ರಾಜ್ಯದಲ್ಲಿ ಆರು ಹೊಸ ನಗರ ನಿರ್ಮಾಣ: ಸಿಎಂ ಬೊಮ್ಮಾಯಿ

Spread the love

ರಾಜ್ಯದಲ್ಲಿ ಆರು ಹೊಸ ನಗರ ನಿರ್ಮಾಣ: ಸಿಎಂ ಬೊಮ್ಮಾಯಿ

ಬೆಂಗಳೂರು: ರಾಜ್ಯದಲ್ಲಿ ಆರು ಹೊಸ ನಗರಗಳ ನಿರ್ಮಾಣ ಮಾಡಲಾಗುತ್ತಿದ್ದು, ಮೈಸೂರು, ಮಂಗಳೂರು , ಕಲಬುರ್ಗಿ, ಹುಬ್ಬಳ್ಳಿ ಧಾರವಾಡ, ಸುತ್ತ ಹೊಸ ನಗರಗಳು ನಿರ್ಮಾಣವಾಗಲಿವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ವರ್ಚುಯಲ್ ಆಗಿ ಉದ್ಘಾಟಿಸಿದ ಬೆಂಗಳೂರು ಟೆಕ್ ಸಮ್ಮಿಟ್ ರಜತ ಮಹೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿ, ಬೆಂಗಳೂರಿನ ಪಕ್ಕ ಹೊಸ ನಗರ ನಿರ್ಮಾಣ ಮಾಡಲಾಗುತ್ತದೆ. ಜ್ಞಾನ, ವಿಜ್ಞಾನ ಹಾಗೂ ಟೆಕ್ ಸಿಟಿ ನಿರ್ಮಾಣ ಮಾಡಲಾಗುತ್ತಿದ್ದು, ಇದು ವಿಮಾನ ನಿಲ್ದಾಣಕ್ಕೆ ಹತ್ತಿರವಿರಲಿದೆ. ಆರು ತಿಂಗಳೊಳಗೆ ಈ ನಗರ ನಿರ್ಮಾಣ ದ ಬಗ್ಗೆ ಘೋಷಣೆ ಮಾಡಲಿದ್ದು, ಯೋಜನೆಯನ್ನು ರೂಪಿಸಲಾಗುವುದು. ಸ್ಟಾರ್ಟ್ ಅಪ್ ಗಳನ್ನು ಪ್ರೋತ್ಸಾಹಿಸಲು ಅನೇಕ ಕಾರ್ಯಕ್ರಮಗಳಿದ್ದು, ಸರ್ಕಾರದ ವತಿಯಿಂದ ಇನ್ನಷ್ಟು ಕಾರ್ಯಕ್ರಮ ರೂಪಿಸಬೇಕಿದೆ. ಸ್ಟಾರ್ಟ್ ಅಪ್ ಪಾರ್ಕ್ ನಿರ್ಮಾಣಕ್ಕೆ ತೀರ್ಮಾನಿಸಿದ್ದು ಇದೂ ಕೂಡ ಆರು ತಿಂಗಳಲ್ಲಿ ಸ್ಥಾಪಿಸಲಾಗುವುದು ಎಂದರು.

ಉದ್ಯಮಿಗಳು ಆವಿಷ್ಕಾರ ಮಾಡುವುದರ ಜತೆಗೆ ಅಭಿವೃದ್ದಿಗೆ ಪೂರಕ ಕೆಲಸ ಮಾಡಿ ಸರ್ಕಾರಕ್ಕೂ ಅದಾಯ ತರುವ ಕೆಲಸ ಮಾಡಬೇಕು ಎಂದು ಕರೆ ನೀಡಿದರಲ್ಲದೆ, ಸೃಜನಶೀಲತೆ ಹಲವಾರು ಆಯಾಮಗಳನ್ನು ಒಳಗೊಂಡಿದೆ. ನಾವು ಜಾಗತಿಕವಾಗಿ ಸಾಕಷ್ಟು ಸವಾಲುಗಳನ್ನು ಎದುರಿಸುತ್ತಿದ್ದೇವೆ. ಜಗತ್ತು ಸಮಸ್ಯೆಗಳಿಂದ ಮುಳುಗುತ್ತಿದೆ. ಹಣಕಾಸು ಮೂಲಗಳು ಪ್ರತಿ ಕ್ಷಣವೂ ಇಳಿಮುಖವಾಗುತ್ತಿದೆ. ನಾವು ಪರಿಹಾರ ಕಂಡುಕೊಳ್ಳದಿದ್ದರೆ ಭವಿಷ್ಯದಲ್ಲಿ ಸಮಸ್ಯೆ ಎದರಿಸಬೇಕಾಗುತ್ತದೆ.

ಮೈಸೂರು ಮಹಾರಾಜರು ವಿಜ್ಞಾನ ತಂತ್ರಜ್ಞಾನಕ್ಕೆ , ಶಿಕ್ಷಣಕ್ಕೆ ಸಾಕಷ್ಟು ಕೊಡುಗೆ ನೀಡಿದ್ದಾರೆ. ನಂತರ ಉದ್ಯಮಕ್ಕೆ ಆದ್ಯತೆ ನೀಡಿದ್ದಾರೆ. ಈಗ ಐಟಿ ಬಿಟಿ ಬಂದಿದೆ. ಬೆಂಗಳೂರಿಗೆ ಬಂದವರು ಐಟಿ ಬಿಟಿ ಕಂಪನಿಗಳಿಗೆ ಭೇಟಿ ನೀಡುತ್ತಾರೆ. ಮೊದಲು ಸಂಪತ್ತು ಉಳ್ಳವರ ಕಾಲವಿತ್ತು. ಈಗ ಜ್ಞಾನ ಇರುವವರ ಕಾಲ. ಬೆಂಗಳೂರಿಗೆ ಪ್ರತಿದಿನ 5000 ಕ್ಕೂ ಹೆಚ್ಚು ಇಂಜನೀಯರ್ ಗಳು ಬಂದು ಹೋಗುತ್ತಾರೆ. ಬೆಂಗಳೂರಿನಲ್ಲಿ ಸುಮಾರು 400 ಆರ್ ಆಂಡ್ ಡಿ ಸೆಂಟರ್ ಇವೆ. ಬಿಯಾಂಡ್ ಬೆಂಗಳೂರು ಸಾಕಾರಗೊಳಿಸಲು ಸರ್ಕಾರ ಎಲ್ಲ ರೀತಿಯ ಸಹಕಾರ ನೀಡುತ್ತೇವೆ. ಮೈಸೂರು, ಮಂಗಳೂರು, ಹುಬ್ಬಳ್ಳಿ ಧಾರವಾಡ ಕಡೆಗಳಲ್ಲಿ ಐಟಿ ಉದ್ಯಮಕ್ಕೆ ಆದ್ಯತೆ ನೀಡುತ್ತೇವೆ. ಮುಂದಿನ 10 ವರ್ಷದಲ್ಲಿ ನಗರೀಕರಣ ಹೆಚ್ಚಳವಾಗಲಿದೆ. ಭಾರತದಲ್ಲಿ ಶೇ 40ರಷ್ಟು ನಗರೀಕರಣವಾಗಲಿದೆ. ಹೀಗಾಗಿ ಐಟಿ ಬಿಟಿ ಕಂಪನಿಗಳು ಸರಳ ನಗರೀಕರಣ ಜೀವನ ನಿರ್ವಹಣೆಗೆ ತಂತ್ರಜ್ಞಾನ ಅಭಿವೃದ್ದಿ ಪಡಿಸಲು ಕರೆ ನೀಡಿದರು.

ಸಮಾರಂಭದಲ್ಲಿ ಫಿನ್ ಲ್ಯಾಂಡ್‍ನ ವಿಜ್ಞಾನ ಮತ್ತು ಸಂಸ್ಕøತಿ ಸಚಿವ ಪೆಟ್ರಿ ಹೊನ್ ಕೊನೆನ್, ಯುನೈಟೆಡ್ ಎಮಿರೈಟ್ಸ್ ನ ಡಿಜಿಟಲ್ ಇಕಾಣಮಿ ಸಚಿವ ಓಮರ್ ಬಿನ್ ಸುಲ್ತಾನ್ ಅಲ್ ಒಲಾಮ, ಆಸ್ಟ್ರೇಲಿಯಾ ವಿದೇಶಾಂಗ ವ್ಯವಹಾರಗಳ ಸಹಾಯಕ ಸಚಿವ ಟಿಮ್ ವ್ಯಾಟ್ ಐ.ಟಿ ಬಿ. ಟಿ ಸಚಿವರಾದ ಡಾ: ಸಿ.ಎನ್.ಅಶ್ವತ್ಥ್ ನಾರಾಯಣ್, ಬಯೋ ಟೆಕ್ನಾಲಜಿ ವಿಷನ್ ಗ್ರೂಪ್ ಅಧ್ಯಕ್ಷೆ ಡಾ. ಕಿರಣ್ ಮಜುಂದಾರ್ ಶಾ, ಸ್ಟಾರ್ಟ್ ಅಪ್ ವಿಷನ್ ಗ್ರೂಪ್ ಅಧ್ಯಕ್ಷ ಪ್ರಶಾಂತ್ ಪ್ರಕಾಶ್, ಮಾಹಿತಿ ತಂತ್ರಜ್ಞಾನ ವಿಷನ್ ಗ್ರೂಪ್ ಅಧ್ಯಕ್ಷ ಕ್ರಿಸ್ ಗೋಪಾಲ ಕೃಷ್ಣನ್, ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ಐ.ಟಿ. ಬಿಟಿ ಅಪರ ಮುಖ್ಯ ಕಾರ್ಯದರ್ಶಿ ಡಾ. ಇ.ವಿ.ರಮಣ ರೆಡ್ಡಿ, ಐ.ಟಿ. ಬಿಟಿ ಇಲಾಖೆ ನಿರ್ದೇಶಕಿ ಮೀನಾ ನಾಗರಾಜ್ ಮತ್ತಿತರರು ಉಪಸ್ಥಿತರಿದ್ದರು.


Spread the love

Leave a Reply

Please enter your comment!
Please enter your name here