ರಣಾಂಗಣವಾದ ವಿಧಾನ ಪರಿಷತ್ ಕಲಾಪ ; ಕಾಂಗ್ರೆಸ್-ಬಿಜೆಪಿ ಸದಸ್ಯರ ನೂಕಾಟ

Spread the love

ರಣಾಂಗಣವಾದ ವಿಧಾನ ಪರಿಷತ್ ಕಲಾಪ ; ಕಾಂಗ್ರೆಸ್-ಬಿಜೆಪಿ ಸದಸ್ಯರ ನೂಕಾಟ

ಬೆಂಗಳೂರು: ವಿಧಾನ ಪರಿಷತ್ ಮಂಗಳವಾರ ಅಕ್ಷರಶಃ ರಣಾಂಗಣವಾಗಿದ್ದು, ಸಭಾಪತಿ ವಿಷಯದಲ್ಲಿ ಕಾಂಗ್ರೆಸ್-ಬಿಜೆಪಿ ಸದಸ್ಯರ ನಡುವೆ ವಾಗ್ಯುದ್ದ, ಕೈ ಕೈ ಮಿಲಾಯಿಸುವಿಕೆ, ನೂಕಾಟ, ತಳ್ಳಾಟಕ್ಕೆ ಸಾಕ್ಷಿಯಾಯಿತು.

ಬೆಳಿಗ್ಗೆ 11.10 ರ ಸುಮಾರಿಗೆ ಕಲಾಪ ಆರಂಭಗೊಳ್ಳುತ್ತಿದ್ದಂತೆ ಸಭಾಪತಿ ಸ್ಥಾನದಲ್ಲಿ ಉಪಸಭಾಪತಿ ಜೆ ಡಿ ಎಸ್ ನ ಧರ್ಮೇಗೌಡ ಕುಳಿತಿದ್ದದ್ದನ್ನು ಕಂಡು ಆಕ್ರೋಶಗೊಂಡ ಕಾಂಗ್ರೆಸ್ ಸದ್ಯರು ಅವರನ್ನು ಎಬ್ಬಿಸಿ ಎಳೆದೊಯ್ದರು. ಈ ವೇಳೆ ಬಿಜೆಪಿ ಮತ್ತು ಕಾಂಗ್ರೆಸ್ ಸದಸ್ಯರ ನಡುವೆ ನೂಕಾಟ, ತಳ್ಳಾಟ ನಡೆಯಿತು. ಬಿಜೆಪಿ ಸದಸ್ಯರು ಮತ್ತೆ ಅವರನ್ನು ಕರೆತಂದರು. ಈ ವೇಳೆ ಕಾಂಗ್ರೆಸ್ ಸದಸ್ಯ ಬಸವರಾಜ ಪಾಟೀಲ ಇಟಗಿ ಅವರನ್ನು ಸಭಾಪತಿ ಪೀಠದಲ್ಲಿ ಕಾಂಗ್ರೆಸ್ ಸದಸ್ಯರು ಕುಳ್ಳಿರಿಸಿ ಅವರ ಸುತ್ತಲೂ ನಿಂತು ಕೊಂಡರು.

ಭಾಪತಿ ವಿರುದ್ದ ಸಲ್ಲಿಸಿರುವ ಅವಿಶ್ವಾಸ ನಿರ್ಣಯ ಸೂಚನೆಯ ಬಗ್ಗೆ ಮೊದಲು ಪ್ರಸ್ತಾಪವಾಗಬೇಕು ಎಂದು ಜೆಡಿಎಸ್ ಬಿಜೆಪಿ ಸದಸ್ಯರು ಒತ್ತಾಯಿಸಿ ಘೋಷಣೆ ಕೂಗಿದರು. ಕಡಿಮೆ ಸಂಖ್ಯೆಯಲ್ಲಿದ್ದ ಮಾರ್ಷಲ್ ಗಳಿಗೆ ಪರಿಸ್ಥಿತಿಯನ್ನು ನಿಭಾಯಿಸಲು ಸಾಧ್ಯವಾಗಿಲಿಲ್ಲ.

ಈ ಮಧ್ಯೆ ಸಭಾಪತಿ ಪ್ರತಾಪ ಚಂದ್ರ ಶೆಟ್ಟಿ ಕಲಾಪಕ್ಕೆ ಆಗಮಿಸಿ ಕಲಾಪವನ್ನು ಅನಿರ್ದಿಷ್ಠಾವಧಿಗೆ ಮುಂದೂಡಿದರು.


Spread the love