
ರಾಜ್ಯದಲ್ಲಿ ಜೂನ್ 14ರ ವರೆಗೆ ಲಾಕ್‌ಡೌನ್ ವಿಸ್ತರಣೆ: : ಸಿಎಂ ಯಡಿಯೂರಪ್ಪ ಘೋಷಣೆ
ಬೆಂಗಳೂರು: ರಾಜ್ಯದಲ್ಲಿ ಕೋವಿಡ್ 19 ಸೋಂಕು ನಿಯಂತ್ರಿಸುವ ಕಾರಣದಿಂದ ಈ ಹಿಂದೆ ಜಾರಿಮಾಡಿದ್ದ ಲಾಕ್ ಡೌನ್ ನ್ನು ಮುಂದುವರಿಸಲು ತೀರ್ಮಾನಿಸಲಾಗಿದೆ ಎಂದು ಬಿ ಎಸ್ ವೈ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜೂನ್ 14ರವರೆಗೆ ಮುಂದುವರಿಸಲಾಗುವುದು ಎಂದು ಹೇಳಿದರು. ಇದೇ ವೇಳೆ ಎರಡನೇ ಕೋವಿಡ್ ಪ್ಯಾಕೇಜ್ ಘೋಷಣೆ ಮಾಡಿದರು. ಈ ಬಾರಿ ಸಿಎಂ 500 ಕೋಟಿ ರೂ ಪ್ಯಾಕೇಜ್ ಘೋಷಣೆ ಮಾಡಿದರು.
ನೇಕಾರರು, ಚಲನಚಿತ್ರ ಕಲಾವಿದರು, ಮೀನುಗಾರರು, ಮುಜುರಾಯಿ ಇಲಾಖೆಯ ಅರ್ಚಕರು ಮತ್ತು ಅಡುಗೆ ಸಿಬ್ಬಂದಿ, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರಿಗೆ ತಲಾ ಮೂರು ಸಾವಿರ ರೂ ಪರಿಹಾರ ನೀಡುವುದಾಗಿ ಸಿಎಂ ಘೋಷಣೆ ಮಾಡಿದರು.
ಅನುದಾನ ರಹಿತ ಖಾಸಗಿ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಶಿಕ್ಷಕರಿಗೆ ತಲಾ ಐದು ಸಾವಿರ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ. ಶಾಲಾ ಮಕ್ಕಳಿಗೆ ಹೆಚ್ಚುವರಿಯಾಗಿ ಜೂನ್ ಮತ್ತು ಜುಲೈನಲ್ಲಿ ಹಾಲಿನ ಪುಡಿ ವಿತರಣೆ ಮಾಡಲಾಗುವುದು. ಎಂಎಸ್‍ಎಂಇ ಹೊರತುಪಡಿಸಿ ಉಳಿದ ಕೈಗಾರಿಕೆಗಳ ಮೇ, ಜೂನ್ ಗಳಲ್ಲಿ ಮಾಸಿಕ ವಿದ್ಯುತ್ ಬಿಲ್ ಕಟ್ಟುವುದನ್ನು ಸರ್ಕಾರ ಮುಂದೂಡಿದೆ ಎಂದು ಸಿಎಂ ಹೇಳಿದರು.