ರಘುಪತಿ ಭಟ್ ಉಡುಪಿ ಬಿಜೆಪಿ ಅಭ್ಯರ್ಥಿ ಆಗುವಂತೆ ಕೋರಿ ದೇವರಿಗೆ ಪೂಜೆ ಸಲ್ಲಿಸಿದ ಕಾರ್ಯಕರ್ತರು

Spread the love

ರಘುಪತಿ ಭಟ್ ಉಡುಪಿ ಬಿಜೆಪಿ ಅಭ್ಯರ್ಥಿ ಆಗುವಂತೆ ಕೋರಿ ದೇವರಿಗೆ ಪೂಜೆ ಸಲ್ಲಿಸಿದ ಕಾರ್ಯಕರ್ತರು

ಉಡುಪಿ: ಭಾರತೀಯ ಜನತಾ ಪಕ್ಷದ ಉಡುಪಿ ಕ್ಷೇತ್ರದಿಂದ ಮಾಜಿ ಶಾಸಕ ರಘುಪತಿ ಭಟ್ ಅಭ್ಯರ್ಥಿಯಾಗುವಂತೆ ಪಕ್ಷದ ಹೈಕಮಾಂಡ್ ಹೆಸರನ್ನು ಪ್ರಕಟಿಸುವಂತೆ ಆಗ್ರಹಿಸಿ ಪಕ್ಷದ ಕಾರ್ಯಕರ್ತರು ಮಂಗಳವಾರ ಸಾಮೂಹಿಕ ಪ್ರಾರ್ಥನೆಯನ್ನು ಸಲ್ಲಿಸಿದರು.

ನೂರಾರು ಸಂಖ್ಯೆಯಲ್ಲಿ ಜಮಾಯಿಸಿದ ಬಿಜೆಪಿ ಪಕ್ಷದ ಕಾರ್ಯಕರ್ತರು, ರಘುಪತಿ ಭಟ್ ಅವರ ಬೆಂಬಲಿಗರು, ಹಾಗೂ ಕುಟುಂಬ ವರ್ಗದ ಸದಸ್ಯರು ಉಡುಪಿಯ ಚಂದ್ರಮೌಳೀಶ್ವರ, ಅನಂತೇಶ್ವರ ಹಾಗೂ ಕೃಷ್ಣ ಮಠದಲ್ಲಿ ರಘುಪತಿ ಭಟ್ ಅವರೇ ಉಡುಪಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗುವಂತೆ ದೇವರಲ್ಲಿ ಪ್ರಾರ್ಥನೆ ಸಲ್ಲಿಸಿದರು.


Spread the love