ರಮೇಶ್‌ ಜಾರಕಿಹೊಳಿ ಅವರಿಗೆ ಸರಕಾರ ಮತ್ತು ಪಕ್ಷದ ಕಡೆಯಿಂದ ಏನು ತೊಂದರೆ ಮಾಡಿಲ್ಲ – ಸಚಿವ ಮಾಧು ಸ್ವಾಮಿ

Spread the love

ರಮೇಶ್‌ ಜಾರಕಿಹೊಳಿ ಅವರಿಗೆ ಸರಕಾರ ಮತ್ತು ಪಕ್ಷದ ಕಡೆಯಿಂದ ಏನು ತೊಂದರೆ ಮಾಡಿಲ್ಲ – ಸಚಿವ ಮಾಧು ಸ್ವಾಮಿ

ಉಡುಪಿ: ರಮೇಶ್‌ ಜಾರಕಿಹೊಳಿ ಅವರಿಗೆ ಸರಕಾರ ಮತ್ತು ಪಕ್ಷದ ಕಡೆಯಿಂದ ಏನು ತೊಂದರೆ ಮಾಡಿಲ್ಲ ಆಕಸ್ಮಿಕವಾದ ಘಟನೆಗೆ ಅವರು ಬಲಿಯಾಗಿದ್ದಾರೆ ಅಷ್ಟೇ ನಾವೆಲ್ಲ ಅವರ ಬಗ್ಗೆ ಅನುಕಂಪ ಇಟ್ಟುಕೊಂಡಿದ್ದೇವೆ ಎಂದು ರಾಜ್ಯ ಸಣ್ಣ ನೀರಾವರಿ ಸಚಿವ ಕೆ.ಸಿ.ಮಾಧುಸ್ವಾಮಿ ಹೇಳಿದ್ದಾರೆ.

ಅವರು ಭಾನುವಾರ ಉಡುಪಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿ ಇದೊಂದು ಕಾನೂನಾತ್ಮಕ ಮತ್ತು ನೈತಿಕ ಚಾರವಾಗಿದ್ದು, ನೈತಿಕವಾಗಿ ಹೊಣೆ ಹೊತ್ತು ಅವರು ರಾಜೀನಾಮೆ ನೀಡಿದ್ದಾರೆ.

ಕಾನೂನಾತ್ಮಕ ವಾಗಿಯೂ ಯಾವುದೇ ಸಮಸ್ಯೆ ಇದೆ ಅನಿಸಲ್ಲ ಸಮ್ಮತಿ ಯಿಂದ ನಡೆದ ದೈಹಿಕ ಸಂಪರ್ಕ ಅಪರಾಧ ಅಲ್ಲ ಹೀಗೆಂದು ಸುಪ್ರೀಂಕೋರ್ಟ್ ಹೇಳಿದೆ. ಆ ಹೆಣ್ಣುಮಗಳ ವರ್ತನೆ ನೋಡಿದರೆ ಇಚ್ಛೆಪಟ್ಟು ಹೋಗಿದ್ದಾರೆ ಅನ್ನೋ ಭಾವನೆ ಬರುತ್ತೆ ಹಾಗಾಗಿ ಜಾರಕಿಹೊಳಿಗೆ ಶಿಕ್ಷೆ ಆಗಲಾರದು ಅನಿಸುತ್ತೆ ಆದರೆ ಎಲ್ಲವನ್ನು ಎದುರಿಸಲೇಬೇಕು ಮತ್ತು ನ್ಯಾಯಾಲಯದಲ್ಲಿ ಪ್ರಕರಣ ಇದ್ದಾಗ ಯಾರನ್ನು ದೂರ ಸಾಧ್ಯವಿಲ್ಲ. ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡಬೇಕಾಗಿಲ್ಲ ಎಂದರು.

ಬಿಜೆಪಿಗೆ ಯಾರಾದರೂ ಬರುವುದಿದ್ದರೆ ಬರಬಹುದು ಅಲ್ಲದೆ ಬೇರೆ ಪಕ್ಷದಿಂದ ಬಿಜೆಪಿಗೆ ಬರುವುದಾದರೆ ಸ್ವಾಗತವಿದ್ದು, ವಿಸ್ತರಣೆ ರಾಜಕೀಯ ಎಲ್ಲಾ ಪಕ್ಷಗಳ ಉದ್ದೇಶ ಆಗಿರುತ್ತದೆ. ಕಾಂಗ್ರೆಸ್ ನಿಂದ ಯಾರಾದರೂ ಬರುವವರಿದ್ದರು ನಾವು ಸ್ವಾಗತಿಸುತ್ತೇವೆ ಎಂದರು.

ವ್ಯಾಕ್ಸಿನ್ ಭೋಗಸ್ ಎಂದಿರುವ ಡಿ.ಕೆ ಶಿವಕುಮಾರ್ ಆರೋಪಕ್ಕೆ ತಿರುಗೇಟು ನೀಡಿದ ಸಚಿವ ಮಾದುಸ್ವಾಮಿ ವ್ಯಾಕ್ಸಿನ್ ವಿಚಾರದಲ್ಲಿ ಮೋದಿಯನ್ನ ಟೀಕೆ ಮಾಡಿದರೆ ನಿಮಗೆ ಒಳ್ಳೇದಾಗಲ್ಲ. ದೇಶದಲ್ಲಿ 80 ಕೋಟಿ ಜನಕ್ಕೆ ಉಚಿತ ಲಸಿಕೆ ನೀಡಲಾಗುತ್ತಿದೆ ಕೇಂದ್ರ ಸರ್ಕಾರದ ಈ ನಿರ್ಧಾರಕ್ಕೆ ಬೆಲೆ ಕಟ್ಟಲು ಸಾಧ್ಯವಿಲ್ಲ. ರಾಜ್ಯ ಸರ್ಕಾರ 2000 ಕೋಟಿ ರುಪಾಯಿ ತೆಗೆದಿಟ್ಟಿದೆ. ಡಿಕೆಶಿ ಪಾಪದ ಮಾತಿನಿಂದ ಯಾರಿಗೂ ಒಳ್ಳೆಯದಾಗುವುದಿಲ್ಲ ಎಂದ ಸಚಿವ ಮಾಧು ಸ್ವಾಮಿ ಟೀಕೆ ಮಾಡುವುದನ್ನು ಮಾಡಿ ಅದು ನಿಮ್ಮ ಡ್ಯೂಟಿ ವಿರೋಧ ಪಕ್ಷದಲ್ಲಿ ನನಗಿಂತ ಚೆನ್ನಾಗಿ ಕೆಲಸ ಮಾಡಿದವರು ಯಾರು ಇಲ್ಲ ಎಂದರು.

ನೈಸರ್ಗಿಕ ಆಪತ್ತಿನ ಕಾಲದಲ್ಲಿ ಎಲ್ಲವನ್ನು ಟೀಕೆ ಮಾಡಬಾರದು ವ್ಯಾಕ್ಸಿನ್ ಉತ್ಪಾದನೆ ಮಾಡಲು ಕಂಪನಿಯವರಿಗೂ ಕಾಲಾವಕಾಶ ಬೇಕು ಮುಂದಿನ ಮೂರು ತಿಂಗಳಲ್ಲಿ ರಾಜ್ಯದಲ್ಲಿ ಲಸಿಕೆ ಅಭಿಯಾನ ಮುಗಿಯುತ್ತದೆ ಇದು ಡಿಕೆಶಿ ಅವರ ಬದುಕಿನ ಪ್ರಶ್ನೆ ಹೀಗಾಗಿ ವಿರೋಧ ಮಾಡುತ್ತಾರೆ ಎಂದರು.


Spread the love