ಯಡಿಯೂರಪ್ಪ ರಾಜಕೀಯ ನಿವೃತ್ತಿ ಪಡೆಯಲಿ:ಯತ್ನಾಳ್

Spread the love

ಯಡಿಯೂರಪ್ಪ ರಾಜಕೀಯ ನಿವೃತ್ತಿ ಪಡೆಯಲಿ:ಯತ್ನಾಳ್

ಮೈಸೂರು: ಮುಖ್ಯಮಂತ್ರಿ ಯಡಿಯೂರಪ್ಪ ರಾಜ್ಯದ, ಪಕ್ಷದ, ಕುಟುಂಬದ ಹಿತದೃಷ್ಟಿಯಿಂದ ನಿವೃತ್ತಿ ಪಡೆದುಕೊಳ್ಳುವುದು ಒಳ್ಳೆಯದು ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಸಲಹೆ ನೀಡಿದ್ದಾರೆ.

ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ನಾನು ಈ ಹಿಂದೆಯೇ ಮುಖ್ಯಮಂತ್ರಿಯಾಗ ಬೇಕಾಗಿತ್ತು ಎನ್ನುವ ಮೂಲಕ ತಾನು ಮುಖ್ಯಮಂತ್ರಿ ಆಕಾಂಕ್ಷಿ ಎಂಬುದನ್ನು ಹೊರ ಹಾಕಿದರಲ್ಲದೆ, ನಾನೇ ಕೆಲವು ಅವಕಾಶಗಳನ್ನು ಮಿಸ್ ಮಾಡಿಕೊಂಡಿದ್ದೇನೆ ಎಂದರಲ್ಲದೆ, ನಾನು ಕೇಂದ್ರ ಸಚಿವನಾಗಿದ್ದಾಗ ಬಿಜೆಪಿಯಲ್ಲಿ ಬಿ.ಎಸ್.ಯಡಿಯೂರಪ್ಪ ಮಂತ್ರಿನೂ ಆಗಿರಲಿಲ್ಲ. ಸದಾನಂದಗೌಡ, ಜಗದೀಶ್ ಶೆಟ್ಟರ್‍ಗಿಂತ ನಾನು ಹಿರಿಯವನಾಗಿದ್ದು, ನನ್ನ ರಾಜಕೀಯ ಜೀವನ ಅಂತ್ಯವಾದರೂ ತೊಂದರೆಯಿಲ್ಲ ಆದರೆ ನಾನು ಭ್ರಷ್ಟಾಚಾರ, ಕುಟುಂಬಶಾಹಿ ವಿರುದ್ಧದ ಹೋರಾಟ ನಿಲ್ಲಿಸುವುದಿಲ್ಲ ಎಂದು ಹೇಳಿದರು.

ಯಡಿಯೂರಪ್ಪ ಅವರ ವಿರುದ್ಧ ಹರಿಹಾಯ್ದ ಅವರು ನಿಮ್ಮ ಭ್ರಷ್ಟಾಚಾರದ ಕರ್ಮಕಾಂಡವೇ ನಮ್ಮ ಬಳಿಯಿದ್ದು, ಭ್ರಷ್ಟಾಚಾರದ ದಾಖಲೆಗಳನ್ನು ಬಿಡುಗಡೆ ಮಾಡಿದರೆ ಅಧಿಕಾರ ಬಿಡಬೇಕಾಗುತ್ತದೆ, ಬೆಂಬಲ ನೀಡುವ ಮಠಾಧೀಶರು ಮಠ ಬಿಟ್ಟು ಓಡಬೇಕಾಗುತ್ತದೆ. ಆದ್ದರಿಂದ ಗೌರವಯುತವಾಗಿ ನಿವೃತ್ತಿಯಾಗಿ ಎಂದರಲ್ಲದೆ, ನಾನು ಏಕಾಂಗಿಯಲ್ಲ, ಸಾಕಷ್ಟು ಸಚಿವರು ಸಂಪರ್ಕದಲ್ಲಿದ್ದಾರೆ. ಎಲ್ಲರೂ ನೀವು ಮಾಡುತ್ತಿರುವುದು ನ್ಯಾಯಯುತ ಹೋರಾಟ. ಹೋರಾಟವನ್ನು ಮುಂದುವರಿಸಿ ಎಂದು ಅವರು ನನಗೆ ಹೇಳಿದ್ದಾರೆ. ಕೆಲವೇ ದಿನಗಳಲ್ಲಿ ನನ್ನ ಹೋರಾಟದ ಫಲ ಸಿಗುತ್ತದೆ ಎಂದರು.


Spread the love