ರಾಜಕೀಯ ಹೊರತಾಗಿ ನಾನು-ಯಡಿಯೂರಪ್ಪ ಒಳ್ಳೆಯ ಗೆಳೆಯರು: ಮಾಜಿ ಸಿಎಂ ಸಿದ್ದರಾಮಯ್ಯ

Spread the love

ರಾಜಕೀಯ ಹೊರತಾಗಿ ನಾನು-ಯಡಿಯೂರಪ್ಪ ಒಳ್ಳೆಯ ಗೆಳೆಯರು: ಮಾಜಿ ಸಿಎಂ ಸಿದ್ದರಾಮಯ್ಯ

ಹುಬ್ಬಳ್ಳಿ: ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಇಲ್ಲಿನ ವಿಮಾನ ನಿಲ್ದಾಣದಲ್ಲಿ ದಿಢೀರ್ ಮುಖಾಮುಖಿಯಾಗಿದ್ದು, ಉಭಯ ನಾಯಕರು ಪರಸ್ಪರ ಹಸ್ತಲಾಘವ ಮಾಡಿ ಉಭಯ ಕುಶಲೋಪರಿ ವಿಚಾರಿಸಿದ್ದಾರೆ.

ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಉಭಯ ನಾಯಕರು ಪ್ರಚಾರ ಕಾರ್ಯಕ್ಕೆ ಮುಂದಾಗಿದ್ದಾರೆ. ಬೆಳಗಾವಿಯ ಖಾನಾಪುರಕ್ಕೆ ತೆರಳಲು ಸಿದ್ದರಾಮಯ್ಯ ಮತ್ತು ಹಾವೇರಿಯಲ್ಲಿ ಏರ್ಪಡಿಸಿರುವ ವಿಜಯಸಂಕಲ್ಪ ಯಾತ್ರೆಗೆ ತೆರಳಲು ಬಿಎಸ್‌ವೈ ಒಂದೇ ವಿಮಾನದಲ್ಲಿ ಬೆಂಗಳೂರಿನಿಂದ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಿದರು.

ಬಿಎಸ್‌ವೈ ಮುಖಾಮುಖಿಯ ಬಗ್ಗೆ ಸಿದ್ದರಾಮಯ್ಯ, ‘ರಾಜಕೀಯ ಜೀವನದ ಹೊರತಾಗಿ ಯಡಿಯೂರಪ್ಪನವರು ಮತ್ತು ನಾನು ಒಳ್ಳೆಯ ಗೆಳೆಯರು. ಇಲ್ಲಿ ಅಧಿಕಾರ, ಅಂತಸ್ತು ಯಾವುದೂ ಶಾಶ್ವತವಲ್ಲ, ಕೊನೆಗೊಂದು ದಿನ ಗೆಲ್ಲುವುದು ನಮ್ಮ ನಡುವಿನ ಮಾನವೀಯ ಸಂಬಂಧಗಳು ಮಾತ್ರ. ಇಂದು ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಆಕಸ್ಮಿಕವಾಗಿ ಮಾಜಿ ಸಿಎಂ ಬಿಎಸ್‌ವೈ ಅವರನ್ನು ಭೇಟಿಯಾದ ಕ್ಷಣ’ ಎಂದು ಟ್ವಿಟ್ ಮಾಡಿದ್ದಾರೆ.


Spread the love