ರಾಜ್ಯಸಭೆ ಚುನಾವಣೆ: ಬಿಜೆಪಿ ಶಾಸಕ ಎಸ್​​ಟಿ ಸೋಮಶೇಖರ್​ ಅಡ್ಡ ಮತದಾನ

Spread the love

ರಾಜ್ಯಸಭೆ ಚುನಾವಣೆ: ಬಿಜೆಪಿ ಶಾಸಕ ಎಸ್​​ಟಿ ಸೋಮಶೇಖರ್​ ಅಡ್ಡ ಮತದಾನ
 

ಬೆಂಗಳೂರು: ಇಂದು (ಫೆ.27) ಬೆಳಿಗ್ಗೆಯಿಂದಲೇ ರಾಜ್ಯಸಭೆ ಚುನಾವಣೆ (ಮತದಾನ ಆರಂಭವಾಗಿದೆ. ನಾಲ್ಕು ಸ್ಥಾನಗಳಿಗೆ ಐವರು ಅಭ್ಯರ್ಥಿಗಳು ಸ್ಪರ್ಧೆ ಮಾಡಿದ್ದಾರೆ.

ಬಿಜೆಪಿ ಶಾಸಕ ಎಸ್​.ಟಿ.ಸೋಮಶೇಖರ್ ಕಾಂಗ್ರೆಸ್ ಪರ ಮತ ಚಲಾಯಿಸುವ ಮೂಲಕ ಅಡ್ಡ ಮತದಾನ ಮಾಡಿದ್ದಾರೆ. ಮಾತದಾನ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಆತ್ಮಸಾಕ್ಷಿಯ ಮತ ಚಲಾವಣೆ ‌ಮಾಡಿದ್ದೇನೆ ಎಂದು ಹೇಳಿದರು.

ಶಾಸಕ ಎಸ್​ಟಿ ಸೋಮಶೇಖರ್ ಅಡ್ಡ ಮತದಾನ ಮಾಡಿದ ಹಿನ್ನೆಲೆಯಲ್ಲಿ ವಿಪಕ್ಷ ನಾಯಕ ಆರ್​ ಅಶೋಕ್ ಕೊಠಡಿಯಲ್ಲಿ ಸಭೆ ಸೇರಲಾಗಿದೆ. ಸಭೆಯಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್​​ಡಿ ಕುಮಾರಸ್ವಾಮಿ “ತಲೆ ಕೆಡಿಸಿಕೊಳ್ಳುವುದು ಬೇಡ, ಅದು ಗೊತ್ತಿದ್ದ ವಿಷಯ” ಎಂಬ ಸಮಾಧಾನದ ಮಾತುಗಳನ್ನು ಆಡಿದ್ದಾರೆ.

ಹೆಬ್ಬಾರ್​​ನಿಂದಲೂ ಬಿಜೆಪಿಗೆ ಶಾಕ್​ ಸಾಧ್ಯತೆ
ಇನ್ನು ಯಲ್ಲಾಪುರ ಕ್ಷೇತ್ರದ ಬಿಜೆಪಿ ಶಾಸಕ ಶಿವರಾಮ ಹೆಬ್ಬಾರ್​​ ಕೂಡ ಅಡ್ಡ ಮತದಾನ ಮಾಡುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಶಿವರಾಮ ಹೆಬ್ಬಾರ್​ ಅವರು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್​ ಸಂಪರ್ಕದಲ್ಲಿದ್ದಾರೆ ಎಂಬ ಮಾತುಗಳು ಕೇಳಿಬಂದಿದ್ದವು. ಹೀಗಾಗಿ ಶಿವರಾಮ ಹೆಬ್ಬಾರ್​ ಕಾಂಗ್ರೆಸ್​ ಅಭ್ಯರ್ಥಿಗೆ ಮತಹಾಕು ಸಾಧ್ಯತೆ ಇದೆ ಎನ್ನಲಾಗಿದೆ.


Spread the love