ರಾಜ್ಯ ಸರಕಾರಿ ನೌಕರರ ಸಂಘದ ಪದಾಧಿಕಾರಿಗಳ ಚುನಾವಣೆಗೆ ತಡೆಯಾಜ್ಷೆ

ರಾಜ್ಯ ಸರಕಾರಿ ನೌಕರರ ಸಂಘದ ಪದಾಧಿಕಾರಿಗಳ ಚುನಾವಣೆಗೆ ತಡೆಯಾಜ್ಷೆ

ಮಂಗಳೂರು : ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಪದಾಧಿಕಾರಿಗಳ ಆಯ್ಕೆಗೆ ಜುಲೈ 11 ರಂದು ನಿಗದಿಯಾಗಿದ್ದ ಚುನಾವಣೆಗೆ ಮಂಗಳೂರಿನ ಪ್ರಧಾನ ಸಿವಿಲ್ ನ್ಯಾಯಾಲಯ ತಡೆಯಾಜ್ಞೆ ನೀಡಿದೆ.

ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿರುವ ಬಂದರು ಇಲಾಖೆಯ ನಿರಂಜನ ಮೂರ್ತಿ ಅವರು ನ್ಯಾಯಸಮ್ಮತವಾಗಿ ಚುನಾವಣೆ ಪ್ರಕ್ರಿಯೆ ನಡೆದಿಲ್ಲವೆಂದು ಜಿಲ್ಲಾ ಸಂಘ ಹಾಗೂ ಚುನಾವಣಾಧಿಕಾರಿಗಳ ವಿರುದ್ಧ ನ್ಯಾಯಾಲಯದಲ್ಲಿ ದಾವೆ ಹೂಡಿ, ಪದಾಧಿಕಾರಿಗಳ ಚುನಾವಣೆ ನಡೆಸದಂತೆ ಪ್ರತಿವಾದಿಗಳ ವಿರುದ್ಧ ಏಕಪಕ್ಷೀಯ ಮಧ್ಯಾಂತರ ತಡೆಯಾಜ್ಞೆ ಕೋರಿದ್ದರು. ನ್ಯಾಯಾಲಯವು ಪದಾಧಿಕಾರಿಗಳ ಚುನಾವಣೆ ನಡೆಸದಂತೆ ಮಧ್ಯಂತರ ನೀಡಿದೆ.

ತಡೆಯಾಜ್ಷೆಯ ಹಿನ್ನೆಲೆಯಲ್ಲಿ, ಚುನಾವಣೆಯು ನಡೆದು ನೂತನ ಪದಾಧಿಕಾರಿಗಳು ಆಯ್ಕೆಯಾಗುವವರೆಗೆ ಹಾಲಿ ಅಧ್ಯಕ್ಷರಾದ ಪ್ರಕಾಶ್ ನಾಯಕ್ ಅವರು ಸಂಘದ ಜಿಲ್ಲಾಧ್ಯಕ್ಷರಾಗಿ ಮುಂದುವರಿಯಲಿದ್ದಾರೆ.