ಯಕ್ಷಗಾನ ಅಕಾಡೆಮಿಯಿಂದ ಕಲಾವಿದರಿಗೆ ಪ್ರಶಸ್ತಿ ಪ್ರಕಟ

Spread the love

ಯಕ್ಷಗಾನ ಅಕಾಡೆಮಿಯಿಂದ ಕಲಾವಿದರಿಗೆ ಪ್ರಶಸ್ತಿ ಪ್ರಕಟ

ಬೆಂಗಳೂರು:  ಕರ್ನಾಟಕ ಯಕ್ಷಗಾನ ಅಕಾಡೆಮಿಯು ಸಾಧನೆಗೈದ ಕಲಾವಿದರಿಗೆ 2022ನೇ ಸಾಲಿನ ಪಾರ್ತಿಸುಬ್ಬ ಪ್ರಶಸ್ತಿ, ಗೌರವ ಪ್ರಶಸ್ತಿ ಹಾಗೂ ಯಕ್ಷಸಿರಿ ವಾರ್ಷಿಕ ಪ್ರಶಸ್ತಿ, ದತ್ತಿನಿಧಿ ಪ್ರಶಸ್ತಿ ಹಾಗೂ 2021ನೇ ಸಾಲಿನ ಪುಸ್ತಕ ಬಹುಮಾನ ಪ್ರಶಸ್ತಿಯನ್ನು ಪ್ರಕಟಿಸಿದೆ.

ತೆಂಕುತಿಟ್ಟು ಯಕ್ಷಗಾನ ಕಲಾವಿದರು, ಛಂದಸ್ಸುಕಾರರು, ವಿದ್ವಾಂಸರು, ಪ್ರಸಂಗಕರ್ತರು ಆದ  ಗಣೇಶ ಕೊಲೆಕಾಡಿ ಇವರನ್ನು ‘ಪಾರ್ತಿಸುಬ್ಬ ಪ್ರಶಸ್ತಿ’ಗೆ ಆಯ್ಕೆ ಮಾಡಲಾಗಿದೆ. ಪಾರ್ತಿಸುಬ್ಬ ಪ್ರಶಸ್ತಿ ಪುರಸ್ಕೃತರಿಗೆ ರೂ.1ಲಕ್ಷ ನಗದು, ಪ್ರಶಸ್ತಿ ಫಲಕ, ಪ್ರಮಾಣಪತ್ರ, ಹಾರ, ಶಾಲು ಪೇಟ ಹಾಗೂ ಫಲತಾಂಬೂಲಗಳನ್ನು ನೀಡಿ ಪುರಸ್ಕರಿಸಲಾಗುತ್ತದೆ.

ಇನ್ನುಳಿದಂತೆ 1. ಪುತ್ತಿಗೆ ರಘುರಾಮ ಹೊಳ್ಳ, 2. ಭಾಗವತ ಚಂದಯ್ಯ, ಭಾಗವತ 3. ಉಮೇಶ ಭಟ್ ಬಾಡ, 4. ಪ್ರಾಚಾರ್ಯ ಕೆ.ಪಿ.ಹೆಗಡೆ, ಮತ್ತು 5. ಪಟ್ಲ ಸತೀಶ್ ಶೆಟ್ಟಿ ಇವರುಗಳನ್ನು ‘ಗೌರವ ಪ್ರಶಸ್ತಿ’ಗೆ ಆಯ್ಕೆ ಮಾಡಲಾಗಿದೆ. ಗೌರವ ಪ್ರಶಸ್ತಿ ಪುರಸ್ಕøತರಿಗೆ ತಲಾ ರೂ.50 ಸಾವಿರ ನಗದು, ಪ್ರಶಸ್ತಿ ಫಲಕ, ಪ್ರಮಾಣಪತ್ರ, ಹಾರ, ಶಾಲು ಪೇಟ ಹಾಗೂ ಫಲತಾಂಬೂಲಗಳನ್ನು ನೀಡಿ ಪುರಸ್ಕರಿಸಲಾಗುವುದು.

  1. ಕೋಲ್ಯಾರುರಾಜು ಶೆಟ್ಟಿ, 2. ಕೃಷ್ಣ ಗಾಣಿಗ(ಕುಷ್ಟ) ಗಾಣಿಗ, 3. ಕೃಷ್ಣ.ಜಿ.ಬೇಡ್ಕಣಿ, 4. ಶುಭಾನಂದ ಶೆಟ್ಟಿ, 5. ಬಾಲಕೃಷ್ಣ ನಾಯಕ್, 6. ಕವ್ವಾಳೆ ಗಣಪತಿ ಭಾಗ್ವತ, 7. ಎಸ್.ಪಿ.ಅಪ್ಪಯ್ಯ, 8. ಡಿ.ಭೀಮಯ್ಯ, 9. ಕೊಲ್ಲೂರು ಕೊಗ್ಗ ಆಚಾರ್ಯ, ಮತ್ತು ಅಜೀತ್‍ಕುಮಾರ್ ಜೈನ್  ಅವರುಗಳನ್ನು ‘ಯಕ್ಷಸಿರಿ ವಾರ್ಷಿಕ ಪ್ರಶಸ್ತಿ’ಗೆ ಆಯ್ಕೆ ಮಾಡಲಾಗಿದೆ. ಯಕ್ಷಸಿರಿ ಪ್ರಶಸ್ತಿ ಪುರಸ್ಕøತರಿಗೆ ತಲಾ 25ಸಾವಿರ ರೂ.ಗಳ ನಗದು, ಪ್ರಶಸ್ತಿ ಫಲಕ, ಪ್ರಮಾಣಪತ್ರ, ಹಾರ, ಶಾಲು ಪೇಟ ಹಾಗೂ ಫಲತಾಂಬೂಲಗಳನ್ನು ನೀಡಿ ಪುರಸ್ಕರಿಸಲಾಗುವುದು.

ಹುಕ್ಕಲಮಕ್ಕಿ ಕಮಲಾಕರ ಹೆಗಡೆ ಅವರನ್ನು  ‘ದತ್ತಿನಿಧಿ ಪ್ರಶಸ್ತಿ’ ಕರ್ಕಿ ಹಿರಿಯ ಪರಮಯ್ಯ ಹಾಸ್ಯಗಾರ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಪ್ರಶಸ್ತಿ ಪುರಸ್ಕೃತರಿಗೆ 25ಸಾವಿರ ರೂ.ಗಳ ನಗದು, ಪ್ರಶಸ್ತಿ ಫಲಕ, ಪ್ರಮಾಣಪತ್ರ, ಹಾರ, ಶಾಲು ಪೇಟ ಹಾಗೂ ಫಲತಾಂಬೂಲಗಳನ್ನು ನೀಡಿ ಪುರಸ್ಕರಿಸಲಾಗುವುದು.

ಪೊಳಲಿ ನಿತ್ಯಾನಂದ ಕಾರಂತ ಇವರ “ಯಕ್ಷಗಾನ ಪ್ರಸಂಗ ಸಂಪುಟ” ಎಂಬ ಕೃತಿ, ಶ್ರೀ ಎಲ್.ಎಸ್.ಶಾಸ್ತ್ರಿ ಇವರ “ಯಕ್ಷಗಾನ ನಕ್ಷತ್ರಗಳು” ಎಂಬ ಕೃತಿ, ಹಾಗೂ ಶ್ರೀಮತಿ ವಿದ್ಯಾರಶ್ಮಿ ಪೆಲತ್ತಡ್ಕ ಇವರ “ಯಕ್ಷಗಾನ ಲೀಲಾವಳಿ” ಎಂಬ ಕೃತಿಗಳನ್ನು  2021 ನೇ ಸಾಲಿನ ಪುಸ್ತಕ ಬಹುಮಾನ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಪುಸ್ತಕ ಬಹುಮಾನ ಪುರಸ್ಕೃತರಿಗೆ ತಲಾ 25ಸಾವಿರ ರೂ.ಗಳ ನಗದು, ಪ್ರಶಸ್ತಿ ಫಲಕ, ಪ್ರಮಾಣಪತ್ರ, ಹಾರ, ಶಾಲು ಪೇಟ ಹಾಗೂ ಫಲತಾಂಬೂಲಗಳನ್ನು ನೀಡಿ ಗೌರವಿಸಲಾಗುತ್ತದೆ.

2022ನೇ ಸಾಲಿನ ಪ್ರತಿಷ್ಠಿತ ಪಾರ್ತಿಸುಬ್ಬ ಪ್ರಶಸ್ತಿ, ಗೌರವ ಪ್ರಶಸ್ತಿ, ಯಕ್ಷಸಿರಿ ವಾರ್ಷಿಕ ಪ್ರಶಸ್ತಿ, ದತ್ತಿನಿಧಿ ಪ್ರಶಸ್ತಿ ಹಾಗೂ 2021ನೇ ಸಾಲಿನ ಪುಸ್ತಕ ಬಹುಮಾನ ಪ್ರಶಸ್ತಿ ಪ್ರದಾನ ಸಮಾರಂಭ’ವನ್ನು 2022ರ ಸೆಪ್ಟೆಂಬರ್ ಮಾಹೆಯ 2ನೇ ಅಥವಾ 3ನೇ ವಾರದಲ್ಲಿ ಶ್ರೀ ಕ್ಷೇತ್ರ ಕಮಲಶಿಲೆ, ಉಡುಪಿ ಜಿಲ್ಲೆಯಲ್ಲಿ  ನಡೆಸಲು ತೀರ್ಮಾನಿಸಲಾಗಿದೆ.


Spread the love