವಾಗಿದೆ. ಸೆ.26ರಂದು ಆಗಮಿಸಲಿರುವ ರಾಷ್ಟ್ರಪತಿಗಳು ಚಾಮುಂಡಿಬೆಟ್ಟದಲ್ಲಿ  ದಸರಾಗೆ ವಿಧ್ಯುಕ್ತ ಚಾಲನೆ ನೀಡಲಿದ್ದಾರೆ. ಈ ನಡುವೆ ಪ್ರಧಾನಿ ನರೇಂದ್ರ ಮೋದಿ ಅವರು ಅ.5ರಂದು ನಡೆಯಲಿರುವ ವಿಜಯದಶಮಿಯ ಜಂಬೂಸವಾರಿಗೆ ಆಗಮಿಸಿ ಚಾಲನೆ ನೀಡಲಿದ್ದಾರೆ ಎಂಬ ಸುದ್ದಿ ಹರಡಿತ್ತು.

ಮೋದಿಯವರನ್ನು ದಸರಾಕ್ಕೆ ಕರೆಸುವ ಬಗ್ಗೆ ರಾಜ್ಯ ಸರ್ಕಾರ ಸೇರಿದಂತೆ ಬಿಜೆಪಿ ನಾಯಕರು ಉತ್ಸುಕತೆ ತೋರಿಸುತ್ತಿದ್ದಾರೆ. ಜತೆಗೆ ಪ್ರಧಾನಿ ಕಚೇರಿಗೂ ಪತ್ರ ಬರೆದಿದ್ದು, ಆದರೆ ಈ ಬಗ್ಗೆ, ಪ್ರಧಾನಿ ಕಚೇರಿಯಿಂದ ಯಾವುದೇ ರೀತಿಯ ಪ್ರತಿಕ್ರಿಯೆಗಳು ಬಂದಿಲ್ಲ ಎನ್ನಲಾಗಿದೆ. ಈ ಹಿಂದೆ ಜೂನ್ ನಲ್ಲಿ ಯೋಗ ದಿನಾಚರಣೆಗೆಂದು ಮೋದಿ ಮೈಸೂರಿಗೆ ಬಂದಿದ್ದರು. ಈ ವೇಳೆ ಅವರು ಖುಷಿಪಟ್ಟಿದ್ದರು. ಇದಾದ ನಂತರ ಆಗಸ್ಟ್ ನಲ್ಲಿ ಮಂಗಳೂರಿಗೆ ಬಂದಿದ್ದರು. ಮೂರು ತಿಂಗಳಲ್ಲಿ ಎರಡು ಬಾರಿ ಬಂದಿರುವ ಮೋದಿಯವರು ಈ ಹಿಂದೆ ತಿಂಗಳಿಗೊಮ್ಮೆ ರಾಜ್ಯಕ್ಕೆ ಬರುವುದಾಗಿ ಹೇಳಿದ್ದರು.

ಮೋದಿ ಅವರು ದಸರಾಕ್ಕೆ ಬರುವ ಬಗ್ಗೆ ಯಾವುದೇ ಪ್ರತಿಕ್ರಿಯೆ ಪ್ರಧಾನಿ ಕಚೇರಿಯಿಂದ ಬಂದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಒಟ್ಟಾರೆ ಈ ಬಾರಿಯ ದಸರಾಕ್ಕೆ ಮೋದಿಯವರನ್ನು ಕರೆಸಲೇ ಬೇಕೆಂಬ ಹಠಕ್ಕೆ ಬಿಜೆಪಿ ನಾಯಕರು ಬಿದ್ದಿದ್ದು ಈ ಬಗ್ಗೆ ಪ್ರಧಾನಿ ಕಚೇರಿಯಿಂದ ಮಾಹಿತಿ ಬರುವ ತನಕ ಕಾಯಲೇ ಬೇಕಾಗಿದೆ.


Spread the love

Leave a Reply

Please enter your comment!
Please enter your name here