
Spread the love
ಯಡಮೊಗೆ ಕೊಲೆ ಪ್ರಕರಣ: ಬಿಜೆಪಿ ಮುಖಂಡ ಬಾಲಚಂದ್ರ ಭಟ್ ಸೇರಿ ಇಬ್ಬರ ಬಂಧನ
ಕುಂದಾಪುರ : ಶಂಕರನಾರಾಯಣ ಪೊಲೀಸ್ ಠಾಣಾ ವ್ಯಾಪ್ತಿಯ ಯಡಮೊಗೆ ಎಂಬಲ್ಲಿ ಶನಿವಾರ ರಾತ್ರಿ ನಡೆದ ಸಾಮಾಜಿಕ ಕಾರ್ಯಕರ್ತ ಯಡಮೊಗೆ ಉದಯ್ ಗಾಣಿಗ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಎರಡನೇ ಆರೋಪಿ ರಾಜೇಶ್ ಭಟ್ ಹಾಗೂ ಕೃತ್ಯಕ್ಕೆ ಕುಮ್ಮಕ್ಕು ನೀಡಿದ ಆರೋಪವನ್ನು ಎದುರಿಸುತ್ತಿರುವ ಬಾಲಚಂದ್ರ ಭಟ್ ಅವರನ್ನು ಸೋಮವಾರ ರಾತ್ರಿ ಪೊಲೀಸರು ಬಂಧಿಸಿದ್ದಾರೆ. ಮಂಗಳವಾರ ನ್ಯಾಯಾಲಯಕ್ಕೆ ಹಾಜರು ಪಡಿಸುವ ಸಾಧ್ಯತೆ ಇದೆ.
ಪ್ರಕರಣದ ಮೊದಲನೇ ಆರೋಪಿ ಪ್ರಾಣೇಶ್ ಯಡಿಯಾಳ ನನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದ್ದು, ನ್ಯಾಯಾಧೀಶರು 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದ್ದಾರೆ.
ಎಸ್. ಪಿ ಭೇಟಿ:
ಪ್ರಕರಣ ನಡೆದ ಸ್ಥಳಕ್ಕೆ ಸೋಮವಾರ ಸಂಜೆಯ ವೇಳೆ ಭೇಟಿ ನೀಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್ ಘಟನೆಯ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ.
ಡಿವೈಎಸ್ಪಿ ಕೆ. ಶ್ರೀಕಾಂತ, ಸರ್ಕಲ್ ಇನ್ಸ್ಪೆಕ್ಟರ್ ಗೋಪಿಕೃಷ್ಣ ಹಾಗೂ ಶಂಕರನಾರಾಯಣ ಎಸ್. ಐ ಶ್ರೀಧರ್ ನಾಯಕ್ ಇದ್ದರು.
Spread the love