ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಸ್ಕೂಟರ್ ಸವಾರ ಮೃತ್ಯು

Spread the love

ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಸ್ಕೂಟರ್ ಸವಾರ ಮೃತ್ಯು

ಮಂಗಳೂರು: ಕಾರು ಮತ್ತು ಸ್ಕೂಟರ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಮೃತಪಟ್ಟವರನ್ನು ಮುಹಮ್ಮದ್ ಮಹಾಝ್ ಬಟ್ಟಪ್ಪಾಡಿ (24) ಎಂದು ಗುರುತಿಸಲಾಗಿದೆ.

ಜನವರಿ 5ರಂದು ರಾತ್ರಿ ಮುಹಮ್ಮದ್ ಮಹಾಝ್ ಅವರು ಮಂಗಳೂರಿನಲ್ಲಿ ಕ್ಯಾಟರಿಂಗ್ ಕೆಲಸ ಮುಗಿಸಿ ತಮ್ಮ ಸ್ಕೂಟರ್‌ನಲ್ಲಿ ಊರಿಗೆ ಮರಳುತ್ತಿದ್ದರು. ಬೀರಿ ಸಮೀಪ ತಲಪಾಡಿ ಕಡೆಗೆ ಹೋಗುತ್ತಿದ್ದ ಕಾರು ಮತ್ತು ಇವರ ಸ್ಕೂಟರ್ ನಡುವೆ ಡಿಕ್ಕಿ ಸಂಭವಿಸಿದೆ.

ಡಿಕ್ಕಿಯ ರಭಸಕ್ಕೆ ರಸ್ತೆಗೆ ಎಸೆಯಲ್ಪಟ್ಟ ಮಹಾಝ್ ಅವರಿಗೆ ತೀವ್ರ ಸ್ವರೂಪದ ಗಾಯಗಳಾಗಿದ್ದವು. ತಕ್ಷಣವೇ ಅವರನ್ನು ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು, ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಮತ್ತೊಂದು ಖಾಸಗಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು. ಆದರೆ, ಚಿಕಿತ್ಸೆಗೆ ಸ್ಪಂದಿಸದೆ ಅವರು ಜನವರಿ 9ರ ತಡರಾತ್ರಿ ಮೃತಪಟ್ಟಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ಮಂಗಳೂರು ದಕ್ಷಿಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love
Subscribe
Notify of

0 Comments
Inline Feedbacks
View all comments