ಮೈಸೂರು ದಸರಾ ವಿಶೇಷತೆ ಪಾರಂಪರಿಕ ನಡಿಗೆ

Spread the love

ಮೈಸೂರು ದಸರಾ ವಿಶೇಷತೆ ಪಾರಂಪರಿಕ ನಡಿಗೆ

ಮೈಸೂರು: ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಪುರಾತತ್ವ ಸಂಗ್ರಹಾಲಯ ಮತ್ತು ಪರಂಪರೆ ಇಲಾಖೆ ವತಿಯಿಂದ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಹಿರಿಯ ನಾಗರಿಕರಿಗೆ, ಜನಸಾಮಾನ್ಯರಿಗೆ ಹಾಗೂ ಪ್ರವಾಸಿಗರಿಗೆ ಮೈಸೂರಿನ ಇತಿಹಾಸ, ಪಾರಂಪರಿಕ ಕಟ್ಟಡಗಳ ಹಿನ್ನೆಲೆ ಪ್ರಾಮುಖ್ಯತೆ ಹಾಗೂ ವಾಸ್ತುಶಿಲ್ಪ ಶೈಲಿಯ ಮಹತ್ವದ ಬಗ್ಗೆ ಪರಿಚಯ ಮಾಡಿಕೊಡುವ ಉದ್ದೇಶದಿಂದ ವಿವಿಧ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಸೆ.26ರಂದು ಬೆಳಗ್ಗೆ 10 ಗಂಟೆಗೆ ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರ ಇಲಾಖೆ, ದಸರಾ ವಸ್ತು ಪ್ರದರ್ಶನ ಪ್ರಾಧಿಕಾರ ಆವರಣದಲ್ಲಿ ಸ್ಮಾರಕಗಳ ಸಂರಕ್ಷಣಾ ಛಾಯಾಚಿತ್ರ ಪ್ರದರ್ಶನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಸೆ.29ರಂದು ಬೆಳಗ್ಗೆ 7 ಗಂಟೆಗೆ ಮೈಸೂರು ಪುರಭವನದ ಆವರಣದಲ್ಲಿ ಪಾರಂಪರಿಕ ಸೈಕಲ್ ಸವಾರಿ (ಟ್ರಿನ್ ಟ್ರಿನ್) ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಸೆ.30ರಂದು ಬೆಳಗ್ಗೆ 7 ಗಂಟೆಗೆ ಮೈಸೂರು ಪುರಭವನದ ಆವರಣದಲ್ಲಿ ಪಾರಂಪರಿಕ ಉಡುಗೆಯಲ್ಲಿ ದಂಪತಿಗಳಾಗಿ ಪಾರಂಪರಿಕ ಟಾಂಗಾ ಸವಾರಿ ಹಮ್ಮಿಕೊಳ್ಳಲಾಗಿದೆ. ಅ.1ರಂದು ಬೆಳಗ್ಗೆ 7 ಗಂಟೆಗೆ ಮೈಸೂರು ಪುರಭವನದ ಆವರಣದಲ್ಲಿ ಪಾರಂಪರಿಕ ನಡಿಗೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಕಾರ್ಯಕ್ರಮದಲ್ಲಿ ಭಾಗವಹಿಸುವ ಆಸಕ್ತರು ಸೆ.12 ರಿಂದ 21ರವರೆಗೆ ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯೊಳಗಾಗಿ ಉಪನಿರ್ದೇಶಕರು, ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರ ಇಲಾಖೆ ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರದ ಆವರಣ ದೊಡ್ಡಕೆರೆ ಮೈದಾನ ಮೈಸೂರು ಇಲ್ಲಿ ನೇರವಾಗಿ, ದೂರವಾಣಿ ಮೂಲಕ ಅಥವಾ ಕಚೇರಿಯ ಇ-ಮೇಲ್ ವಿಳಾಸ ಮತ್ತು ಮೂಲಕ ತಮ್ಮ ಹೆಸರುಗಳನ್ನು ನೋಂದಾಯಿಸಿಕೊಳ್ಳುವುದು ಹಾಗೂ ಕಡ್ಡಾಯವಾಗಿ ದೂರವಾಣಿ ಮೊಬೈಲ್ ಸಂಖ್ಯೆಗಳನ್ನು ನಮೂದಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂರವಾಣಿ ಸಂಖ್ಯೆ: 0821-2424671, 2424673 ಹಾಗೂ ಡಾ. ಸಿ.ಎನ್. ಮಂಜುಳಾ ಮೊಬೈಲ್‌ಸಂಖ್ಯೆ: 8310250733ನ್ನು ಸಂಪರ್ಕಿಸಿ ಎಂದು ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.


Spread the love

Leave a Reply

Please enter your comment!
Please enter your name here