ರಾಜ್ಯ ಸರಕಾರ ಬಿಲ್ ಪಾವತಿ ಬಾಕಿಯಿಂದ ಜಿಲ್ಲಾಸ್ಪತ್ರೆಯಲ್ಲಿ ಎಂ ಆರ್ ಐ ಸ್ಕ್ಯಾನಿಂಗ್ ಸೇವೆ ವ್ಯತ್ಯಯ: ಯಶ್ಪಾಲ್ ಸುವರ್ಣ

Spread the love

ರಾಜ್ಯ ಸರಕಾರ ಬಿಲ್ ಪಾವತಿ ಬಾಕಿಯಿಂದ ಜಿಲ್ಲಾಸ್ಪತ್ರೆಯಲ್ಲಿ ಎಂ ಆರ್ ಐ ಸ್ಕ್ಯಾನಿಂಗ್ ಸೇವೆ ವ್ಯತ್ಯಯ: ಯಶ್ಪಾಲ್ ಸುವರ್ಣ

ಉಡುಪಿ ಜಿಲ್ಲಾಸ್ಪತ್ರೆ ಸಹಿತ ರಾಜ್ಯದಾದ್ಯಂತ ಸ್ಕ್ಯಾನಿಂಗ್ ಹಾಗೂ ಎಂ ಆರ್ ಐ ಸೇವೆ ಗುತ್ತಿಗೆ ಪಡೆದ ಕಂಪೆನಿಗೆ ರಾಜ್ಯ ಸರ್ಕಾರ ಬಿಲ್ ಪಾವತಿಸಲು ಬಾಕಿ ಇಟ್ಟಿರುವ ಪರಿಣಾಮ ರೋಗಿಗಳಿಗೆ ಸೇವೆ ಸಿಗದೇ ಸಂಕಷ್ಟ ಎದುರಾಗಿದ್ದು, ರಾಜ್ಯ ಸರ್ಕಾರ ತಕ್ಷಣ ಸಮಸ್ಯೆ ಪರಿಹರಿಸುವಂತೆ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಆಗ್ರಹಿಸಿದ್ದಾರೆ.

ಉಡುಪಿ ಜಿಲ್ಲಾಸ್ಪತ್ರೆಯಲ್ಲಿ ತುರ್ತು ರೋಗಿಗಳಿಗೆ ಮಾತ್ರ ಎಂ ಆರ್ ಐ ಸೇವೆ ನೀಡುತ್ತಿದ್ದು, ಇತರ ರೋಗಿಗಳಿಗೆ ವೈದ್ಯರ ಸಲಹೆಯ ಮೇರೆಗೂ ಸ್ಕ್ಯಾನಿಂಗ್ ಸೇವೆ ನೀಡುತ್ತಿಲ್ಲ.

ಖಾಸಗಿ ಸಂಸ್ಥೆಗೆ 6 ತಿಂಗಳಿನಿಂದ ಬಿಲ್ ಪಾವತಿ ಬಾಕಿ ಇರುವ ಬಗ್ಗೆ ಸಂಸ್ಥೆ ಆರೋಪಿಸುತ್ತಿದ್ದು, ಸರಕಾರ ಆರೋಗ್ಯ ಸಂಬಂಧಿತ ಸೇವೆಗಳ ವಿಚಾರದಲ್ಲಿ ಎಂದಿಗೂ ರಾಜೀ ಮಾಡದೆ ಜನಸಾಮಾನ್ಯರಿಗೆ ಸಮಸ್ಯೆಯಾಗದಂತೆ ನೋಡಿಕೊಳ್ಳುವ ನಿಟ್ಟಿನಲ್ಲಿ ರಾಜ್ಯ ಸರಕಾರ ಆದ್ಯತೆಯ ಮೇರೆಗೆ ಕ್ರಮ ಕೈಗೊಳ್ಳಬೇಕು.

ರಾಜ್ಯ ಸರ್ಕಾರ ತಕ್ಷಣ ಖಾಸಗಿ ಸಂಸ್ಥೆಗೆ ಬಾಕಿ ಮೊತ್ತ ಪಾವತಿಸಿ ವ್ಯತ್ಯಯವಾಗಿರುವ ಸೇವೆಯನ್ನು ಪರಿಹರಿಸುವಂತೆ ಆರೋಗ್ಯ ಸಚಿವರಿಗೆ ಅಗ್ರಹಿಸುವುದಾಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Spread the love
Subscribe
Notify of

0 Comments
Inline Feedbacks
View all comments