ರಾಜ್ಯದ ಮುಜರಾಯಿ ದೇವಸ್ಥಾನಗಳಲ್ಲಿ ಮೊಬೈಲ್ ಫೋನ್ ಬಳಕೆಗೆ ನಿಷೇಧ

Spread the love

ರಾಜ್ಯದ ಮುಜರಾಯಿ ದೇವಸ್ಥಾನಗಳಲ್ಲಿ ಮೊಬೈಲ್ ಫೋನ್ ಬಳಕೆಗೆ ನಿಷೇಧ

ಬೆಂಗಳೂರು: ರಾಜ್ಯ ಸರ್ಕಾರದ ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಗೆ ಬರುವ ಎಲ್ಲಾ ದೇವಾಲಯಗಳಲ್ಲಿ ಮೊಬೈಲ್ ಫೋನ್ ಬಳಕೆಗೆ ನಿಷೇಧ ಹೇರಿ ಆದೇಶ ಹೊರಡಿಸಲಾಗಿದೆ.

ಸರ್ಕಾರದ ಆದೇಶದದಲ್ಲಿ ಏನಿದೆ? :

ದೇವಾಲಯಗಳ ಆವರಣದಲ್ಲಿ ಇತ್ತೀಚಿನ ದಿನಗಳಲ್ಲಿ ಮೊಬೈಲ್ ಫೋನ್ ಬಳಕೆ ಹೆಚ್ಚಾಗುತ್ತಿದೆ. ಭಕ್ತರು ದೇವಾಲಯಕ್ಕೆ ಆಗಮಿಸಿದಾಗ ಮೊಬೈಲ್ ಫೋನ್ ಬಳಕೆಯ ಶಬ್ದಗಳಿಂದ ಸಿಬ್ಬಂದಿಗೂ ಹಾಗೂ ದೇವರ ದರ್ಶನಕ್ಕೆ ಬರುವ ಭಕ್ತರಿಗೂ ಏಕ ಮನಸ್ಸಿನಿಂದ ಧ್ಯಾನ ಪೂಜಾದಿಗಳನ್ನು ನಡೆಸಲು ತೊಂದರೆಯಾಗುತ್ತಿದೆ.

ಈ ಹಿನ್ನೆಲೆಯಲ್ಲಿ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಗೆ ಒಳಪಡುವ ದೇವಾಲಯಗಳಲ್ಲಿ ದೇವರ ದರ್ಶನಕ್ಕೆ ಬರುವ ಭಕ್ತಾದಿಗಳು ದೇವರ ದರ್ಶನದ ಸಮಯದಲ್ಲಿ ತಮ್ಮ ಮೊಬೈಲ್ ಫೋನ್ಗಳನ್ನು ಸ್ವಿಚ್ ಆಫ್ ಮಾಡಿ, ದೇವರ ದರ್ಶನ ಮಾಡುವಂತೆ ಸೂಚಿಸಲಾಗಿದೆ ಎಂದು ಕಂದಾಯ ಇಲಾಖೆ (ಧಾರ್ಮಿಕ ದತ್ತಿ) ಅಧೀನ ಕಾರ್ಯದರ್ಶಿ ಕೆ.ಪಿ. ಹೇಮಂತರಾಜು ಆದೇಶ ಹೊರಡಿಸಿದ್ದಾರೆ.


Spread the love