ಯಳಂದೂರಿನಲ್ಲಿ ಆಹಾರ ಕಿಟ್ ಗೆ ಮುಗಿಬಿದ್ದ ಕಾರ್ಮಿಕರು!

Spread the love

ಯಳಂದೂರಿನಲ್ಲಿ ಆಹಾರ ಕಿಟ್ ಗೆ ಮುಗಿಬಿದ್ದ ಕಾರ್ಮಿಕರು!

ಯಳಂದೂರು: ತಾಲೂಕಿನ ಕಟ್ಟಡ ಕಾರ್ಮಿಕರಿಗೆ ಕಾರ್ಮಿಕ ಇಲಾಖೆಯ ವತಿಯಿಂದ ನೀಡಲಾಗುತ್ತಿದ್ದ ಆಹಾರ ಕಿಟ್‌ಗಳನ್ನು ಪಡೆಯಲು ಕಾರ್ಮಿಕರು ಮುಗಿಬಿದ್ದ ದೃಶ್ಯ ಕಂಡು ಬಂದಿತು.

dav

ಬೆಳಿಗ್ಗೆ 7 ಗಂಟೆಯಿಂದಲೇ ಸಾರ್ವಜನಿಕರು ಸರತಿ ಸಾಲಿನಲ್ಲಿ ಕಾದು ನಿಂತಿದ್ದರು. ಹೊತ್ತು ಏರುತ್ತಿದ್ದಂತೆಯೇ ಜನರ ಸಂಖ್ಯೆಯೂ ಹೆಚ್ಚಾಗಿ ಎರಡೂವರೆ ಸಾವಿರಕ್ಕೂ ಹೆಚ್ಚು ಜನರು ಜಮಾವಣೆಗೊಂಡ ಹಿನ್ನೆಲೆಯಲ್ಲಿ ಕೆಲ ಕಾಲ ನೂಕು ನುಗ್ಗಲು ಉಂಟಾಯಿತು. ಪೊಲೀಸರು ಇವರನ್ನು ಚದುರಿಸಲು ಲಾಠಿ ಬೀಸಿ ಚದುರಿಸಿದರು. ಬಳಿಕ ಪರಿಸ್ಥಿತಿಯನ್ನು ತಹಬಂದಿಗೆ ತಂದು ಎಲ್ಲರನ್ನೂ ಸರತಿ ಸಾಲಿನಲ್ಲಿ ನಿಲ್ಲಿಸುವಲ್ಲಿ ಯಶಸ್ವಿಯಾದರು. ನಂತರ ಜಿಲ್ಲಾ ಮೀಸಲು ಪಡೆಯ ಪೊಲೀಸ್ ವಾಹನವೂ ಸ್ಥಳದಲ್ಲೇ ಮೊಕ್ಕಾಂ ಹೂಡಿ ಪರಿಸ್ಥಿತಿಯನ್ನು ನಿಭಾಯಿಸಿದರು.

ಪ್ರವಾಸಿ ಮಂದಿರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಾಸಕ ಎನ್. ಮಹೇಶ್ ಸಾಂಕೇತಿಕವಾಗಿ ಆಹಾರದ ಕಿಟ್ ಗಳನ್ನು ವಿತರಿಸಿದರು.

ಈ ವೇಳೆ ಮಾತನಾಡಿದ ಅವರು, ಕೊಳ್ಳೇಗಾಲ ಕ್ಷೇತ್ರ ವ್ಯಾಪ್ತಿಯಲ್ಲಿ 5ಸಾವಿರ ಕಟ್ಟಡ ಕಾರ್ಮಿಕರಿಗೆ ಆಹಾರ ಕಿಟ್‌ಗಳನ್ನು ವಿತರಣೆ ಮಾಡಲಾಗುತ್ತಿದೆ. ಇದನ್ನು ಕಾರ್ಮಿಕ ಇಲಾಖೆಯಿಂದ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕ ಮಂಡಳಿ ವತಿಯಿಂದ ನೋಂದಾಯಿತ ಕಟ್ಟಡ ಕಾರ್ಮಿಕರಿಗೆ ಮಾತ್ರ ನೀಡಲಾಗುತ್ತದೆ ಎಂದರು.

ಇದು ಕೇವಲ ಕಟ್ಟಡ ಕಾರ್ಮಿಕರಿಗೆ ಮೀಸಲಾಗಿದೆ. ಆದರೆ ಎಲ್ಲಾ ಕಾರ್ಮಿಕರು ಇಲ್ಲಿಗೆ ಬರುವುದರಿಂದ ಕೊಳ್ಳೇಗಾಲದಲ್ಲಿ ಇದರ ಬಗ್ಗೆ ಗೊಂದಲ ಉಂಟಾಗಿತ್ತು. ಆದರೆ ಇದು ಯಳಂದೂರಿನಲ್ಲಿ ಆಗಬಾರದು ಎಂಬ ಉದ್ದೇಶದಿಂದ ಕಾರ್ಮಿಕ ಇಲಾಖೆ ಹಾಗೂ ಪೊಲೀಸ್ ಇಲಾಖೆಗೆ ಸೂಚನೆ ನೀಡಲಾಗಿದೆ. ತಾಲೂಕಿನ 1 ಸಾವಿರ ಕೂಲಿ ಕಾರ್ಮಿಕರಿಗೆ ಕಿಟ್ ವಿತರಣೆ ಮಾಡಲು ಕ್ರಮ ವಹಿಸಲಾಗಿದೆ. ಸಾರ್ವಜನಿಕರು ಸಹಕರಿಸಬೇಕು ಎಂದು ಮನವಿ ಮಾಡಿದರು.

ತಹಶೀಲ್ದಾರ್ ಜಯಪ್ರಕಾಶ್, ಜಿಲ್ಲಾ ಕಾರ್ಮಿಕ ಅಧಿಕಾರಿ ಎಂ. ಮಹದೇವಸ್ವಾಮಿ ಸಿಪಿಐ ಶಿವಮಾದಯ್ಯ, ನಾಮ ನಿರ್ದೇಶಿತ ಸದಸ್ಯರಾದ ರಘು, ಮಹೇಶ್, ಚೆನ್ನರಾಜು ದಾನವ ಸೇರಿದಂತೆ ಅನೇಕರು ಹಾಜರಿದ್ದರು.


Spread the love