Home Mangalorean News Kannada News ರಾಘವೇಂದ್ರ ಸಹಕಾರ ಬ್ಯಾಂಕ್ ಹಗರಣ, ಮಾಜಿ ಸಿಇಒ ವಾಸುದೇವ ಮಯ್ಯ ಆತ್ಮಹತ್ಯೆ

ರಾಘವೇಂದ್ರ ಸಹಕಾರ ಬ್ಯಾಂಕ್ ಹಗರಣ, ಮಾಜಿ ಸಿಇಒ ವಾಸುದೇವ ಮಯ್ಯ ಆತ್ಮಹತ್ಯೆ

Spread the love

ರಾಘವೇಂದ್ರ ಸಹಕಾರ ಬ್ಯಾಂಕ್ ಹಗರಣ, ಮಾಜಿ ಸಿಇಒ ವಾಸುದೇವ ಮಯ್ಯ ಆತ್ಮಹತ್ಯೆ

ಬೆಂಗಳೂರು: ರಾಘವೇಂದ್ರ ಕೋ ಅಪರೇಟಿವ್ ಬ್ಯಾಂಕ್ ಹಗರಣ ಪ್ರಕರಣದ ಪ್ರಮುಖ ಆರೋಪಿ ಬ್ಯಾಂಕ್ ನ‌ ಮಾಜಿ ಸಿಇಒ ಹಾಗೂ ಹಾಲಿ ಸೂಪರ್ ವೈಸರ್ ವಾಸುದೇವ್ ಮಯ್ಯ ಇಂದು ಆತ್ಮಹತ್ಯೆಗೆ ಶರಣಾಗಿದ್ದಾರೆ.

ವಾಸುದೇವ್ ಮಯ್ಯ ಸಂಜೆ ಮನೆ ಮುಂದೆ ಕಾರಿನಲ್ಲಿ ಕುಳಿತು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದೆ. ಸುಬ್ರಮಣ್ಯಪುರ ಠಾಣಾ ವ್ಯಾಪ್ತಿಯ ಚಿಕ್ಕಲಸಂಧ್ರದಲ್ಲಿ ಘಟನೆ ನಡೆದಿದ್ದು, ಪೊಲೀಸರು ಈಗಾಗಲೇ ಸ್ಥಳಕ್ಕೆ ದೌಡಾಯಿಸಿದ್ದಾರೆ. ಅಲ್ಲದೆ, ಡಿಸಿಪಿ ರೋಹಿಣಿ ಕಟೋಜಾ ಸಪೇಟ್‌ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ

ಗುರುರಾಘವೇಂದ್ರ ಕೋ ಆಪರೇಟಿವ್ ಸೊಸೈಟಿ ಯಿಂದ 1400 ಕೋಟಿ ಅವ್ಯವಹಾರ ನಡೆದಿದೆ ಎಂಬ ಆರೋಪ ಇದೆ. ಇದೇ ಕಾರಣಕ್ಕೆ ಎಸಿಬಿ ಅಧಿಕಾರಿಗಳು ಕಳೆದ ಜೂನ್ 18 ರಂದು ಬಸವನಗುಡಿ ಗುರುರಾಘವೇಂದ್ರ ಕೋಆಪರೇಟಿವ್ ಸೊಸೈಟಿ, ಬ್ಯಾಂಕ್, ಕೇಂದ್ರ ಕಚೇರಿ, ಚಿಕ್ಕಲಸಂದ್ರದಲ್ಲಿರುವ ವಾಸುದೇವ ಮಯ್ಯಾ, ಹಾಗೂ ಅಧ್ಯಕ್ಷ ರಾಮಕೃಷ್ಣ ಮನೆ ಮೇಲೆ ದಾಳಿ ನಡೆಸಿದ್ದರು. ಅಲ್ಲದೆ, ಪ್ರಮುಖ ಸಾಕ್ಷ್ಯಾಧಾರಗಳನ್ನು ವಶಪಡಿಸಿಕೊಳ್ಳಲಾಗಿತ್ತು.


Spread the love

Exit mobile version