ರಜತ ಮಹೋತ್ಸವ ಹಾಗೂ ಪತ್ರಕರ್ತರ ಕ್ಷೇಮಾಭಿವೃದ್ಧಿ ನಿಧಿಯ ಮನವಿ ಪತ್ರ ಬಿಡುಗಡೆ

Spread the love

ರಜತ ಮಹೋತ್ಸವ ಹಾಗೂ ಪತ್ರಕರ್ತರ ಕ್ಷೇಮಾಭಿವೃದ್ಧಿ ನಿಧಿಯ ಮನವಿ ಪತ್ರ ಬಿಡುಗಡೆ

ಉಡುಪಿ: ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ರಜತ ಮಹೋತ್ಸವ ಹಾಗೂ ಪತ್ರಕರ್ತರ ಕ್ಷೇಮಾಭಿವೃದ್ಧಿ ನಿಧಿಯ ಮನವಿ ಪತ್ರವನ್ನು ಧರ್ಮಸ್ಥಳ ಧರ್ಮಾಧಿಕಾರಿಗಳು ಮತ್ತು ರಾಜ್ಯಸಭಾ ಸದಸ್ಯರಾದ ಡಾl ವೀರೇಂದ್ರ ಹೆಗ್ಗಡೆಯವರು ಸೋಮವಾರ ಧರ್ಮಸ್ಥಳದಲ್ಲಿ ಸೋಮವಾರ ಬಿಡುಗಡೆಗೊಳಿಸಿದರು.

ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ರಜತ ಮಹೋತ್ಸವ ಆಚರಿಸುತ್ತಿದ್ದು, 2023ರಲ್ಲಿ 25 ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಉದ್ದೇಶಿಸ ಲಾಗಿದೆ. ಅದರಲ್ಲಿ ಮುಖ್ಯವಾಗಿ ಪತ್ರಕರ್ತರ ಕ್ಷೇಮಾಭಿವೃದ್ಧಿ ನಿಧಿ, ಕಟ್ಟಡ ಅಭಿವೃದ್ಧಿ ಸೇರಿದಂತೆ ವಿವಿಧ ಯೋಜನೆಗಳಿಗೆ ಸುಮಾರು 2 ಕೋಟಿ ರೂ. ಯೋಜನೆ ರೂಪಿಸಲಾಗಿದೆ.

ಈ ಸಂದರ್ಭದಲ್ಲಿ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ರಾಜೇಶ ಶೆಟ್ಟಿ ಅಲೆವೂರು, ರಜತ ಮಹೋತ್ಸವದ ಸಂಚಾಲಕ ಮೊಹಮ್ಮದ್ ಶರೀಫ್, ಪ್ರಧಾನ ಕಾರ್ಯದರ್ಶಿ ಜಯಕರ್ ಸುವರ್ಣ, ಕೋಶಾಧಿಕಾರಿ ಉಮೇಶ್ ಮಾರ್ಪಳ್ಳಿ, ರಾಜ್ಯ ಸಮಿತಿ ಸದಸ್ಯ ಕಿರಣ್ ಮಂಜನಬೈಲ್, ಹಿರಿಯ ಸದಸ್ಯ ಪುಂಡಾಲಿಕ ಮರಾಠೆ ಉಪಸ್ಥಿತರಿದ್ದರು.


Spread the love

Leave a Reply

Please enter your comment!
Please enter your name here