ರಾಜ್ಯಮಟ್ಟದ ಹೊನಲು ಬೆಳಕಿನ ಖೋ-ಖೋ ಪಂದ್ಯಾಟ: ಆಳ್ವಾಸ್ ಚಾಂಪಿಯನ್

Spread the love

ರಾಜ್ಯಮಟ್ಟದ ಹೊನಲು ಬೆಳಕಿನ ಖೋ-ಖೋ ಪಂದ್ಯಾಟ: ಆಳ್ವಾಸ್ ಚಾಂಪಿಯನ್

ಮೂಡುಬಿದಿರೆ: ಹಾವೇರಿಯ ಹಂಸಬಾವಿಯಲ್ಲಿ ರಾಜ್ಯದ ಕೃಷಿ ಸಚಿವರಾದ ಬಿ.ಸಿ.ಪಾಟೀಲ್‍ರವರ ಹುಟ್ಟುಹಬ್ಬದ ಪ್ರಯುಕ್ತ ಪುರುಷರ ಮತ್ತು ಮಹಿಳೆಯರ ಹೊನಲು ಬೆಳಕಿನ ಖೋ-ಖೋ ಚಾಂಪಿಯನ್ಶಿಪ್ ಇತ್ತೀಚೆಗೆ ನಡೆಯಿತು.

ಪುರುಷರ ವಿಭಾಗದಲ್ಲಿ ಆಳ್ವಾಸ್ ತಂಡವು ಬೆಂಗಳೂರಿನ ಯಂಗ್ ಪಯೋನಿಯರ್ಸ್ ಸ್ಪೋಟ್ರ್ಸ್ ಕ್ಲಬ್ ತಂಡವನ್ನು ಮಣಿಸಿ ಪ್ರಥಮ ಸ್ಥಾನವನ್ನು ಪಡೆಯಿತು, ವೈಯಕ್ತಿಕ ಪ್ರಶಸ್ತಿ ವಿಭಾಗದಲ್ಲಿ ಆಳ್ವಾಸ್ ತಂಡದ ಮಹೇಶ್.ಪಿ ಸರ್ವೋತ್ತಮ ಪ್ರಶಸ್ತಿಯನ್ನು ಪಡೆದುಕೊಂಡರು.

ಅದೇ ರೀತಿ ಮಹಿಳೆಯರ ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ಮೈಸೂರಿನ ತಂಡವು ಹಾಗೂ ದ್ವಿತೀಯ ಸ್ಥಾನವನ್ನು ಆಳ್ವಾಸ್ ತಂಡವು ಪಡೆಯಿತು. ಮಹಿಳೆಯರ ವಿಭಾಗದ ವೈಯಕ್ತಿಕ ಪ್ರಶಸ್ತಿಯಲ್ಲಿ ಉತ್ತಮ ಹಿಡಿತಗಾರ್ತಿ ಪ್ರಶಸ್ತಿಯನ್ನು ಆಳ್ವಾಸ್‍ನ ಆಶಾ ಪಡೆದುಕೊಂಡರು.

ಈ ಪಂದ್ಯಾಕೂಟದಲ್ಲಿ ಪುರುಷರ ವಿಭಾಗದಲ್ಲಿ ಒಟ್ಟು 32 ತಂಡಗಳು ಹಾಗೂ ಮಹಿಳೆಯರ ವಿಭಾಗದಲ್ಲಿ 16 ತಂಡಗಳು ಭಾಗವಹಿಸಿದ್ದವು.

ವಿದ್ಯಾರ್ಥಿಗಳ ಸಾಧನೆಯನ್ನು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ ಎಂ ಮೋಹನ್ ಆಳ್ವ ಶ್ಲಾಘಿಸಿದ್ದಾರೆ.


Spread the love

Leave a Reply

Please enter your comment!
Please enter your name here