ರಾಜ್ಯದ ಜನರು ಸಂಕಷ್ಟದಲ್ಲಿರುವಾಗ ಬಿ.ಜೆ.ಪಿ.ನಾಯಕರು ಅಧಿಕಾರಕ್ಕಾಗಿ ಕಿತ್ತಾಡುತ್ತಿದ್ದಾರೆ — ಶೌವಾದ್ ಗೂನಡ್ಕ

Spread the love

ರಾಜ್ಯದ ಜನರು ಸಂಕಷ್ಟದಲ್ಲಿರುವಾಗ ಬಿ.ಜೆ.ಪಿ.ನಾಯಕರು ಅಧಿಕಾರಕ್ಕಾಗಿ ಕಿತ್ತಾಡುತ್ತಿದ್ದಾರೆ — ಶೌವಾದ್ ಗೂನಡ್ಕ

ಕೊರೋನಾ ಲಾಕ್ ಡೌನ್ ನಿಂದಾಗಿ ರಾಜ್ಯದ ಬಡ ಹಾಗೂ ಮಧ್ಯಮ ವರ್ಗದ ಜನರು ಆರ್ಥಿಕ ಸಂಕಷ್ಟದಲ್ಲಿದ್ದಾರೆ ಆದರೆ ಸರ್ಕಾರವನ್ನು ನಡೆಸುತ್ತಿರುವ ಬಿ.ಜೆ.ಪಿ.ಯ ನಾಯಕರು ಅಧಿಕಾರಕ್ಕಾಗಿ ಕಿತ್ತಾಡುತ್ತಿದ್ದಾರೆ ಜನರ ಕಷ್ಟಗಳಿಗೆ ಸ್ಪಂದಿಸಬೇಕಾದ ಸರ್ಕಾರವು ನಾಯಕತ್ವ ಬದಲಾವಣೆ, ಸಚಿವ ಸಂಪುಟ ಪುನರ್ರಚನೆಯ ವಿಚಾರದಲ್ಲಿ ಹಲವು ಬಣಗಳಾಗಿ ಹೋಳಾಗಿವೆ ಎಂದು ಕೆ.ಪಿ.ಸಿ.ಸಿ.ಮಾಧ್ಯಮ ವಕ್ತಾರರಾದ ಶೌವಾದ್ ಗೂನಡ್ಕರವರು ಸರ್ಕಾರವನ್ನು ಟೀಕಿಸಿದ್ದಾರೆ.

ರಾಜ್ಯದ ಜನರ ಪರವಾಗಿ ದೆಹಲಿಗೆ ತೆರಳದ ವಿಜಯೇಂದ್ರರವರು ತಮ್ಮ ತಂದೆಯ ಅಧಿಕಾರ ಎಲ್ಲಿ ಹೋಗುತ್ತದೋ ಎಂಬ ಭೀತಿಯಲ್ಲಿ ದೆಹಲಿಯಲ್ಲೇ ಬೀಡು ಬಿಟ್ಟಿದ್ದಾರೆ. ಇವರಿಗೆ ರಾಜ್ಯದ ಹಿತಕ್ಕಿಂತ ಅಧಿಕಾರವೇ ಮುಖ್ಯವಾಗಿದೆ. ಪ್ರತಿಪಕ್ಷಗಳ ಒತ್ತಾಯಕ್ಕೆ ಮಣಿದು 1,250 ಕೋಟಿ ರೂ.ಗಳ ಪ್ಯಾಕೇಜ್ ಘೋಷಣೆ ಮಾಡಿ ಸರ್ಕಾರವು ಕೈತೊಳೆದುಕೊಂಡಿದೆ ಆದರೆ ಅದು ಅರ್ಹ ಫಲಾನುಭವಿಗಳಿಗೆ ತಲುಪುವ ಯಾವ ಸಾಧ್ಯತೆಯು ಇಲ್ಲ. ಕೋವಿಡ್ ಟೆಸ್ಟ್ ಗಳನ್ನು ಕಡಿತಗೊಳಿಸಿ ಕೊರೋನಾ ಸೋಂಕಿತರ ಸಂಖ್ಯೆ ಕಡಿಮೆಯಾಗಿದೆ ಎಂದು ಬಿಂಬಿಸಲಾಗುತ್ತಿದೆ ಆ ಮೂಲಕ ಸರ್ಕಾರವು ಜನರ ಜೀವದ ಮೇಲೆ ಚೆಲ್ಲಾಟವಾಡುತ್ತಿದೆ. ಆರ್ಥಿಕವಾಗಿ ಸಂಕಷ್ಟಕ್ಕೀಡಾಗಿರುವ ಕುಟುಂಬಗಳಿಗೆ ಇನ್ನೂ ಹೆಚ್ಚಿನ ಪ್ಯಾಕೇಜ್ ಗಳನ್ನು ಘೋಷಿಸಬೇಕಾಗಿದೆ ಆದರೆ ಮುಖ್ಯಮಂತ್ರಿಗಳು ಇದರ ಬಗ್ಗೆ ಚಿಂತಿಸದೆ ತಮ್ಮ ಅಧಿಕಾರವನ್ನು ಉಳಿಸಿಕೊಳ್ಳುವ ಬಗ್ಗೆ ಚಿಂತಿಸುತ್ತಿದ್ದಾರೆ. ಜವಬ್ದಾರಿಯುತ ಪ್ರತಿಪಕ್ಷವಾಗಿದ್ದುಕೊಂಡು ಕಾಂಗ್ರೆಸ್ ಕಾರ್ಯಕರ್ತರು ರಾಜ್ಯಾದ್ಯಂತ ಲಾಕ್ ಡೌನ್ ನಿಂದ ಸಂಕಷ್ಟಕ್ಕೀಡಾಗಿರುವ ಜನರ ನೋವಿಗೆ ಸ್ಪಂದಿಸುತ್ತಿದ್ದಾರೆ. ಸರ್ಕಾರವು ಮಾಡಬೇಕಾದ ಕೆಲಸವನ್ನು ರಾಜ್ಯದಲ್ಲಿ ಪ್ರತಿಪಕ್ಷವು ಮಾಡುತ್ತಿದೆ ಎಂದು ಶೌವಾದ್ ಗೂನಡ್ಕರವರು ಹೇಳಿದ್ದಾರೆ.


Spread the love