
Spread the love
ಯಶ್ಪಾಲ್ ಸುವರ್ಣ ಅವರಿಂದ ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವರ ಭೇಟಿ
ಬೆಂಗಳೂರು: ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟೀಯ ಪ್ರಧಾನ ಕಾರ್ಯದರ್ಶಿ ಯಶ್ ಪಾಲ್ ಸುವರ್ಣ ರವರು ಕೇಂದ್ರ ಸರಕಾರದ ಗ್ರಾಮೀಣಾಭಿವೃದ್ಧಿ ಸಚಿವರಾದ ಗಿರಿರಾಜ್ ಸಿಂಗ್ ರವರನ್ನು, ರಾಜ್ಯ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ಉಸ್ತುವಾರಿಗಳೂ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಾದ ಕೆ ಎಸ್ ಈಶ್ವರಪ್ಪ ರವರೊಂದಿಗೆ ಬೆಂಗಳೂರಿನ ಕಚೇರಿಯಲ್ಲಿ ಭೇಟಿ ಮಾಡಿ ಸಮಾಲೋಚನೆ ನಡೆಸಿದರು.
ಈ ಸಂದರ್ಭದಲ್ಲಿ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಜ್ಯಾಧ್ಯಕ್ಷರಾದ ಎನ್ ಎಲ್ ನರೇಂದ್ರ ಬಾಬು, ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷರಾದ ಸುರೇಶ್ ನಾಯಕ್ ಕುಯಿಲಾಡಿ ಉಪಸ್ಥಿತರಿದ್ದರು.
Spread the love