ಯಡಮೊಗೆ ಕೊಲೆ‌ ಪ್ರಕರಣ: ಮತ್ತೋರ್ವನ ಬಂಧನ. ಬಂಧಿತರ ಸಂಖ್ಯೆ 5 ಕ್ಕೆ ಏರಿಕೆ

Spread the love

ಯಡಮೊಗೆ ಕೊಲೆ‌ ಪ್ರಕರಣ: ಮತ್ತೋರ್ವನ ಬಂಧನ. ಬಂಧಿತರ ಸಂಖ್ಯೆ 5 ಕ್ಕೆ ಏರಿಕೆ

ಕುಂದಾಪುರ: ಸಾಮಾಜಿಕ ಕಾರ್ಯಕರ್ತ ಯಡಮೊಗೆ ಉದಯ್ ಗಾಣಿಗ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವ ಆರೋಪಿಯನ್ನು ಶಂಕರನಾರಾಯಣ ಪೊಲೀಸರು ಬಂಧಿಸಿದ್ದಾರೆ. ಈ ಮೂಲಕ ಬಂಧಿತರ ಸಂಖ್ಯೆ 5 ಕ್ಕೆ ತಲುಪಿದೆ.

ಯಡಮೊಗೆ ಪಂಚಾಯತ್ ಸದಸ್ಯ ಸದಾಶಿವ ನಾಯ್ಕ್ ಬಂಧಿತ ಆರೋಪಿ. ಆರೋಪಿ ಸದಾಶಿವ್ ನಾಯ್ಕ್ ನನ್ನು ಕುಂದಾಪುರ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಧೀಶರು 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದ್ದಾರೆ.

ಶನಿವಾರ ರಾತ್ರಿ ಪ್ರಾಣೇಶ್ ಯಡಿಯಾಳ್ ಹಾಗೂ ಆತನ‌ ತಂಡ ಉದಯ್ ಗಾಣಿಗ ಅವರ ಮೈಮೇಲೆ ಕಾರು ಹತ್ತಿಸಿ ಆ ಬಳಿಕ ದೊಣ್ಣೆಯಿಂದ ಹೊಡೆದು ಕೊಲೆಗಯ್ಯಲಾಗಿದೆ ಎಂದು ಉದಯ್ ಪತ್ನಿ‌ ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಕೊಲೆ ಪ್ರಕರಣದ ಪ್ರಮುಖ ಆರೋಪಿ ಯಡಮೊಗೆ ಪಂಚಾಯತ್ ಅಧ್ಯಕ್ಷ ಪ್ರಾಣೇಶ್ ಯಡಿಯಾಳನನ್ನು ಆದಿತ್ಯವಾರ ನಸುಕಿನ ಜಾವ ಪೊಲೀಸರು ಬಂಧಿಸಿದ್ದರು. ಸೋಮವಾರ ಪ್ರಾಣೇಶ್ ಯಡಿಯಾಳನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಆತನಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿತ್ತು.

ಪ್ರಕರಣದ ಎರಡನೇ ಆರೋಪಿ ರಾಜೇಶ್ ಭಟ್ ಹಾಗೂ ಕೃತ್ಯಕ್ಕೆ ಕುಮ್ಮಕ್ಕು ನೀಡಿದ ಆರೋಪದಡಿ ಬಂಧಿತನಾಗಿದ್ದ ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಬಾಲಚಂದ್ರ ಭಟ್ ಹಾಗೂ ಮನೋಜ್ ಕುಮಾರ್ ಗೆ ಜೂನ್ 29 ರ ತನಕ ನ್ಯಾಯಾಂಗ ಬಂಧನ ವಿಧಿಸಿದ್ದರು.


Spread the love

Leave a Reply

Please enter your comment!
Please enter your name here