ಯಡಿಯೂರಪ್ಪ ಬಳಿಕ ಅವರ ಪುತ್ರಿಗೂ ಕೊರೋನಾ ಪಾಸಿಟಿವ್

Spread the love

ಯಡಿಯೂರಪ್ಪ ಬಳಿಕ ಅವರ ಪುತ್ರಿಗೂ ಕೊರೋನಾ ಪಾಸಿಟಿವ್

ಬೆಂಗಳೂರು: ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪಗೆ ಕೊರೋನಾ ಪಾಸಿಟಿವ್ ಬಂದ ಬೆನ್ನಲ್ಲೇ ಅವರ ಮಗಳಿಗೂ ಕೂಡ ಪಾಸಿಟಿವ್ ಬಂದಿದೆ

ಭಾನುವಾರ ಟ್ವೀಟ್ ಮಾಡಿದ್ದ ಬಿಎಸ್ವೈ ತಮಗೆ ಕೊರೋನಾ ಪಾಸಿಟಿವ್ ಇರುವುದಾಗಿ ಹೇಳಿಕೊಂಡಿದ್ದರು. ನನ್ನ ಕೊರೋನಾ ಪರೀಕ್ಷಾ ವರದಿಯಲ್ಲಿ ಪಾಸಿಟಿವ್ ಎಂದು ಬಂದಿದ್ದು, ರೋಗಲಕ್ಷಣಗಳು ಇಲ್ಲದಿದ್ದರೂ ಮುನ್ನೆಚ್ಚರಿಕೆ ದೃಷ್ಟಿಯಿಂದ, ವೈದ್ಯರ ಸಲಹೆಯಂತೆ ಆಸ್ಪತ್ರೆಗೆ ದಾಖಲಾಗುತ್ತಿದ್ದೇನೆ. ಕಳೆದ ಕೆಲವು ದಿನಗಳಲ್ಲಿ ನನ್ನ ಸಂಪರ್ಕಕ್ಕೆ ಬಂದಿರುವವರು, ಕ್ವಾರಂಟೈನ್ ನಲ್ಲಿದ್ದು ಮುಂಜಾಗ್ರತೆ ವಹಿಸಿ ಎಂದು ಕೋರುತ್ತೇನೆ ಎಂದು ಹೇಳಿದ್ದರು.

ನಿನ್ನೆ ಕಾವೇರಿ ನಿವಾಸಲ್ಲಿರುವವರನ್ನು ಚೆಕ್ ಅಪ್ ಮಾಡುವ ವೇಳೆ ಕೊರೋನಾ ಟೆಸ್ಟ್ ಮಾಡಿಸಲಾಗಿದೆ. ಇದರಲ್ಲಿ ಬಿಎಸ್ವೈ ಹಾಗೂ ಅವರ ಪುತ್ರಿ ಪದ್ಮಾವತಿಗೆ ಪಾಸಿಟಿವ್ ಬಂದಿದೆ. ಸಿಎಂ ಹಾಗೂ ಪದ್ಮಾವತಿ ಅವರಿಗೆ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.


Spread the love