ರಮಾನಾಥ ರೈ ಆರೋಗ್ಯ ಸ್ಥಿತಿ ಉತ್ತಮವಾಗಿದೆ – ಸಚಿವ ಯು.ಟಿ. ಖಾದರ್

Spread the love

ರಮಾನಾಥ ರೈ ಆರೋಗ್ಯ ಸ್ಥಿತಿ ಉತ್ತಮವಾಗಿದೆ – ಸಚಿವ ಯು.ಟಿ. ಖಾದರ್

ಮ0ಗಳೂರು : ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿರುವ ಅರಣ್ಯ ಹಾಗೂ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ಅವರ ಆರೋಗ್ಯ ಸ್ಥಿತಿ ಉತ್ತಮವಾಗಿದೆ ಎಂದು ಆಹಾರ ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ.

ಅವರು ಸಚಿವ ರಮಾನಾಥ ರೈ ಅವರು ದಾಖಲಾಗಿರುವ ಬೆಂಗಳೂರಿನ ಎಂ.ಎಸ್.ರಾಮಯ್ಯ ಆಸ್ಪತ್ರೆಗೆ ಭೇಟಿ ನೀಡಿ, ಸಚಿವರ ಆರೋಗ್ಯ ವಿಚಾರಿಸಿದರು. ರಮಾನಾಥ ರೈ ಆರೋಗ್ಯಯುತರಾಗಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ. ವೈದ್ಯರು 3 ದಿನಗಳ ವಿಶ್ರಾಂತಿಗೆ ಸೂಚಿಸಿದ್ದು, ನಂತರ ಆಸ್ಪತ್ರೆಯಿಂದ ಉಸ್ತುವಾರಿ ಸಚಿವರು ಬಿಡುಗಡೆಯಾಗಲಿದ್ದಾರೆ ಎಂದು ಸಚಿವ ಯು.ಟಿ.ಖಾದರ್ ಅವರು ತಿಳಿಸಿದ್ದಾರೆ.


Spread the love