ರಾಜ್ಯದಲ್ಲಿ ಬಿಜೆಪಿಗೆ ಅಧಿಕಾರ ಸಿಗದಿರಲು  ದೇವರ ಶಾಪ ಕಾರಣ; ವಿನಯ ಕುಮಾರ್ ಸೊರಕೆ

Spread the love

ರಾಜ್ಯದಲ್ಲಿ ಬಿಜೆಪಿಗೆ ಅಧಿಕಾರ ಸಿಗದಿರಲು  ದೇವರ ಶಾಪ ಕಾರಣ; ವಿನಯ ಕುಮಾರ್ ಸೊರಕೆ

ಪುತ್ತೂರು: ‘ರಾಜ್ಯದಲ್ಲಿ ಬಿಜೆಪಿ ಅತಿದೊಡ್ಡ ಪಕ್ಷವಾಗಿ ಮೂಡಿ ಬಂದು ಏನೇನೊ ಸರ್ಕಸ್ ಮಾಡಿದರೂ ಕೂಡ ಸರ್ಕಾರ ರಚಿಸಲು ಸಾಧ್ಯವಾಗಿಲ್ಲ. ಬಹುಷಃ ಅದಕ್ಕೆ ದೇವರ ಶಾಪವೇ ಕಾರಣ ಎಂದು ತೋರುತ್ತದೆ’ ಎಂದು ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಹೇಳಿದರು.

ಪುತ್ತೂರಿನನಲ್ಲಿ ರಂಜಾನ್ ಉಪವಾಸದ ಪ್ರಯುಕ್ತ ಬುಧವಾರ ಏರ್ಪಡಿಸಲಾಗಿದ್ದ 33ನೇ ವರ್ಷದ ಸರ್ವ ಧರ್ಮ ಇಫ್ತಾರ್ ಕೂಟದ ಸಭಾ ಕಾರ್ಯಕ್ರಮದಲ್ಲಿ ಅವರು ಮುಖ್ಯ ಅತಿಥಿಯಾಗಿ ಮಾತನಾಡಿದರು.

ಕರಾವಳಿಯ ಉಭಯ ಜಿಲ್ಲೆಗಳಲ್ಲಿ ಅಭಿವೃದ್ಧಿ ವಿಚಾರ ಚರ್ಚೆಯೇ ಆಗಲಿಲ್ಲ. ಅಪಪ್ರಚಾರ ಮಾಡಿ ಜನರ ಹಾದಿ ತಪ್ಪಿಸಲಾಯಿತು ಎಂದು ಹೇಳಿದ ಸೊರಕೆ, ಆತ್ಮವಿಶ್ವಾಸ ಕಳೆದುಕೊಳ್ಳುವ ಸಂಗತಿಯೇ ಇಲ್ಲ ಎಂದವರು ನುಡಿದರು.

ಮಾಜಿ ಶಾಸಕಿ ಶಕುಂತಳಾ ಶೆಟ್ಟಿ ಮಾತನಾಡಿ, ‘ವಿನಯ ಕುಮಾರ್ ಸೊರಕೆ ಅವರು ಪುತ್ತೂರಿನಲ್ಲಿ ಶಾಸಕರಾಗಿದ್ದ ಸಂದರ್ಭ ಈ ಸೌಹಾರ್ದ ಇಫ್ತಾರ್ ಕೂಟ ಆರಂಭಿಸಿದ್ದರು. ಈಗಲೂ ಮುಂದುವರಿಸುತ್ತಿದ್ದಾರೆ ಎಂದರು. ಜಿಲ್ಲಾ ಪಂಚಾಯಿತಿ ಸದಸ್ಯ ಎಂ.ಎಸ್. ಮಹಮ್ಮದ್ ಮಾತನಾಡಿದರು.

ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಹಮ್ಮದ್ ಬಡಗನ್ನೂರು ಪ್ರಾಸ್ತಾವಿಕ ಮಾತುಗಳನ್ನಾಡಿದರು. ವಿಟ್ಲ ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮುರಳೀಧರ ರೈ ಮಠಂತಬೆಟ್ಟು, ಮಾಜಿ ಅಧ್ಯಕ್ಷ ಪ್ರವೀಣ್‍ಚಂದ್ರ ಆಳ್ವಾ, ಧಾರ್ಮಿಕ ಮುಖಂಡರಾದ ಹುಸೇನ್ ದಾರಿಮಿ ರೆಂಜಲಾಡಿ, ಎಸ್. ಬಿ. ದಾರಿಮಿ. ಜೆಡಿಎಸ್ ಮುಖಂಡ ಇಬ್ರಾಹಿಂ ಗೋಳಿಕಟ್ಟೆ, ಕಾಂಗ್ರೆಸ್ ಮುಖಂಡರಾದ ಕೃಷ್ಣ ಪ್ರಸಾದ್ ಆಳ್ವಾ, ಜೋಕಿಂ ಡಿಸೋಜ, ದುರ್ಗಾ ಪ್ರಸಾದ್ ರೈ ಕುಂಬ್ರ, ಪ್ರಸಾದ್ ಕೌಶಲ್ ಶೆಟ್ಟಿ, ನೂರುದ್ದೀನ್ ಸಾಲ್ಮರ, ವೇದನಾಥ ಸುವರ್ಣ, ನಿರ್ಮಲ್ ಕುಮಾರ್ ಜೈನ್, ಉದ್ಯಮಿ ಕೆ.ಪಿ. ಅಹಮ್ಮದ್ ಹಾಜಿ ಉಪಸ್ಥಿತರಿದ್ದರು. ಇಸಾಕ್ ಸಾಲ್ಮರ ಕಾರ್ಯಕ್ರಮ ನಿರ್ವಹಿಸಿದರು.


Spread the love