ರಷ್ಯಾ-ಉಕ್ರೇನ್ ಯುದ್ಧ: ರಷ್ಯಾದ ಗುಂಡಿನ ದಾಳಿಯಲ್ಲಿ ಕರ್ನಾಟಕ ಮೂಲದ ನವೀನ್ ಸಾವು

Spread the love

ರಷ್ಯಾ-ಉಕ್ರೇನ್ ಯುದ್ಧ: ರಷ್ಯಾದ ಗುಂಡಿನ ದಾಳಿಯಲ್ಲಿ ಕರ್ನಾಟಕ ಮೂಲದ ನವೀನ್ ಸಾವು

ಖಾರ್ಕಿವ್(ಉಕ್ರೇನ್): ರಷ್ಯಾ ಸೇನೆ ಉಕ್ರೇನ್ ನ ಸಾರ್ವಜನಿಕ ಪ್ರದೇಶಗಳ ಮೇಲೆ ದಾಳಿ ನಡೆಸುತ್ತಿದ್ದು ಈ ದಾಳಿಯಲ್ಲಿ ಕರ್ನಾಟಕ ಮೂಲದ ನವೀನ್ ಮೃತಪಟ್ಟಿದ್ದಾರೆ.

ಖಾರ್ಕಿವ್ ನಲ್ಲಿ ಐವರ ಸ್ನೇಹಿತರ ಜೊತೆ ನವೀನ್ ತಂಗಿದ್ದರು. ಆದರೆ ಇಂದು ಬೆಳಗ್ಗೆ ತಿಂಡಿ ತರಲು ಹೊರ ಹೋಗಿದ್ದಾಗ ರಷ್ಯಾ ಸೇನೆಯ ದಾಳಿಯಲ್ಲಿ ಬಲಿಯಾಗಿದ್ದಾರೆ ಎನ್ನಲಾಗಿದೆ.

ಹಾವೇರಿ ಮೂಲದ ನವೀನ್ ವಿದ್ಯಾಭ್ಯಾಸಕ್ಕಾಗಿ ಕಳೆದ ನಾಲ್ಕು ವರ್ಷಗಳಿಂದ ಉಕ್ರೇನ್ ನ ಖಾರ್ಕಿವ್ ನಲ್ಲಿ ವಾಸವಾಗಿದ್ದರು. ನವೀನ್ ಸಾವಿನ ವಿಚಾರವಾಗಿ ವಿದೇಶಾಂಗ ಸಚಿವಾಲಯ ಟ್ವೀಟ್ ಮೂಲಕ ಸ್ಪಷ್ಟಪಡಿಸಿದೆ. ಖಾರ್ಕಿವ್ ನ ಶವಾಗಾರದಲ್ಲಿ ನವೀನ್ ಮೃತದೇಹ ಇಡಲಾಗಿದೆ.

ಉಕ್ರೇನ್ ನಲ್ಲಿ ಮೃತ ಪಟ್ಟ ರಾಜ್ಯದ ಯುವಕ: ಪೋಷಕರಿಗೆ ಕರೆ ಮಾಡಿ ಸಾಂತ್ವನ ಹೇಳಿದ ಸಿಎಂ ಬಸವರಾಜ ಬೊಮ್ಮಾಯಿ

ಉಕ್ರೇನ್ ನಲ್ಲಿ ಮೃತಪಟ್ಟ ಹಾವೇರಿ ಜಿಲ್ಲೆಯ ಯುವಕ ನವೀನ್ ಅವರ ತಂದೆ ಶೇಖರಗೌಡ ಅವರೊಂದಿಗೆ ದೂರವಾಣಿ ಮಾತನಾಡಿದ ಮುಖ್ಯಮಂತ್ರಿಗಳು, ಅವರ ಕುಟುಂಬಕ್ಕೆ ಸಾಂತ್ವನ ಹೇಳಿದರು.

ನವೀನ್ ಪಾರ್ಥಿವ ಶರೀರವನ್ನು ರಾಜ್ಯಕ್ಕೆ ತರಲು ಸಾಧ್ಯವಿರುವ ಎಲ್ಲ ಪ್ರಯತ್ನ ಮಾಡುವುದಾಗಿ ತಿಳಿಸಿದ ಅವರು, ಈ ಸಂಬಂಧ ವಿದೇಶಾಂಗ ಸಚಿವಾಲಯದ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಲಾಗುತ್ತಿದೆ ಎಂದು ತಿಳಿಸಿದರು.

ಮಗನ ಬಗ್ಗೆ ಮಾಹಿತಿ ನೀಡಿದ ಶೇಖರಗೌಡ ಗ್ಯಾನ ಗೌಡರ್ ಇಂದು ಮುಂಜಾನೆ ತಮ್ಮ ಮಗ ದೂರವಾಣಿ ಕರೆ ಮಾಡಿದ್ದ. ಪ್ರತಿ ದಿನ ಎರಡು ಮೂರು ಬಾರಿ ದೂರವಾಣಿ ಮೂಲಕ ಮಾತಾಡುತ್ತಿದ್ದ ಎಂದು ವಿವರಿಸಿದರು.

ನವೀನ್ ಸಾವು ಅತ್ಯಂತ ದುರಾದೃಷ್ಟಕರ. ಭಗವಂತ ನವೀನ್ ಆತ್ಮಕ್ಕೆ ಶಾಂತಿ ನೀಡಲಿ. ಕುಟುಂಬದವರಿಗೆ ಈ ನೋವು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುವು ದಾಗಿ ಮುಖ್ಯಮಂತ್ರಿಗಳು ತಿಳಿಸಿದ್ದಾರೆ.


Spread the love