ಮೋದಿ ಕಾರ್ಯಕ್ರಮ ಮುಗಿಸಿ ತೆರಳುತ್ತಿದ್ದ ಬಸ್ಸಿನ ಮೇಲೆ ಕಲ್ಲು ತೂರಾಟ – 7 ಬಂಧನ

ಮೋದಿ ಕಾರ್ಯಕ್ರಮ ಮುಗಿಸಿ ತೆರಳುತ್ತಿದ್ದ ಬಸ್ಸಿನ ಮೇಲೆ ಕಲ್ಲು ತೂರಾಟ – 7 ಬಂಧನ

 ಉಳ್ಳಾಲ: ಮಂಗಳೂರಿನಲ್ಲಿ ಶನಿವಾರ ನಡೆದ ಪ್ರಧಾನಿ ನರೇಂದ್ರ ಮೋದಿ ಅವರ ರ‍್ಯಾಲಿ ಮುಗಿಸಿ ವಾಪಸ್‌ ಹೊರಟಿದ್ದ ಕಾರು ಮತ್ತು ಬಸ್‌ ಮೇಲೆ ಉಳ್ಳಾಲ ಪೊಲೀಸ್‌ ಠಾಣೆ ವ್ಯಾಪ್ತಿಯ ಕುತ್ತಾರು ಮದನಿನಗರದ ಬಳಿ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ್ದು,   ಇದನ್ನು ಖಂಡಿಸಿ ಹಾಗೂ ಆರೋಪಿಗಳ ಬಂಧನಕ್ಕೆ ಆಗ್ರಹಿಸಿ ಕೊಣಾಜೆ ಠಾಣೆ ಎದುರು ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ಮಾಧ್ಯಮಗಳಿಗೆ ಮಾತನಾಡಿ ಮೋದಿಯವರ ರ್ಯಾಲಿ ಬಳಿಕ ಬಿಜೆಪಿ ಕಾರ್ಯಕರ್ತರನ್ನು ಕರೆದುಕೊಂಡು ಹೋಗುತ್ತಿದ್ದ ಬಸ್ಸಿನ ಮೇಲೆ ದುಷ್ಕರ್ಮಿಗಳು ಕಲ್ಲುತೂರಾಟ ನಡೆಸಿದ್ದು ಮಹಿಳೆಯರ ಮೇಲೆ ಹಲ್ಲೆ ಕೂಡ ನಡೆಸಲಾಗಿದೆ.

ಘಟನೆಯನ್ನು ಪೊಲೀಸ್ ಇಲಾಖೆ ಗಂಭೀರವಾಗಿ ಪರಿಗಣಿಸಿದ್ದು, ಈ ಸಂಬಂಧ ಈಗಾಗಲೇ 7 ಮಂದಿಯನ್ನು ಬಂಧಿಸಲಾಗಿದೆ ಉಳಿದವರನ್ನು ಕೂಡ ಬಂಧಿಸಲಾಗುವುದು.

ಘಟನೆ ಸಂಬಧ ಕೊಣಾಜೆ ಠಾಣೆಯಲ್ಲಿ 7 ಮಂದಿಯ ವಿರುದ್ಧ ಪ್ರಕರಣ ದಾಖಲಾಗಿದೆ.