ರಂಗಾಯಣದ ನಿರ್ದೇಶಕ ಅಡ್ಡಂಡ ಕಾರ್ಯಪ್ಪಗೆ ಕೊಲೆ ಬೆದರಿಕೆ

Spread the love

ರಂಗಾಯಣದ ನಿರ್ದೇಶಕ ಅಡ್ಡಂಡ ಕಾರ್ಯಪ್ಪಗೆ ಕೊಲೆ ಬೆದರಿಕೆ

ಮೈಸೂರು: ಮೈಸೂರಿನ ರಂಗಾಯಣದ ನಿರ್ದೇಶಕ ಅಡ್ಡಂಡ ಕಾರ್ಯಪ್ಪ ಅವರಿಗೆ ಕೊಲೆ ಬೆದರಿಕೆ ಒಡ್ಡಿರುವ ಹಿನ್ನಲೆಯಲ್ಲಿ ನಗರದ ಜಯಲಕ್ಷ್ಮಿಪುರಂ ಪೊಲೀಸರಿಗೆ ದೂರು ನೀಡಿ ರಕ್ಷಣೆ ಕೋರಿದ್ದಾರೆ.

ರಂಗಾಯಣದಿಂದ ಟಿಪ್ಪು ನಿಜಕನಸುಗಳು ಎಂಬ ನಾಟಕ ರಚಿಸಿ, ನಿರ್ದೇಶನ ಮಾಡಿ ಇದೀಗ ಪ್ರದರ್ಶನಗೊಳ್ಳುತ್ತಿದೆ. ಈ ಪ್ರದರ್ಶನ ಆರಂಭವಾದಂದಿನಿಂದ ನನ್ನ ವಿರುದ್ಧ ಕೆಲವರು ಪ್ರತಿಭಟನೆ, ಜಿಲ್ಲಾಧಿಕಾರಿಗಳಿಗೆ ದೂರು, ಇತ್ಯಾದಿ ಮಾಡುತ್ತಾ ಬಂದಿದ್ದಾರೆ. ಮೈಸೂರಿನ ಮಹೇಶ್ ಚಂದ್ರಗುರು ಎಂಬುವವರು ವೀಡಿಯೋ ಒಂದರಲ್ಲಿ ನನ್ನನ್ನು ಮನೆಹಾಳ ಕಾರ್ಯಪ್ಪ ಇತ್ಯಾದಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಪ್ರಸಾರ ಮಾಡುತ್ತಿದ್ದಾರೆ. ಇದರಿಂದ ಪ್ರಚೋದನೆಗೊಂಡ ಕೆಲವರು ನಿಂದಿಸಲು ತೊಡಗಿದ್ದಾರೆ. ನ.28ರಂದು ಶಿವಮೊಗ್ಗ ಜಿಲ್ಲೆಯ ವಿಳಾಸದಿಂದ ಪತ್ರವೊಂದು ಬಂದಿದ್ದು, ಈ ಪತ್ರದಲ್ಲೂ ಅವಾಚ್ಯ ಶಬ್ದಗಳ ನಿಂದನೆಯಿದ್ದು, ನಿನಗೀಗ ಸಾಯುವ, ಕೊಲೆ ಆಗುವ ಹಂತ ತಲುಪಿದ್ದೀರ, ನಿನ್ನನ್ನು ನೀವು ನಂಬಿರುವ ದೇವರು ಸಹ ಉಳಿಸುವುದಿಲ್ಲ ಎಂದು ಜೀವ ಬೆದರಿಕೆ ಒಡ್ಡಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಶಿವಮೊಗ್ಗದಿಂದ ಪೋಸ್ಟ್ ಕಾರ್ಡಿನಲ್ಲಿ ಇನ್ನೊಂದು ಪತ್ರ ಬಂದಿದೆ. ಟಿಪ್ಪು ನಿಜಕನಸುಗಳು ನಾಟಕ ಪ್ರದರ್ಶನಕ್ಕೆ ಪೊಲೀಸ್ ಸೂಕ್ತ ಬಂದೋಬಸ್ತ್ ಮಾಡಿದ್ದು ಪ್ರದರ್ಶನ ನಡೆಯುತ್ತಿದೆ. ಆದರೆ, ನಾನು ನನ್ನ ಕಚೇರಿಯ ಕೆಲಸಗಳು, ನಾಟಕದ ಸಂಘಟನಾತ್ಮಕ ಕೆಲಸಗಳಿಗಾಗಿ ಹೊರಗೆಲ್ಲಾ ಹೋಗಬೇಕಾಗುತ್ತದೆ. ಈ ರೀತಿಯ ಬೆದರಿಕೆ ಕರೆ ಒಡ್ಡುವವರು ನನಗೆ ಜೀವಹಾನಿ ಮಾಡಬಹುದು ಎಂಬ ಅನುಮಾನ ಇದೆ. ಅಲ್ಲದೇ ಮಹೇಶ್ ಚಂದ್ರಗುರು ಅಂಥವರು ಮತ್ತು ಇವರ ಸಹಚರರು ಇಂತವರಿಗೆ ಕುಮ್ಮಕ್ಕು ನೀಡುತ್ತಿದ್ದಾರೆ. ಆದುದರಿಂದ ನನಗೆ ಸೂಕ್ತ ರಕ್ಷಣೆ ನೀಡಬೇಕು ಎಂದು ಅಡ್ಡಂಡ ಕಾರ್ಯಪ್ಪ ಹೇಳಿದ್ದಾರೆ.


Spread the love