ಮೊಬೈಲ್ ವಿಡಿಯೋ ಪ್ರಕರಣ – ಮೂವರು ವಿದ್ಯಾರ್ಥಿನಿಯರಿಗೆ ಜಾಮೀನು ಮಂಜೂರು

Spread the love

ಮೊಬೈಲ್ ವಿಡಿಯೋ ಪ್ರಕರಣ – ಮೂವರು ವಿದ್ಯಾರ್ಥಿನಿಯರಿಗೆ ಜಾಮೀನು ಮಂಜೂರು

ಉಡುಪಿ: ಉಡುಪಿಯ ನೇತ್ರಜ್ಯೋತಿ ಪ್ಯಾರಾ ಮೆಡಿಕಲ್ ಕಾಲೇಜಿನಲ್ಲಿ ನಡೆದ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಉಡುಪಿ ಜಿಲ್ಲಾ ನ್ಯಾಯಾಲಯ ಮೂವರು ವಿದ್ಯಾರ್ಥಿನಿಯರಿಗೆ ಜಾಮೀನು ಮಂಜೂರು ಮಾಡಿದೆ.

ವಿಡಿಯೋ ಮಾಡಿದ ಆರೋಪ ಎದುರಿಸುತ್ತಿರುವ ಮೂವರು ವಿದ್ಯಾರ್ಥಿನಿಯರಾದ ಶಬನಾಜ್, ಆಲ್ಫಿಯಾ,ಆಲಿಮಾತುಲ್ ಶಾಫಿಯಾ ಗೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ

 ಪ್ರಕರಣದಲ್ಲಿ ವಿದ್ಯಾರ್ಥಿನಿಯರ ವಿರುದ್ದ ಮಲ್ಪೆ ಪೊಲೀಸರು ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿದ್ದರು. ಈ ಹಿನ್ನಲೆಯಲ್ಲಿ ಶುಕ್ರವಾರ ಮೂವರು ವಿದ್ಯಾರ್ಥಿನಿಯರು ಉಡುಪಿ ನ್ಯಾಯಾಲಯಕ್ಕೆಹಾಜರಾಗಿ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು. ಮನವಿಯನ್ನು ಪುರಸ್ಕರಿಸಿದ ನ್ಯಾಯಾಲಯ ವಿದ್ಯಾರ್ಥಿನಿಯರಿಗೆ ಜಾಮೀನು ಮಂಜೂರು ಮಾಡಿದೆ.


Spread the love