ರಾಜೀವ ನಗರದಲ್ಲಿ ಕಾಂಗ್ರೆಸ್ ಗ್ಯಾರಂಟಿ ಕಾರ್ಯಕ್ರಮದ ಬ್ಯಾನರ್ ಹರಿದ ಕಿಡಿಗೇಡಿಗಳು

Spread the love

ರಾಜೀವ ನಗರದಲ್ಲಿ ಕಾಂಗ್ರೆಸ್ ಗ್ಯಾರಂಟಿ ಕಾರ್ಯಕ್ರಮದ ಬ್ಯಾನರ್ ಹರಿದ ಕಿಡಿಗೇಡಿಗಳು

ಉಡುಪಿ: ಕಾಂಗ್ರೆಸ್ ಪಕ್ಷದ ವತಿಯಿಂದ 80 ಬಡಗಬೆಟ್ಟು ಗ್ರಾಮದ ರಾಜೀವನಗರದಲ್ಲಿ ಅಳವಡಿಸಿದ್ದ ಪಕ್ಷದ ಗ್ಯಾರಂಟಿ ಕಾರ್ಯಕ್ರಮಗಳ ಕಾಪುವಿಗಾಗಿ ಕಾಂಗ್ರೆಸ್ ಬ್ಯಾನರೊಂದನ್ನು ಕಿಡಿಗೇಡಿಗಳು ಮಾರ್ಚ್ 10 ರ ಮಧ್ಯರಾತ್ರಿ ಹರಿದು ಹಾಕಿದ ಘಟನೆ ನಡೆದಿದೆ.

ಮುಂಬರುವ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಘೋಷಣೆ ಮಾಡಿರುವ ಗ್ಯಾರಂಟಿ ಯೋಜನೆಗಳಾದ ಗೃಹಲಕ್ಷ್ಮೀ, ಅನ್ನಭಾಗ್ಯ, ಉಚಿತ ವಿದ್ಯುತ್ ಯೋಜನೆಯ ಜೊತೆಗೆ ಕಾಪುವಿಗಾಗಿ ಕಾಂಗ್ರೆಸ್ ಎಂಬ ಕಾರ್ಯಕ್ರಮದ ಬ್ಯಾನರನ್ನು ರಾಜೀವನಗರದ ಬಸ್ ನಿಲ್ದಾಣದ ಬಳಿ ಅಳವಡಿಸಲಾಗಿತ್ತು. ಈ ಬ್ಯಾನರನ್ನು ಯಾರೋ ದುಷ್ಕರ್ಮಿಗಳು ಹರಿದು ಹಾಕಿದ್ದಾರೆ

ಕಿಡಿಗೇಡಿಗಳು ಬ್ಯಾನರ್ ಹರಿಯುವ ದ್ರಶ್ಯ ಪಕ್ಕದ ಅಂಗಡಿಯೊಂದರ ಸಿಸಿಟಿವಿಯಲ್ಲಿ ಸೆರೆಯಾಗಿದ್ದು ದ್ರಶ್ಯ ಅಸ್ಪಷ್ಟವಾಗಿದ್ದು ಕಿಡಿಗೇಡಿಗಳ ಗುರುತು ಪತ್ತೆಯಾಗಿಲ್ಲ. ಕಿಡಿಗೇಡಿಗಳ ವರ್ತನೆಗೆ ಸ್ಥಳೀಯ ಕಾಂಗ್ರೆಸ್ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ.


Spread the love

Leave a Reply

Please enter your comment!
Please enter your name here