ರಾಜವಂಶಸ್ಥೆ ಪ್ರಮೋದಾದೇವಿ ದಸರಾಕ್ಕೆ ಆಹ್ವಾನ

Spread the love

ರಾಜವಂಶಸ್ಥೆ ಪ್ರಮೋದಾದೇವಿ ದಸರಾಕ್ಕೆ ಆಹ್ವಾನ

ಮೈಸೂರು: ಸಂಪ್ರದಾಯದಂತೆ ವಿಶ್ವವಿಖ್ಯಾತ ನಾಡಹಬ್ಬ ದಸರಾ ಉತ್ಸವಕ್ಕೆ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಅವರನ್ನು ಸರ್ಕಾರದ ವತಿಯಿಂದ ಆಹ್ವಾನಿಸಲಾಯಿತು.

ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್, ಸಂಸದ ಪ್ರತಾಪ್ ಸಿಂಹ, ವಿಧಾನಪರಿಷತ್ ಸದಸ್ಯ ಮಂಜೇಗೌಡ, ಮೇಯರ್ ಶಿವಕುಮಾರ್, ಉಪಮೇಯರ್ ಜಿ.ರೂಪಾ, ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ಸೇರಿದಂತೆ ನಾನಾ ನಿಗಮ ಮಂಡಳಿಗಳ ಅಧ್ಯಕ್ಷರು ಸೇರಿದಂತೆ ಹಲವರು ಅವರ ಖಾಸಗಿ ನಿವಾಸಕ್ಕೆ ಭೇಟಿ ನೀಡಿ ಸಾಂಪ್ರದಾಯಿಕವಾಗಿ ಫಲಪುಷ್ಪ ತಾಂಬೂಲ ನೀಡಿ ಉತ್ಸವಕ್ಕೆ ಆಹ್ವಾನಿಸಿದರಲ್ಲದೆ, ಅವರನ್ನು ಸನ್ಮಾನಿಸಿ ಸರ್ಕಾರದಿಂದ ನೀಡಲಾಗುವ ಗೌರವಧನ ನೀಡಿದರು.

ಬಳಿಕ ಮಾತನಾಡಿದ ಸಚಿವರು ದಸರಾ ಉತ್ಸವಕ್ಕೆ ವ್ಯವಸ್ಥಿತವಾಗಿ ಸಿದ್ಧತೆಗಳು ನಡೆಯುತ್ತಿದೆ. ದಸರಾ ಉತ್ಸವಕ್ಕೆ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಅವರನ್ನು ಆಹ್ವಾನಿಸಲಾಗಿದೆ. ದಸರಾಗೆ ಸಂಪೂರ್ಣ ಸಹಕಾರ ನೀಡುವುದಾಗಿ ಅವರು ಹೇಳಿದರು. ಯುವ ದಸರಾಗೆ ನಟ ಕಿಚ್ಚ ಸುದೀಪ್ ಅವರು ಆಗಮಿಸುತ್ತಿಲ್ಲ. ಅನಿವಾರ್ಯ ಕಾರಣಗಳಿಂದ ಫಾಲ್ಗೊಳ್ಳಲು ಸಾಧ್ಯವಾಗುತ್ತಿಲ್ಲ ಎಂದು ತಿಳಿಸಿದ್ದಾರೆ. ಹೀಗಾಗಿ ಪರ್ಯಾಯ ವ್ಯವಸ್ಥೆ ಮಾಡಲಾಗುತ್ತಿರುವುದಾಗಿ ತಿಳಿಸಿದರು.

ಸೋಮವಾರ ರಾಷ್ಟ್ರಪತಿಗಳು ಚಾಮುಂಡಿಬೆಟ್ಟದಲ್ಲಿ ದಸರಾ ಉದ್ಘಾಟನೆ ಮಾಡಲಿದ್ದಾರೆ. ವೇದಿಕೆಯಲ್ಲಿ 13 ಆಸನಗಳಿರಲಿವೆ. ರಾಷ್ಟ್ರಪತಿಗಳು, ರಾಜ್ಯಪಾಲರು, ಮುಖ್ಯಮಂತ್ರಿಗಳು, ಆರು ಕೇಂದ್ರ ಸಚಿವರು, ನಾಲ್ವರು ರಾಜ್ಯ ಸಚಿವರು ವೇದಿಕೆಯಲ್ಲಿ ಉಪಸ್ಥಿತರಿರುವರು ಎಂದು ತಿಳಿಸಿದರು.


Spread the love