ಯುಕ್ರೇನ್‌ ನಲ್ಲಿ ಹತರಾದ ನವೀನ್‌ ಗೆ ದಕ ಜಿಲ್ಲಾ ಎನ್‌ ಎಸ್‌ ಯು ಐ ವತಿಯಿಂದ ಶೃದ್ಧಾಂಜಲಿ

Spread the love

ಯುಕ್ರೇನ್‌ ನಲ್ಲಿ ಹತರಾದ ನವೀನ್‌ ಗೆ ದಕ ಜಿಲ್ಲಾ ಎನ್‌ ಎಸ್‌ ಯು ಐ ವತಿಯಿಂದ ಶೃದ್ಧಾಂಜಲಿ

ಮಂಗಳೂರು: ಉಕ್ರೇನ್ ಖಾರ್ಕೀವ್ ನಗರದಲ್ಲಿ ರಷ್ಯಾದ ಭೀಕರ ಗುಂಡಿನ ದಾಳಿಗೆ ಮೃತಪಟ್ಟ ಹಾವೇರಿ ಜಿಲ್ಲೆಯ ನವೀನ್ ಶೇಖರಪ್ಪ ಗ್ಯಾನಗೌಡರ್ ಅವರಿಗೆ ಶೃಧ್ಧಾಂಜಲಿ ಸಭೆ ಹಾಗೂ ಉಕ್ರೇನ್ ನಲ್ಲಿ ಸಿಲುಕಿರುವ ಭಾರತೀಯ ವಿದ್ಯಾರ್ಥಿಗಳನ್ನು ಭಾರತಕ್ಕೆ ಕರೆತರಲು ವಿಫಲವಾದ ಕೇಂದ್ರ ಸರ್ಕಾರದ ವೈಫಲ್ಯವನ್ನು ಖಂಡಿಸಿ ಎನ್ಎಸ್ ಯುಐ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಬುಧವಾರ ನಗರದ ಗಾಂಧಿ ಪ್ರತಿಮೆ ಬಳಿ ಮೊಂಬತ್ತಿ ಹಚ್ಚಿ ಪ್ರತಿಭಟನೆ ನಡೆಸಿತು.

ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಎನ್ಎಸ್ ಯುಐ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಸವಾದ್ ಸುಳ್ಯ, ಮೃತಪಟ್ಟ ವಿದ್ಯಾರ್ಥಿಯನ್ನು ಆದಷ್ಟು ಬೇಗ ಕರೆತರಬೇಕು. ಸುಮಾರು 18 ಸಾವಿರ ಭಾರತದ ವಿದ್ಯಾರ್ಥಿಗಳು ಉಕ್ರೇನ್ ನಲ್ಲಿ ಸಿಲುಕಿದ್ದು, ಸಾಮಾಜಿಕ ಜಾಲತಾಣದಲ್ಲಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಸರ್ಕಾರ ವಿದ್ಯಾರ್ಥಿಗಳನ್ನು ಕರೆತರುವಲ್ಲಿ ವಿಫಲವಾಗಿದ್ದು, ಪ್ರಧಾನ ಮಂತ್ರಿಗಳು ಚುನಾವಣಾ ಪ್ರಚಾರದಲ್ಲಿ ತಲ್ಲೀಣರಾಗಿದ್ದಾರೆ ಎಂದು ಟೀಕಿಸಿದರು.

ಈ ಸಂದರ್ಭದಲ್ಲಿ ಸುಚಿನ್ ಸಾಲ್ಯಾನ್, ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಇಸ್ಮಾಯಿಲ್ ಬಿ.ಎಸ್, ದಕ್ಷಿಣ ಕನ್ನಡ ಜಿಲ್ಲಾ ಅಲ್ಪಸಂಖ್ಯಾತ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಫಯಾಝ್ ಅಮ್ಮೆಮ್ಮಾರ್, ಕೌಶಿಕ್, ಅಲ್ಫಾಝ್ ಹಮೀದ್, ಎನ್.ಎಸ್.ಯು.ಐ ದಕ್ಷಿಣ ಕನ್ನಡ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಅಯಾಝ್ ಚಾರ್ಮಾಡಿ, ಸಾರ್ಥಕ್, ಪ್ರಧಾನ ಕಾರ್ಯದರ್ಶಿ ಅಬ್ದುಲ್ ರಾಝಿ, ಸಿದ್ದಾರ್ಥ್ ಶಕೀಲ್ ಉಳ್ಳಾಲ, ಸಾಹಿಲ್ ಎ.ಕೆ, ಭರತ್ ಮತ್ತಿತರರಿದ್ದರು.


Spread the love