ಮೈಸೂರು ದಸರಾಕ್ಕೆ ಪ್ರಾಯೋಜಕತ್ವ ನೀಡಲು ಅವಕಾಶ

Spread the love

ಮೈಸೂರು ದಸರಾಕ್ಕೆ ಪ್ರಾಯೋಜಕತ್ವ ನೀಡಲು ಅವಕಾಶ

ಮೈಸೂರು: ಮೈಸೂರು ದಸರಾದ ನವರಾತ್ರಿಯ ದಿನಗಳಲ್ಲಿ ಆಯೋಜಿಸಲಾಗುವ ಕಾರ್ಯಕ್ರಮಗಳಿಗೆ ಪ್ರಾಯೋಜಕತ್ವ ವಹಿಸಲು ಆಸಕ್ತಿ ಇರುವ ಸಂಘ ಸಂಸ್ಥೆಗಳು, ಕೈಗಾರಿಕೆಗಳು, ಸರ್ಕಾರಿ ಸ್ವಾಮ್ಯದ ಮತ್ತು ಖಾಸಗಿ ಬ್ಯಾಂಕ್‌ಗಳು ಹಾಗೂ ಪ್ರಾಯೋಜಕತ್ವ ವಹಿಸಲು ಆಸಕ್ತಿ ಇರುವವರಿಗೆ ಅವಕಾಶ ನೀಡಲಾಗಿದೆ.

ಈಗಾಗಲೇ ಪ್ರಮುಖ ಜನಪ್ರಿಯ ಕಂಪನಿಗಳಾದ ಕೋಕೋ ಕೋಲಾ, ಇಸ್ಕಾನ್, ಮುತ್ತೂಟ್ ಫೈನಾನ್ಸ್, ಎಸ್.ಬಿ.ಐ ಸೇರಿದಂತೆ ಅನೇಕ ಕಂಪನಿಗಳು ಪ್ರಾಯೋಜಕತ್ವ ವಹಿಸಲು ಮುಂದೆ ಬಂದಿವೆ. ಈ ಬಾರಿ ದಸರಾ ಅದ್ಧೂರಿಯಾಗಿ ನಡೆಯುತ್ತಿದ್ದು, ಇದಕ್ಕೆ ಇನ್ನಷ್ಟು ಮೆರಗು ನೀಡುವ ಕಾರ್ಯ ನಡೆಯುತ್ತಿದೆ.

ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್  ಅವರು, ಕೋವಿಡ್ ಅಲೆಯ ಪ್ರಮಾಣ ಗಣನೀಯವಾಗಿ ಕಡಿಮೆಯಾಗುತ್ತಿರುವ ಕಾರಣ ಸರಳ ದಸರಾವನ್ನು ಮತ್ತೆ ವಿಜೃಂಭಣೆಯಿಂದ ನಡೆಸುವ ಸಂಬಂಧ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಸಭೆಯನ್ನು ನಡೆಸಲಾಗಿದ್ದು, ಈ ಬಾರಿಯ ದಸರಾವನ್ನು ಸಾಂಪ್ರಾದಾಯಿಕವಾಗಿ ಹಾಗೂ ಅದ್ಧೂರಿಯಾಗಿ ಆಯೋಜಿಸಲಾಗುತ್ತಿದೆ. ವಿವಿಧ ಕಾರ್ಯಕ್ರಮಗಳ ಪ್ರಾಯೋಜಕತ್ವ ವಹಿಸುವ ಮೂಲಕ ನಾಡ ಹಬ್ಬ ದಸರಾದಲ್ಲಿ ಕೈಜೋಡಿಸಲು ಮನವಿ ಮಾಡಿದರು.

ಜಿಲ್ಲಾ ಪೊಲೀಸ್ ವರೀಷ್ಠಾಧಿಕಾರಿ ಆರ್.ಚೇತನ್ ಅವರು ಮಾತನಾಡಿ, ಈ ಬಾರಿಯ ದಸರಾದಲ್ಲಿ ನಡೆಯುವ ಯುವ ದಸರಾ ಹಾಗೂ ಯುವ ಸಂಭ್ರಮದ ಕಾರ್ಯಕ್ರಮದಲ್ಲಿ ಬಾಲಿವುಡ್ ನೈಟ್ ಹಾಗೂ ಸ್ಯಾಂಡಲ್ ವುಡ್ ನೈಟ್ ಎಂಬ ಕಾರ್ಯಕ್ರಮ ನಡೆಸಲಾಗುತ್ತಿದ್ದು, ಈ ಕಾರ್ಯಕ್ರಮದ ಅಂಗವಾಗಿ ಬಾಲಿವುಡ್ ಹಾಗೂ ಸ್ಯಾಂಡಲ್ ವುಡ್ ಸಂಗೀತಗಾರರನ್ನು ಅಥವಾ ನಟರನ್ನು ಕರೆಸಿ ಕಾರ್ಯಕ್ರಮ ನಡೆಸುವ ಬಗ್ಗೆ ಮಾಹಿತಿ ನೀಡಿದರು.

ಅಪರ ಜಿಲ್ಲಾಧಿಕಾರಿ ಡಾ.ಬಿ.ಎಸ್.ಮಂಜುನಾಥಸ್ವಾಮಿ ಅವರು ಮಾತನಾಡಿ, ಈ ಬಾರಿಯ ದಸರಾದಲ್ಲಿ ಪ್ರಾಯೋಜಕರನ್ನು ಗುರುತಿಸಿವುದರ ಜೊತೆಗೆ ಅವರ ಕಂಪನಿಗಳ ಬಗ್ಗೆ ಸಾರ್ವಜನಿಕವಾಗಿ ವ್ಯಾಪಕವಾಗಿ ಪರಿಚಯಿಸಲು ಅನುಕೂಲವಾಗುತ್ತದೆ. ಕಾರ್ಯಕ್ರಮ ನಡೆಯುವ ಸಂದರ್ಭದಲ್ಲಿಯೂ ಪ್ರಾಯೋಜಕರುಗಳ ಹೆಸರನ್ನು ಹಾಕಿಕೊಳ್ಳುವುದರ ಜೊತೆಗೆ ನೀಡುವ ಪ್ರಶಸ್ತಿಗಳಲ್ಲೂ ಹೆಸರನ್ನು ಹಾಕಿಸಿಕೊಳ್ಳಬಹುದು. ಇದರಿಂದ ಕಂಪನಿಗಳ ಹೆಸರು ಜನಪ್ರಿಯವಾಗಲು ಸಹಕಾರಿಯಾಗುತ್ತದೆ . ದಸರಾ ಸಂಬಂಧಿಸಿದ ಯಾವುದೇ ಕಾರ್ಯಕ್ರಮಗಳು ನಡೆದರೆ ಅಂತಹ ಕಾರ್ಯಕ್ರಮಗಳಿಗೆ ಪ್ರಾಯೋಜಕತ್ವ ಮಾಡಿದರೆ ಅಧಿಕೃತವಾಗಿ ಪ್ರಾಯೋಜಕರು ಎಂದು ಗುರುತಿಸಲಾಗುತ್ತದೆ ಎಂದರು.

 ದಸರಾ ವಿಶೇಷಾಧಿಕಾರಿ ಹಾಗೂ ಜಿಲ್ಲಾಧಿಕಾರಿಗಳು ಅಥವಾ ಕೈಗಾರಿಕೆ ಇಲಾಖೆಯ ಜಂಟಿ ನಿರ್ದೇಶಕರನ್ನು ಸಂಪರ್ಕಿಸಿ ಡಿ.ಡಿ ಅಥವಾ ಚೆಕ್ ಗಳನ್ನು ನೀಡಿ ಸ್ವೀಕೃತಿ ಪಡೆದುಕೊಳ್ಳಬಹುದು ಅಥವಾ ಹೆಚ್ಚಿನ ಮಾಹಿತಿಗಾಗಿ ಇ-ಮೇಲ್ ವಿಳಾಸ  adcmysuru@gmail.com & dcmysuru@gmail.com    ಅನ್ನು ಸಂಪರ್ಕಿಸಲು ಕೋರಲಾಗಿದೆ.


Spread the love

Leave a Reply

Please enter your comment!
Please enter your name here