
ಮೊಗವೀರ ಸಮುದಾಯಕ್ಕೆ ರಾಜಕೀಯ ಪ್ರಾತಿನಿಧ್ಯ ನೀಡಿ – ಡಾ. ಜಿ ಶಂಕರ್
ಉಡುಪಿ: ಮೊಗವೀರ ಸಮುದಾಯಕ್ಕೆ ಮುನ್ನಲೆಗೆ ಬರಬೇಕು ಎಂದಾದರೆ ಅವರಿಗೆ ರಾಜಕೀಯ ಪ್ರಾತಿನಿಧ್ಯ ನೀಡಿ ಎಂದು ನಾಡೋಜ ಡಾ. ಜಿ ಶಂಕರ್ ಸರಕಾರವನ್ನು ಒತ್ತಾಯಿಸಿದರು.
ಅವರು ಬುಧವಾರ ಉಚ್ಚಿಲ ಮಹಾಲಕ್ಷ್ಮೀ ದೇವಸ್ಥಾನದ ಶ್ರೀಮತಿ ಶಾಲಿನಿ ಡಾ|ಜಿ.ಶಂಕರ್ ತೆರೆದ ಸಭಾಂಗಣದಲ್ಲಿ ದಕ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್ ಮಂಗಳೂರು ವತಿಯಿಂದ ಅವಿಭಜಿತ ದಕ ಜಿಲ್ಲೆಯ ವಿವಿಧ ಸಹಕಾರಿ ಸಂಘಗಳ ಹಾಗೂ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಸಹಕಾರ ರತ್ನ ಪ್ರಶಸ್ತಿ ಪುರಸ್ಕೃತ ಯುವ ಸಹಕಾರಿ ಧುರೀಣ ಸಾಮಾಜಿಕ, ಧಾರ್ಮಿಕ, ರಾಜಕೀಯ ಮುಂದಾಳು ಯಶಪಾಲ್ ಎ ಸುವರ್ಣ ಇವರಿಗೆ ಸಾರ್ವಜನಿಕ ಅಭಿನಂದನಾ ಸಮಾರಂಭ ಯಶೋಭಿನಂದನಾ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿ ಮಾತನಾಡಿದರು.
ಮೊಗವೀರ ಸಮುದಾಯ ಸಂಖ್ಯೆಯಲ್ಲಿ ಹೆಚ್ಚಾಗಿದ್ದರೂ ಸಹ ಇದುವರೆಗೆ ಸೂಕ್ತವಾದ ರಾಜಕೀಯ ಪ್ರಾತಿನಿಧ್ಯ ಇಲ್ಲದೆ ಕೊರಗುತ್ತಿದೆ. ಯಶ್ಪಾಲ್ ಸುವರ್ಣ ಅವರು ರಾಜಕೀಯ, ಸಾಮಾಜಿಕ ಹಾಗೂ ಸಹಕಾರಿ ಕ್ಷೇತ್ರದಲ್ಲಿ ತಮ್ಮನ್ನು ಸಂಪೂರ್ಣವಾಗಿ ತೊಡಗಿಸಿಕೊಂಡಿದ್ದು ಅವರಿಗೆ ರಾಜಕೀಯ ಪ್ರಾತಿನಿಧ್ಯತೆಯೊಂದಿಗೆ ಉನ್ನತ ಸ್ಥಾನಮಾನ ನೀಡಿದ್ದಲ್ಲಿ ಸಮಾಜದ ಅಭಿವೃದ್ಧಿಯಾಗಲು ಸಾಧ್ಯವಿದೆ. ಈ ನಿಟ್ಟಿನಲ್ಲಿ ಸರಕಾರದಲ್ಲಿರುವ ಉನ್ನತ ಮಟ್ಟದ ನಾಯಕರು ಗಮನ ಹರಿಸಬೇಕು ಎಂದರು.
ಕಾರ್ಯಕ್ರಮದಲ್ಲಿ ಮಾತನಾಡಿದ ರಾಜ್ಯ ಇಂಧನ, ಕನ್ನಡ ಸಂಸ್ಕೃತಿ ಇಲಾಖೆ ಸಚಿವರಾದ ವಿ ಸುನೀಲ್ ಕುಮಾರ್ ಮಾತನಾಡಿ ಯಶ್ಪಾಲ್ ಸುವರ್ಣ ಅವರು ರಾಷ್ಟ್ರೀಯತೆ ಮತ್ತು ಹಿಂದುತ್ವದ ಚಟುವಟಿಕೆಯನ್ನು ಪ್ರಾಮಾಣಿಕವಾಗಿ ಮಾಡಿಕೊಂಡು ಬಂದಿದ್ದು ಪ್ರಸ್ತುತ ಸಹಕಾರಿ ಕ್ಷೇತ್ರದಲ್ಲಿ ಕೂಡ ಸಾಧನೆ ಮಾಡಿದ್ದಾರೆ. ಅವರ ಸಾಧನೆಯ ಹಿಂದೆ ಪರಿಶ್ರಮ ಮತ್ತು ಶ್ರದ್ಧೆಯಿದೆ. ಮೊಗವೀರ ಸಮುದಾಯದೊಂದಿಗೆ ನಮ್ಮ ಸರಕಾರ ಸದಾ ಬೆಂಬಲವಾಗಿ ಇರಲಿದ್ದು, ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತರಾಮನ್ ಅವರು ಮಂಡಿಸಿರುವ ಬಜೆಟ್ ನಲ್ಲಿ ಮೀನುಗಾರರಿಗಾಗಿಯೇ ಮತ್ಸ್ಯಸಂಪದ ಯೋಜನೆಯನ್ನು ನೀಡಲಾಗಿದೆ ಎಂದರು.
ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ನಿಕಟಪೂರ್ವ ಅಧ್ಯಕ್ಷರಾದ ದಯಾನಂದ ಕತ್ತಲ್ ಸಾರ್ ಅವರು ಅಭಿನಂದನಾ ನುಡಿಗಳನ್ನು ಆಡಿದರು.
ಕಟಪಾಡಿ ಆನೆಗುಂದಿ ಮಹಾಸಂಸ್ಥಾನ ಮಠ ಪಡುಕುತ್ಯಾರು ಇದರ ಶ್ರೀಮದ್ ಜಗದ್ಗುರು ಅನಂತ ಶ್ರೀ ವಿಭೂಷಿತ ಕಾಳಹಸ್ತೇಂದ್ರ ಸರಸ್ವತಿ ಸ್ವಾಮೀಜಿ ಆಶೀರ್ವಚನ ನೀಡಿದರು.
ಕಾರ್ಯಕ್ರಮದಲ್ಲಿ ಅಭಿನಂದನಾ ಸಮಿತಿಯಿಂದ ಯಶ್ಪಾಲ್ ಸುವರ್ಣ ಅವರಿಗೆ ಹಾರ, ಮೈಸೂರು ಪೇಟ ಶಾಲು, ಬೃಹತ್ ಅಭಿನಂದನಾ ಪತ್ರ ಹಾಗೂ ಬೆಳ್ಳೀಯ ಸ್ಮರಣಿಕೆಯನ್ನು ನೀಡಿ ಗೌರವಿಸಲಾಯಿತು.
ಇದೇ ವೇಳೆ ಅವಿಭಜಿತ ದಕ ಜಿಲ್ಲೆಯ 40ಕ್ಕೂ ಅಧಿಕ ಸಹಕಾರಿ ಸಂಘ ಸಂಸ್ಥೆಗಳ ವತಿಯಿಂದ ಯಶ್ಪಾಲ್ ಅವರನ್ನು ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಸುಮಾರು 6000 ಕ್ಕೂ ಅಧಿಕ ಮಂದಿ ಭಾಗಿಯಾಗಿದ್ದರು.
ಕಾರ್ಯಕ್ರಮದಲ್ಲಿ ರಾಜ್ಯ ಸಮಾಜ ಕಲ್ಯಾಣಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ಕಾಪು ಶಾಸಕರಾದ ಲಾಲಾಜಿ ಆರ್ ಮೆಂಡನ್, ಉಡುಪಿ ಶಾಸಕರಾದ ರಘುಪತಿ ಭಟ್, ಬೈಂದೂರು ಶಾಸಕರಾದ ಬಿ ಎಂ ಸುಕುಮಾರ್ ಶೆಟ್ಟಿ, ಮೈಸೂರು ಇಲೆಕ್ಟ್ರಿಕಲ್ ಇಂಡಸ್ಟ್ರೀಸ್ ಇದರ ಅಧ್ಯಕ್ಷರಾದ ಉದಯ್ ಕುಮಾರ್ ಶೆಟ್ಟಿ, ಕರಾವಳಿ ಅಭಿವೃದ‍್ಧಿ ಪ್ರಾಧಿಕಾರದ ನಿಕಟಪೂರ್ವ ಅಧ್ಯಕ್ಷರಾದ ಮಟ್ಟಾರು ರತ್ನಾಕರ ಹೆಗ್ಡೆ, ಗುರ್ಮೆ ಫೌಂಡೇಶನ್ ಅಧ್ಯಕ್ಷರಾದ ಸುರೇಶ್ ಶೆಟ್ಟಿ ಗುರ್ಮೆ, ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷರಾದ ಜಯಕರ ಶೆಟ್ಟಿ ಇಂದ್ರಾಳಿ, ಮಲ್ಪೆ ಮೀನುಗಾರರ ಸಂಘದ ಅಧ್ಯಕ್ಷರಾದ ದಯಾನಂದ ಕೆ ಸುವರ್ಣ, ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ಬೆಂಗಳೂರು ನಿರ್ದೇಶಕರಾದ ದೇವಿಪ್ರಸಾದ್ ಶೆಟ್ಟಿ ಬೆಳಪು ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಭಿನಂದನಾ ಸಮಿತಿಯ ಅಧ್ಯಕ್ಷರಾದ ಆನಂದ ಸಿ ಕುಂದರ್ ವಹಿಸಿದ್ದರು.
ಕಾರ್ಯಕ್ರಮದಲ್ಲಿ ಸಾಯಿರಾಧಾ ಸಂಸ್ಥೆಯ ಮನೋಹರ್ ಎಸ್ ಶೆಟ್ಟಿ, ಮಾಂಡವಿ ಜೆರ್ರಿ ವಿನ್ಸೆಂಟ್ ಡಯಾಸ್, ಉದ್ಯಮಿಗಳಾದ ಅನಂದ ಪಿ ಸುವರ್ಣ, ಹರಿಯಪ್ಪ ಕೋಟ್ಯಾನ್, ಕಟಪಾಡಿ ಕ್ಷೇತ್ರದ ಬಿ ಎನ್ ಶಂಕರ ಪೂಜಾರಿ, ಕೊಡವೂರು ದೇವಸ್ಥಾನದ ಸಾಧು ಸಾಲ್ಯಾನ್, ದೇವಾಡಿಗರ ಸೇವಾ ಸಂಘದ ಅಧ್ಯಕ್ಷರಾದ ಗಣೇಶ್ ದೇವಾಡಿಗ, ಮಾರಿಯಮ್ಮ ದೇವಸ್ಥಾನ ಕಾಪು ಇದರ ಪ್ರಸಾದ್ ಶೆಣೈ, ಕಡಂದೆಲೆ ಸುರೇಶ್ ಭಂಡಾರಿ, ಗೋಕುಲ್ ದಾಸ್ ಕಚ್ಚೂರು, ಉಮೇಶ್ ನಾಯ್ಕ್ ಚೇರ್ಕಾಡಿ, ಶ್ರೀಕಾಂತ್ ನಾಯಕ್ ಅಲೆವೂರು, ನಿತಿನ್ ಕುಮಾರ್, ದೇವಾನಂದ ಗುರಿಕಾರ, ಶೀಲಾ ಕೆ ಶೆಟ್ಟಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.