ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆ ದಕ ಜಿಲ್ಲಾ ಸಂಯೋಜಕರಾಗಿ   ಶುಭೋದಯ ಆಳ್ವ ನೇಮಕ

Spread the love

ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆ ದಕ ಜಿಲ್ಲಾ ಸಂಯೋಜಕರಾಗಿ   ಶುಭೋದಯ ಆಳ್ವ ನೇಮಕ

ಮಂಗಳೂರು: ಕಾಂಗ್ರೆಸ್ ಪಕ್ಷದ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆ ದಕ್ಷಿಣ ಕನ್ನಡ ಜಿಲ್ಲಾ ಸಂಯೋಜಕರಾಗಿ ಭಾರತ ರಾಷ್ಟ್ರೀಯ ಕಾಂಗ್ರೆಸ್ ದಕ್ಷಿಣ ಕನ್ನಡ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕಂಚಿಲ  ಶುಭೋದಯ ಆಳ್ವ ಅವರನ್ನು ನೇಮಕ ಮಾಡಲಾಗಿದೆ.

ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ.ಖಾದರ್, ಮಾಜಿ ಸಚಿವ ಬಿ.ರಮಾನಾಥ ರೈ, ಡಿಸಿಸಿ ಅಧ್ಯಕ್ಕ್ಷ ಹರೀಶ್ ಕುಮಾರ್ ಅವರ ಶಿಶುಫಾರಸಿನ ಮೇರೆಗೆ, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಆದೇಶದಂತೆ ಕೆಪಿಸಿಸಿ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆ ಅಧ್ಯಕ್ಷ ರಂಗಸ್ವಾಮಿ ಅವರು ನೇಮಕ ಮಾಡಿದ್ದಾರೆ.

ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯು ಕಾಂಗ್ರೆಸ್ ಪಕ್ಷದ ಅವಿಬಾಜ್ಯ ಅಂಗವಾಗಿದ್ದು ಅಧಿಕಾರ, ವಿಕೇಂದ್ರಿಕರಣಕ್ಕೆ ಬೆಂಬಲ ಹಾಗೂ ಪಂಚಾಯತ್ ಪ್ರತಿನಿಧಿಗಳ ಸಬಲೀಕರಣದ ಉದ್ದೇಶದೊಂದಿಗೆ ಕಾರ್ಯವೆಸಗುತ್ತಿದೆ. ವಿದ್ಯಾರ್ಥಿ ದೆಸೆಯಿಂದಲೇ ಕಾಂಗ್ರೆಸ್ ಪಕ್ಷದಲ್ಲಿ ಗುರುತಿಸಕೊಂಡಿರುವ ಶುಭೋದಯ ಆಳ್ವ ಅವರು ಎನ್ ಎಸ್ ಯುಐ, ಯುವಕಾಂಗ್ರೆಸ್ ಮತ್ತು ಕಾಂಗ್ರೆಸ್ ಸಂಘಟನೆಯಲ್ಲಿ ಸಕ್ರಿಯವಾಗಿ ದುಡಿದು ಪಕ್ಷದಲ್ಲಿ ಹಲವು ಹುದ್ದೆಗಳಲ್ಲಿ ಕೆಲಸ ಮಾಡಿದ್ದಾರೆ. ಮಂಗಳೂರು ವಿವಿ ಆಲ್ ಕಾಲೇಜು ಸ್ಟೂಡೆಂಟ್ ಯೂನಿಯನ್ ಮುಖಂಡರಾಗಿ ಕೂಡ ದುಡಿದವರು. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಾಜಿ ಮುಖ್ಯಮಂತ್ರಿ ಎಂ.ವೀರಪ್ಪ ಮೊಯ್ಲಿ ಅವರ ಮಾರ್ಗದರ್ಶನದ ಗಾಂಧಿ ನಡಿಗೆ ಪಕ್ಷ ಸಂಘಟನೆಯ ಕಾರ್ಯಕ್ರಮದಲ್ಲೂ ಸಂಯೋಜಕರಾಗಿ, ನವಮಂಗಳೂರು ಬಂದರು ಮಂಡಲಿ ಟ್ರಸ್ಟಿಯಾಗಿ ಕೆಲಸ ಮಾಡಿದ್ದಾರೆ.


Spread the love