ರಾಜ್ಯ ಮಟ್ಟದ ಕುಸ್ತಿ ಪಂದ್ಯಾಟದಲ್ಲಿ ಸಾಧನೆ ಮೆರೆದ ಹೆಮ್ಮಾಡಿ  ಜನತಾ ಕಾಲೇಜಿನ ವಿದ್ಯಾರ್ಥಿಗಳು

Spread the love

ರಾಜ್ಯ ಮಟ್ಟದ ಕುಸ್ತಿ ಪಂದ್ಯಾಟದಲ್ಲಿ ಸಾಧನೆ ಮೆರೆದ ಹೆಮ್ಮಾಡಿ  ಜನತಾ ಕಾಲೇಜಿನ ವಿದ್ಯಾರ್ಥಿಗಳು

ಕುಂದಾಪುರ: ಗದಗ ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆ ಹಾಗೂ HCES ಪದವಿಪೂರ್ವ ಕಾಲೇಜು ಗದಗ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ರಾಜ್ಯ ಮಟ್ಟದ ಕುಸ್ತಿ ಪಂದ್ಯಾಟದಲ್ಲಿ ಉಡುಪಿ ಜಿಲ್ಲೆಯಿಂದ ಪ್ರತಿನಿಧಿಸಿದ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಪದಕ ಗಳಿಸಿದ್ದಾರೆ.

ಶ್ರೀಶ ಶೆಟ್ಟಿ ಪ್ರಥಮ ಪಿ.ಯು.ಸಿ 97ಕೆ.ಜಿ ಮೇಲ್ಪಟ್ಟು ವಿಭಾಗದಲ್ಲಿ ಬೆಳ್ಳಿ ಪದಕ, ಆರ್ಯ ಮೊಗವೀರ ದ್ವಿತೀಯ ಪಿ.ಯು‌‌.ಸಿ 92 ಕೆ.ಜಿ ವಿಭಾಗದಲ್ಲಿ ಕಂಚಿನ ಪದಕ, ಹಾಗೂ ರೋಹಿತ್ ದೇವಾಡಿಗ ಪ್ರಥಮ ಪಿ.ಯು.ಸಿ. 97ಕೆ.ಜಿ.ವಿಭಾಗದಲ್ಲಿ ಕಂಚಿನ ಪದಕ ಪಡೆದು ರಾಜ್ಯ ಮಟ್ಟದಲ್ಲಿ ಗುರುತಿಸಿಕೊಳ್ಳುವುದರ ಮೂಲಕ ಸಾಧನೆ ಮೆರೆದಿದ್ದಾರೆ.

ವಿದ್ಯಾರ್ಥಿಗಳ ಅದ್ಭುತ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ, ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.


Spread the love