ರಸ್ತೆ ಅಪಘಾತದಲ್ಲಿ ಕೊಡಗು ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಮೃತ್ಯು

Spread the love

ರಸ್ತೆ ಅಪಘಾತದಲ್ಲಿ ಕೊಡಗು ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಮೃತ್ಯು

ಮಡಿಕೇರಿ: ಮಡಿಕೇರಿಯ ತಾಳತ್ತಮನೆ ಬಳಿ ನಡೆದ ರಸ್ತೆ ಅಪಘಾತದಲ್ಲಿ ಕೊಡಗು ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಂಪಾಜೆಯ ಬಾಲಚಂದ್ರ ಕಳಗಿ(42) ಮೃತಪಟ್ಟಿದ್ದಾರೆ.

ಸಂಜೆ ತಮ್ಮ ಓಮ್ನಿ ವಾಹನದಲ್ಲಿ ಸಂಪಾಜೆಗೆ ತೆರಳುತ್ತಿದ್ದಾಗ ಎದುರಿನಿಂದ ಬಂದ ಲಾರಿ ಢಿಕ್ಕಿ ಹೊಡೆದ ಪರಿಣಾಮ ತೀವ್ರವಾಗಿ ಗಾಯಗೊಂಡ ಕಳಗಿ ಅವರನ್ನು ಮಡಿಕೇರಿಯ ಜಿಲ್ಲಾ ಆಸ್ಪತ್ರೆಗೆ ಕರೆ ತರುವ ಸಂದರ್ಭ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಮೃತರು ತಂದೆ, ತಾಯಿ, ಅಕ್ಕ, ಭಾವ, ಪತ್ನಿಯನ್ನು ಅಗಲಿದ್ದಾರೆ.


Spread the love