ಯಶ್ಪಾಲ್ ಸುವರ್ಣ ನೇತೃತ್ವದಲ್ಲಿ ಪುಷ್ಪಾನಂದ ಫೌಂಡೇಶನ್ ವತಿಯಿಂದ ಪ್ರತಿಭಾ ಪುರಸ್ಕಾರ ವಿತರಣೆ

Spread the love

ಯಶ್ಪಾಲ್ ಸುವರ್ಣ ನೇತೃತ್ವದಲ್ಲಿ ಪುಷ್ಪಾನಂದ ಫೌಂಡೇಶನ್ ವತಿಯಿಂದ ಪ್ರತಿಭಾ ಪುರಸ್ಕಾರ ವಿತರಣೆ

ಉಡುಪಿ: ಕಾಪು ಪುರಸಭೆ ವ್ಯಾಪ್ತಿಯಲ್ಲಿ ಎಸ್ ಎಸ್ ಎಲ್ ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ 105 ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪುಷ್ಪಾನಂದ ಫೌಂಡೇಶನ್ ವತಿಯಿಂದ ಕಾಪು ಲಕ್ಷ್ಮೀ ಜನಾರ್ಧನ ಸಭಾಂಗಣದಲ್ಲಿ ನಡೆದ ಸಮಾರಂಭದಲ್ಲಿ ವಿತರಿಸಲಾಯಿತು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕಿದಿಯೂರು ಫ್ಯಾಮಿಲಿ ಟ್ರಸ್ಟ್ ಅಧ್ಯಕ್ಷ ಕೆ ಉದಯ್ ಕುಮಾರ್ ಶೆಟ್ಟಿ ಪುಷ್ಪಾನಂದ ಫೌಂಡೇಶನ್ ಮೂಲಕ ಜಿಲ್ಲೆಯ ವಿವಿಧೆಡೆ ನಿರಂತರ ಸಮಾಜ ಸೇವಾ ಚುಟುವಟಿಕೆಗಳು ನಡೆಯುತ್ತಿವೆ. ಕಾಪು ಕ್ಷೇತ್ರದ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪ್ರೋತ್ಸಾಹ ನೀಡುವ ಮೂಲಕ ಮಕ್ಕಳ ಭವಿಷ್ಯಕ್ಕೆ ಭದ್ರ ಬುನಾದಿ ಹಾಕುವ ಪ್ರಯತ್ನಕ್ಕೂ ಚಾಲನೆ ನೀಡಿರುವುದ ಸ್ವಾಗತಾರ್ಹ ಎಂದರು.

ಪುಷ್ಪಾನಂದ ಫೌಂಡೇಶನ್ ಪ್ರವರ್ತಕರಾದ ಯಶ್ ಪಾಲ್ ಸುವರ್ಣ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿ ಕೆರೆಯ ನೀರನ್ನು ಕೆರೆಗೆ ಚೆಲ್ಲಿ ಎಂಬ ಮಾತಿನಂತೆ ಸಮಾಜದಲ್ಲಿ ಅಗತ್ಯವುಳ್ಳವರ ನೋವಿಗೆ ಸ್ಪಂದಿಸುವ ನಿಟ್ಟಿನಲ್ಲಿ ನಮ್ಮ ಫೌಂಡೇಶನ್ ಕಾರ್ಯಾಚರಿಸುತ್ತಿದೆ. ಕಾಪು ಪುರಸಭೆ ಸೇರಿದಂತೆ ಕಾಪು ವಿಧಾನಸಭಾ ಕ್ಷೇತ್ರದ 29 ಗ್ರಾಪಂ ವ್ಯಾಪ್ತಿಯ ಸುಮಾರು 1500 ಕ್ಕೂ ಅಧಿಕಾ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ವಿತರಿಸಲು ಯೋಜನೆ ರೂಪಿಸಲಾಗಿದೆ ಎಂದರು.

ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಜ್ಯೋತಿಷ್ಯ ವಿದ್ವಾನ್ ಪ್ರಕಾಶ್ ಅಮ್ಮಣ್ಣಾಯ, ಯೋಜನಾ ಪ್ರಾಧಿಕಾರದ ಅಧ್ಯಕ್ಷ ಸುಧಾಮ ಶೆಟ್ಟಿ, ಕಾಪು ಶ್ರೀ ಹಳೇ ಮಾರಿಗುಡಿ ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ಪ್ರಸಾದ್ ಜಿ. ಶೆಣೈ, ಕಾಪು‌ ಹೊಸ ಮಾರಿಗುಡಿ ದೇವಸ್ಥಾನದ ಆಡಳಿತ‌ ಮಂಡಳಿ ಅಧ್ಯಕ್ಷ ರಮೇಶ್ ಹೆಗ್ಡೆ ಕಲ್ಯ, ಕಾಪು‌ ಶ್ರೀ ಲಕ್ಷ್ಮೀ ಜನಾರ್ದನ ದೇವಸ್ಥಾನದ ಆಡಳಿತ‌ ಮಂಡಳಿ ಮಾಜಿ‌ ಅಧ್ಯಕ್ಷ ಮೋಹನ್ ಬಂಗೇರ, ಕಾಪು ಬಿಲ್ಲವರ‌ ಸಹಾಯಕ ಸಂಘದ ಗೌರವಾಧ್ಯಕ್ಷ ಪ್ರಭಾಕರ‌ ಪೂಜಾರಿ, ಕಾಪು‌ ದಂಡತೀರ್ಥ ವಿದ್ಯಾ ಸಂಸ್ಥೆಯ ಉಪನ್ಯಾಸಕ ನೀಲಾನಂದ‌ ನಾಯ್ಕ್, ಮಹಾದೇವಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯಿನಿ ಜ್ಯೋತಿ ಯು., ಕಾಪು ಪುರಸಭಾ ವ್ಯಾಪ್ತಿ‌ ಬಿಜೆಪಿ ಅಧ್ಯಕ್ಷ ಸಂದೀಪ್‌ ಶೆಟ್ಟಿ, ಸಾಮಾಜಿಕ ಕಾರ್ಯಕರ್ತೆ ನೀತಾ‌ ಪ್ರಭು ಮೊದಲಾದವರು ಉಪಸ್ಥಿತರಿದ್ದರು.


Spread the love